‘ಗೃಹಜ್ಯೋತಿ’ | ನೋಂದಣಿಗೆ ʼಆಧಾರ್‌ʼ ಸಾಕು ಎಂದು ಗೊಂದಲಗಳಿಗೆ ತೆರೆ ಎಳೆದ ಇಂಧನ ಇಲಾಖೆ

Date:

‘ಗೃಹಜ್ಯೋತಿ’ ಯೋಜನೆಯ ಸೌಲಭ್ಯ ಪಡೆಯುವಲ್ಲಿ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಸ್ಪಷ್ಟನೆ ನೀಡಿದೆ.

- Advertisement -

ಬಾಡಿಗೆದಾರರು ಮತ್ತು ಇತರೆ ಗ್ರಾಹಕರು ಗೃಹಜ್ಯೋತಿ ಯೋಜನೆಯ ಫಲಾನುಭವಿಯಾಗಲು ಆಧಾರ್‌ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸಾಕು ಎಂದು ಇಂಧನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಗೊಂದಲ-1

ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ವಿದ್ಯುತ್ ಬಳಕೆದಾರರಿಗೂ ಅನ್ವಯವಾಗುವುದೇ?

ಸ್ಪಷ್ಟೀಕರಣ

ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ.

ಗೊಂದಲ-2

ಗೃಹ ಬಳಕೆದಾರರು / ಫಲಾನುಭವಿಗಳು ಯಾವುದಾದರೂ ಮಾಹೆಗಳಲ್ಲಿ ಮಾತ್ರ 200 ಯುನಿಟ್‌ ಮಿತಿ ದಾಟಿದರೂ, ಸದರಿ ಯೋಜನೆಯಲ್ಲಿ ಮುಂದುವರಿಯುವವರೆ?

ಸ್ಪಷ್ಟೀಕರಣ

200 ಯುನಿಟ್‌ಗಳ ಬಳಕೆಯ ಮಿತಿಯನ್ನು ಯಾವುದಾದರೂ ತಿಂಗಳಲ್ಲಿ ಮೀರಿದಲ್ಲಿ, ಆ ತಿಂಗಳ ಪೂರ್ಣ ವಿದ್ಯುತ್‌ ಬಿಲ್‌ ಅನ್ನು ಪಾವತಿಸಿ, ಸದರಿ ಯೋಜನೆಯಲ್ಲಿ ಮುಂದುವರಿಯುವುದು.

ಗೊಂದಲ-3

ಸರ್ಕಾರದ ಆದೇಶದ ನಂತರ ಹೊಸದಾಗಿ ಗೃಹಬಳಕೆಗಾಗಿ ವಿದ್ಯುತ್‌ ಸಂಪರ್ಕ ಪಡೆದ ಗ್ರಾಗಕರಿಗೆ / ಬಳಕೆದಾರರಿಗೆ ಈ ಯೋಜನೆ ಅನ್ವಯಿಸುತ್ತದೆಯೇ?

ಸ್ಪಷ್ಟೀಕರಣ

ಹೊಸ ಸಂಪರ್ಕ ಪಡೆದ ಗ್ರಾಹಕರಿಗೆ ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯ ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ 53 ಯೂನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಗೊಂದಲ-4

2022-23ರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ಬಳಕೆ ದಾಖಲಾಗಿದ್ದಲ್ಲಿ, ಅಂತಹ ಮನೆಗಳ ಕಡಿಮೆ ಅವಧಿಯ ಸರಾಸರಿ ಪರಿಗಣಿಸುವ ವಿಧಾನ ಹೇಗೆ? (Shifted House)

ಸ್ಪಷ್ಟೀಕರಣ

ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯ ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ 53 ಯೂನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಗೊಂದಲ-5

Multi store Apartment ಗಳಿಗೆ ಈ ಯೋಜನೆ ಅನ್ವಯಿಸುತ್ತದೆಯೇ?

ಸ್ಪಷ್ಟೀಕರಣ

ಯಾವ ಮನೆಗಳಿಗೆ ಪ್ರತ್ಯೇಕ ಮೀಟರ್‌ ಇದೆಯೋ ಹಾಗೂ ಮೀಟರ್‌ ರೀ‌ಡಿಂಗ್‌ ಮಾಡಲಾಗುತ್ತದೆಯೋ ಅಂತಹ ಎಲ್ಲ ಮನೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ.

ಗೃಹಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯ ನೋಂದಣಿ ಇದೇ 18ರಿಂದ ಆರಂಭವಾಗಲಿದೆ. ಈ ಯೋಜನೆಯ ಲಾಭ ಪಡೆಯಲು ಇಚ್ಛಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/gruhajyothi ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...