ಬೀದರ್‌ | ಮನರೇಗಾ ಮಾನವ ದಿನ 200ಕ್ಕೆ ಹೆಚ್ಚಿಸಲು ಗ್ರಾಕೂಸ್‌ ಆಗ್ರಹ

Date:

ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್) ಜಿಲ್ಲಾ ಘಟಕದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬೀದರ್‌ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಮನರೇಗಾ ಯೋಜನೆಡಿಯಲ್ಲಿ ಗ್ರಾಮೀಣ ಭಾಗದ ಕಾರ್ಮಿಕರಿಗೆ 100 ದಿನಗಳ ಕೆಲಸದ ಗ್ಯಾರಂಟಿಯನ್ನು ನೀಡಿದೆ. ಇದರಿಂದ ಗ್ರಾಮೀಣ ಭಾಗದ ಕೊಟ್ಯಾಂತರ ಕಾರ್ಮಿಕರಿಗೆ ಬದುಕಿಗೆ ಆಧಾರವಾಗಿದೆ ಹಾಗೂ ನಗರಗಳಿಗೆ ವಲಸೆ ಹೋಗುವುದು ತಪ್ಪಿದೆ. ಆದರೆ ಇತ್ತಿಚಿನ ದಿನಗಳಲ್ಲಿ ಸರ್ಕಾರದ ಹೊಸ ನೀತಿಗಳ ಬದಲಾವಣೆಯಿಂದಾಗಿ ಕಾರ್ಮಿಕರಿಗೆ 100 ದಿನಗಳ ಖಾತ್ರಿ ಕೆಲಸ ಸರಿಯಾಗಿ ಸಿಗುತ್ತಿಲ್ಲʼ ಎಂದು ದೂರಿದರು.

ʼಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್‌ನಲ್ಲಿ ಮೀಸಲಿಡಬೇಕಾದ ಹಣ ಕೇಂದ್ರ ಸರಕಾರ ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿದೆ. ಕಾರ್ಮಿಕರಿಗೆ ನೂರು ದಿನಗಳ ಉದ್ಯೋಗ ಖಾತ್ರಿ ಕೆಲಸದ ಹಕ್ಕು ಕೇಂದ್ರ ಸರ್ಕಾರ ಕಿತ್ತುಕೊಳ್ಳುತ್ತಿದೆ. ಕೆಲಸ ಮಾಡಿದ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಕೂಲಿ ಪಾವತಿಯಾಗದ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ 2 ಲಕ್ಷ ಕೋಟಿ ಹಣ ಮೀಸಲಿಡಬೇಕು. ಈ ವರ್ಷ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸಿದ ಕಾರ್ಮಿಕರ ಬಾಕಿ ಕೂಲಿ ಹಣ ಕೂಡಲೇ ಬಿಡುಗಡೆಗೊಳಿಸಬೇಕುʼ ಎಂದು ಒತ್ತಾಯಿಸಿದರು.

    ʼಒಂದು ಕುಟುಂಬಕ್ಕೆ 100 ದಿನಗಳ ಬದಲು 200 ದಿನಗಳ ಕೆಲಸ ಖಾತ್ರಿಗೊಳಿಸಬೇಕು. ಕಾರ್ಮಿಕರಿಗೆ ಒಂದು ದಿನಕ್ಕೆ ಕನಿಷ್ಠ ವೇತನ 600 ನಿಗದಿಗೊಳಿಸಬೇಕು. ಕೆಲಸದ ವೇಳೆ ಮರಣ ಹೊಂದಿದ ಕಾರ್ಮಿಕರಿಗೆ ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು.

      ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಲ್ಲಾ ರಾಜ್ಯಗಳ ಕಾರ್ಮಿಕರು ಡಿಸೆಂಬರ್ 5 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲಿಸಿ ಹಾಗೂ ನಮ್ಮ ಬೇಡಿಕೆ ಈಡೇರಿಸಬೇಕೆಂದು ಈ ಮೂಲಕ ಒತ್ತಾಯಿಸಲಾಗುತ್ತಿದೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

      ಈ ಸುದ್ದಿ ಓದಿದ್ದೀರಾ? ಒಂದು ಕುಟುಂಬಕ್ಕೆ 100 ದಿನಗಳ ಬದಲಾಗಿ 200 ದಿನಗಳ ಕೆಲಸ ಖಾತ್ರಿಗೊಳಿಸಬೇಕು. ಕಾರ್ಮಿಕರಿಗೆ ಒಂದು ದಿನಕ್ಕೆ ಕನಿಷ್ಠ ವೇತನ 600 ನೀಡಬೇಕು.

      ಈ ಸಂದರ್ಭದಲ್ಲಿ ಗ್ರಾಕೂಸ್ ಸಂಘಟನೆಯ ಪ್ರಮುಖರಾದ ಸಪ್ನಾದೀಪ, ಗೀತಾ ಡಿಗಾರೆ, ರೇಷ್ಮಾ, ಸುಶೀಲಾ, ರೇಖಾ, ಅನ್ನಪೂರ್ಣ, ರಾಜಕುಮಾರ್ ಡಿಗಾರೆ, ಫಿಲೋಮನ್, ಸುಶೀಲಾ, ಕಲಾವತಿ ಸೇರಿದಂತೆ ಇತರರಿದ್ದರು.

      eedina
      ಈ ದಿನ ಡೆಸ್ಕ್‌
      Website |  + posts

      ಪೋಸ್ಟ್ ಹಂಚಿಕೊಳ್ಳಿ:

      ಪೋಸ್ಟ್ ಹಂಚಿಕೊಳ್ಳಿ:

      ಈ ಹೊತ್ತಿನ ಪ್ರಮುಖ ಸುದ್ದಿ

      ವಿಡಿಯೋ

      ಇದೇ ರೀತಿಯ ಇನ್ನಷ್ಟು ಲೇಖನಗಳು
      Related

      ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

      ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

      ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

      ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

      ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

      ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...