ಸೋಮವಾರಪೇಟೆ | ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಗ್ರಾ.ಪಂ. ಅಧ್ಯಕ್ಷೆ

Date:

ಕೊಡಗು ಜಿಲ್ಲೆ, ಸೋಮವಾರ ಪೇಟೆ ತಾಲ್ಲೂಕು, ಶನಿವಾರ ಸಂತೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್. ಸುಧಾ ಈರೇಶ್ ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

- Advertisement -

ಕಾಮಗಾರಿ ವೆಚ್ಚ ₹14,70,000 ರೂಪಾಯಿ ಬಿಲ್ ಮಾಡಲು ಗುತ್ತಿಗೆದರಾರು ಕೋರಿದಾಗ, ಸಹಿ ಹಾಕಲು ₹25,000 ರೂಪಾಯಿ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಂ. ಸುಧಾ ಈರಯ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗುತ್ತಿಗೆದಾರರ ಸಹಾಯಕ ಭರತ್ ದಿನಾಂಕ-06-10-2025 ರಂದು ಲೋಕಾಯುಕ್ತ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಖಚಿತ ಮಾಹಿತಿ ಅನುಸರಿಸಿ, ಅಪರ ಪೊಲೀಸ್ ಮಹಾ ನಿರ್ದೇಶಕರಾದ ಮನೀಶ್ ಬಿ. ಕರ್ಬಿಕರ್, ಪೊಲೀಸ್ ಮಹಾ ನಿರೀಕ್ಷಕರಾದ ಸುಬ್ರಮಣ್ಯರಾವ್ ಹಾಗೂ ಮೈಸೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ. ಜೆ. ಉದೇಶ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಲೋಕೇಶ್, ವೀಣಾ ನಾಯಕ್ ಹಾಗೂ ಸಿಬ್ಬಂದಿಯೊಡನೆ ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಸೌಜನ್ಯ ಕೊಲೆ ಪ್ರಕರಣ; ‘ನ್ಯಾಯಕ್ಕಾಗಿ ಜನಾಗ್ರಹ’

ಇದೇ ವೇಳೆ ಗುತ್ತಿಗೆದಾರ ಹಮೀದ್ ರವರಿಂದ ₹25,000 ರೂಪಾಯಿ ಲಂಚ ಪಡೆವಾಗ ಹಣದ ಸಮೇತ ಲೋಕಾಯುಕ್ತ ಪೊಲೀಸರು ಅಧ್ಯಕ್ಷೆ ಸುಧಾ ಈರೇಶ್ ಅವರನ್ನು ವಶಕ್ಕೆ ಪಡೆದು ಅಪರಾಧ ಸಂಖ್ಯೆ 04/2025 ಕಲಂ 7(ಚಿ) 7ಓ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988 ರೀತ್ಯಾ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...