ರಾಯಚೂರು | ಒಂದೇ ರಸ್ತೆ ಅಭಿವೃದ್ಧಿಗೆ ಮೂರು ಬಾರಿ ಅನುದಾನ; ಸಾರ್ವಜನಿಕರ ಆರೋಪ

Date:

Advertisements

ದೇವದುರ್ಗ ತಾಲೂಕಿನ ಎನ್ ಗಣೇಕಲ್ ಗ್ರಾಮದಿಂದ ನೀಲಗಲ್ ಗ್ರಾಮದವರೆಗೆ ಕೈಗೊಂಡಿರುವ ಒಂದೇ ರಸ್ತೆ ಕಾಮಗಾರಿಗೆ ಎರಡು ಬಾರಿ ಭೂಮಿಪೂಜೆ ನೆರೆವೇರಿಸಿ ಕಾಮಗಾರಿ ಪ್ರಾರಂಭಿಸಿದ್ದೇವೆಂದು ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದರು.

“2017-18ನೇ ಸಾಲಿನಲ್ಲಿ ರಸ್ತೆ ಕಾಮಗಾರಿಗೆ ಒಟ್ಟು ₹70 ಲಕ್ಷ ಬಿಡುಗಡೆಯಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸದೆ ಕಳಪೆ ನಡೆಸಿ ಅರ್ಧಕ್ಕೆ ಬಿಟ್ಟಿದ್ದರು. ಬಳಿಕ ಅದೇ ರಸ್ತೆ ಕಾಮಗಾರಿಗೆ ಎರಡನೇ ಬಾರಿಗೆ ₹3.10 ಕೋಟಿ ಅನುದಾನ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿದೆ. ಹೀಗೆ ಒಂದೇ ರಸ್ತೆಗೆ ಎರಡು ಬಾರಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆಯಾದರೂ ಗುಣಮಟ್ಟದ ರಸ್ತೆ ನಿರ್ಮಿಸದೇ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಕೈಗೊಂಡು ಹಣ ಲೂಟಿ ಹೊಡೆದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದರು.

“ಇದೀಗ 2024-25ನೇ ಸಾಲಿನಲ್ಲಿ ಮತ್ತೆ ಎನ್ ಗಣೇಕಲ್‌ನಿಂದ ನೀಲಗಲ್ ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ ₹1 ಕೋಟಿ ಮಂಜೂರಾಗಿದೆ. ಒಂದೇ ರಸ್ತೆ ಕಾಮಗಾರಿಗೆ ಮೂರು ಬಾರಿ ಹಣ ಮಂಜೂರು ಮಾಡುತ್ತಿರುವುದು ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿ ರಸ್ತೆ ಹೆಸರಿನಲ್ಲಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಗ್ರಾಮಸ್ಥರು ಹಿಡಿಶಾಪ ಹಾಕಿದರು.

ಸ್ಥಳೀಯ ನಿವಾಸಿ ಶಾಂತಕುಮಾರ್ ಈದಿನ.ಕಾಮ್ ಜೊತೆ ಮಾತನಾಡಿ‌, “ರಸ್ತೆ ಕಾಮಗಾರಿಗೆ ಒಮ್ಮೆ ಮಂಜೂರಾದ ಹಣ ದುರ್ಬಳಕೆ ಮಾಡಿಕೊಂಡು ಗುಣಮಟ್ಟದ ರಸ್ತೆ ನಿರ್ಮಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅದೇ ರಸ್ತೆ ಅಭಿವೃದ್ಧಿಗೆ ಮತ್ತೆ ಹಣ ಮಂಜೂರು ಮಾಡಿರುವುದನ್ನು ರದ್ದುಪಡಿಸಬೇಕು. ಈ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

“ಗಣೇಕಲ್‌-ನೀಲಗಲ್ ಮಧ್ಯದ ರಸ್ತೆ ಅಭಿವೃದ್ಧಿಗೆ ಮಂಜೂರಾದ ₹1 ಕೋಟಿಯ ಕಾಮಗಾರಿ ಟೆಂಡರ್ ಈಗಾಗಲೇ ಮುಗಿದಿದೆ. ಇದನ್ನು ರದ್ದುಪಡಿಸಬೇಕು. ಇದೇ ಅನುದಾನವನ್ನು ಎನ್ ಗಣೇಕಲ್ ಗ್ರಾಮದ ಮಲದಕಲ್ ಗ್ರಾಮದ ಸಿಸಿ ರಸ್ತೆ ಮತ್ತು ಒಳಚರಂಡಿ ನಿರ್ಮಿಸಲು ಬಳಕೆ ಮಾಡಬೇಕು. ಈ ಹಿಂದೆ ರಸ್ತೆ ಹೆಸರಿನಲ್ಲಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಅನುಮತಿ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೊಲೆಗೈದು ಅಸಹಜ ಸಾವು ಎಂದು ಬಿಂಬಿಸಿದ ತಾಯಿ : ಪೊಲೀಸರಿಂದ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು...

ಶಿವಮೊಗ್ಗ | ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರುಪಾಯಿ ಕಳೆದುಕೊಂಡ ಮಹಿಳೆ ; ಪ್ರಕರಣ ದಾಖಲು

ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌...

Download Eedina App Android / iOS

X