ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ನಡೆದಿದೆ.
ಸುಮಲತಾ(45) ಹಾಗೂ ವರ್ಷಾ(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತರು ಕಲಬುರಗಿ ನಗರದ ಎಂ.ಬಿ.ನಗರ ಬಡಾವಣೆ ನಿವಾಸಿಗಳಾಗಿದ್ದರು. ಸೋಮವಾರ ಸಾಯಂಕಾಲದಿಂದ ನಾಪತ್ತೆಯಾಗಿದ್ದ ತಾಯಿ ಮತ್ತು ಮಗಳು ಮಂಗಳವಾರ ಬೆಳಗ್ಗೆ ಶಹಾಬಾದ್ ಬಳಿಯ ಕಾಗಿಣಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬದುಕಿನಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು
ಈ ಕುರಿತು ಶಹಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.