ಗ್ಯಾರಂಟಿ ಯೋಜನೆಗಳು ನನ್ನವು: ಜನಾರ್ದನ ರೆಡ್ಡಿ

Date:

ರಾಜ್ಯದಲ್ಲಿ ಜಾರಿಯಾಗುತ್ತಿರುವ ಗ್ಯಾರಂಟಿ ಯೋಜನೆಗಳು ನಾನು ರೂಪಿಸಿದ್ದ ಯೋಜನೆಗಳು. ಅವುಗಳನ್ನು ಕಾಂಗ್ರೆಸ್‌ನವರು ಕಾಪಿ ಮಾಡಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಚುನಾವಣೆಗೂ ಮೂರು ತಿಂಗಳ ಮುಂಚೆ ನಾನು ಪಕ್ಷವನ್ನು ಸ್ಥಾಪಿಸಿದೆ. ಆ ಸಮಯಲ್ಲಿಯೇ ಹಲವು ಯೋಜನೆಗಳನ್ನು ರೂಪಿಸಿದ್ದೆ. ಅವುಗಳು ಯಾವುದೋ ಮೂಲದಿಂದ ಸಿದ್ದರಾಮಯ್ಯ ಅವರ ಕಿವಿಗೆ ಬಿದ್ದಿವೆ. ಅವುಗಳನ್ನು ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳನ್ನಾಗಿ, ಜಾರಿಗೆ ತರುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆಗೆ ನಾವು ಸಿದ್ಧತೆ ನಡೆಸುತ್ತಿದ್ದಾಗಲೇ, ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ಮಾಸಾಶನ, ನಿರುದ್ಯೋಗಿಗಳಿಗೆ ಮಾಸಾಶಾನ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆಗಳನ್ನು ಘೋಷಣೆ ಮಾಡಿದ್ದೆ. ಅವುಗಳನ್ನು ಕಾಂಗ್ರೆಸ್‌ನವರು ಕಾಪಿ ಮಾಡಿ, ಜಾರಿಗೆ ತರುತ್ತಿದ್ದಾರೆ” ಎಂದು ರೆಡ್ಡಿ ಹೇಳಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯದ ಪ್ರತಿ ಕುಟುಂಬವು ಆರ್ಥಿಕವಾಗಿ ತೊಂದರೆ ಅನುಭವಿಸಬಾರದೆಂಬ ಉದ್ದೇಶದಿಂದ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ನಾನಾ ಸವಲತ್ತುಗಳನ್ನು ನೀಡುತ್ತಿದೆ. ಎಲ್ಲರೂ ಅವುಗಳ ಲಾಭ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಮಂಜುನಾಥ ಬೋಗಾವತಿ, ತಾಲೂಕು ಪಂಚಾಯಿತಿ, ಇಒ ಲಕ್ಷ್ಮೀದೇವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಹತ್ತಿಮರದ, ಉಪಾಧ್ಯಕ್ಷ ಗೌಸ್‌ಸಾಬ್‌, ಪ್ರಮುಖರಾದ ಸುರೇಶ ಕೊರೆ, ರೋಹಿಣಿ ಕೊಟಗಾರ್‌, ಮಹಾಂತಗೌಡ ಪಾಟೀಲ್‌, ಕಾಶೀನಾಥ ಹಂಚಿನಾಳ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್...

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...