ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿರುವ ಎಲ್ಲ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ದೊರೆಯಲಿದೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಜ್ಜೆ ಹುಂಡಿ ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. “ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಗಮನಕ್ಕೆ ಬಂದಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಈಗಾಗಲೇ ತಂದಿದ್ದೇನೆ. ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
“ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವ ಮೂಲಕ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಲು ಕಾರಣಕರ್ತರಾಗಿದ್ದೀರಿ. ನಿಮ್ಮ ಪ್ರೀತಿಯ ಅಭಿಮಾನಕ್ಕೆ ನಾವು ಸದಾ ಚಿರಋಣಿಯಾಗಿರುತ್ತೇವೆ” ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಕಮ್ಮ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರವಿ ಮುಖಂಡರಾದ ಶಾಂತಮ್ಮ ಗುರುಸ್ವಾಮಿ ಕಿರಣ್ ಸಂತೋಷ್ ಲಲಿತಾದ್ರಿಪುರ ಬಸವರಾಜು ಎಂಸಿ ಹುಂಡಿ ಶಿವಪ್ರಸಾದ್ ನಂದೀಶ್ ಗಿರೀಶ್ ಸಜ್ಜೆ ಹುಂಡಿ ರವಿ ಜಂತಗಳ್ಳಿ ಜಗದೀಶ್ ಮಂಡ್ಕಳ್ಳಿ ಸೋಮಶೇಖರ್ ರಾಯಣ್ಣ ಹುಂಡಿ ಪಾಪಣ್ಣ ಕುಂಬರಳ್ಳಿ ಮಠ ಮಹದೇವ್ ಕಂದಾಯ ಇಲಾಖೆಯ ಶಂಕರ್ ಲತಾ ಹಾಗೂ ಗ್ರಾಮ ಪಂಚಾಯತಿಯ ಅಧಿಕಾರಿಗಳು ಸದಸ್ಯರು ಹಾಜರಿದ್ದರು.