ಗೃಹಜ್ಯೋತಿ ಯೋಜನೆ; ರಾತ್ರಿ ವೇಳೆ ಸರ್ವರ್ ಸಕ್ರಿಯ

Date:

200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್‌ ಸಮಸ್ಯೆ ಅಡ್ಡಿಯಾಗಿದ್ದು, ಗ್ರಾಹಕರು ಕಾದು ವಾಪಸ್‌ ತೆರಳುತ್ತಿದ್ದಾರೆ.

- Advertisement -

ನಾಗರಿಕರು ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಲು ಅಗತ್ಯವಿರುವ ದಾಖಲೆಗಳೊಂದಿಗೆ ಗ್ರಾಮ ಒನ್, ನಾಡಕಚೇರಿ ಹಾಗೂ ಸೈಬರ್ ಕೇಂದ್ರಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಕಾಯುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಉಂಟಾಗಿದ್ದು, ನೋಂದಣಿ ಆಗುತ್ತಿಲ್ಲ. ಕೆಲವೊಮ್ಮೆ ಸರ್ವರ್ ಇದ್ದರೂ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಹೋಗುತ್ತದೆ. ಅದನ್ನು ಹೇಳುವಷ್ಟರಲ್ಲಿ ಸಂಪರ್ಕ ಕಡಿತಗೊಳ್ಳುತ್ತದೆ” ಎಂದು ನಾಡಕಚೇರಿ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಆ್ಯಪ್‌, ಮೊಬೈಲ್‌ನಲ್ಲೇ ಅರ್ಜಿ ತುಂಬಲು ಅವಕಾಶ: ಡಿಕೆ ಶಿವಕುಮಾರ್

ರಾತ್ರಿಯ ವೇಳೆ ಸಕ್ರಿಯ

ಹಗಲಿನಲ್ಲಿ ಸರ್ವರ್ ಸಮಸ್ಯೆ ಕಾಡುತ್ತದೆ. ರಾತ್ರಿ 8 ಗಂಟೆಯ ನಂತರ ಸಕ್ರಿಯವಾಗುತ್ತಿದೆ. ಆದರೆ, ಸರ್ಕಾರದ ನಾಡಕಚೇರಿ, ಗ್ರಾಮ ಒನ್ ಕೇಂದ್ರಗಳಲ್ಲಿ ಸಿಬ್ಬಂದಿ ಇರುವುದಿಲ್ಲ. ಹೀಗಾಗಿ ನಾಗರಿಕರು, ಸೈಬರ್ ಕೇಂದ್ರಗಳತ್ತ ಮುಖ ಮಾಡುತ್ತಿದ್ದಾರೆ. ಸೈಬರ್ ಕೇಂದ್ರಗಳಲ್ಲಿ ದಾಖಲೆ ಪಡೆದುಕೊಂಡು ರಾತ್ರಿಯ ವೇಳೆ ಅರ್ಜಿ ಸಲ್ಲಿಕೆ ಮಾಡಿ, ಬೆಳಗ್ಗೆ ಸ್ವೀಕೃತಿ ಕೊಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...