ಗುಬ್ಬಿ | ತೊರೆಹಳ್ಳಿ ಬಳಿಯ ಶಿಂಷಾ ನದಿ ತೊರೆಯಲ್ಲಿ ಕೊಚ್ಚಿ ಹೋದ ಕಾರು ಹಾಗೂ ಬೈಕ್

Date:

 ಎರಡು ದಿನದಿಂದ ಸುರಿದ ಮಳೆಗೆ ತಾಲ್ಲೂಕಿನ ತೊರೆಹಳ್ಳಿ ಬಳಿಯ ಶಿಂಷಾ ನದಿಯ ತೊರೆಯಲ್ಲಿ ಬಿರುಸಾಗಿ ಹರಿದ ನೀರು ರಸ್ತೆಯ ಸೇತುವೆ ಮೇಲೆ ಕಾರು ಹಾಗೂ ಬೈಕ್ ಕೊಚ್ಚಿ ಹೋದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

- Advertisement -

ಮಂಗಳವಾರ ಸಂಜೆ ಕಾರ್ಯನಿಮಿತ್ತ ಗುಬ್ಬಿಗೆ ಬಂದಿದ್ದ ತೋಟಸಾಗರ ಗ್ರಾಮದ ಪರಮಣ್ಣ ಅವರು ಕಾರಿನಲ್ಲಿ ರಾತ್ರಿ ಮರಳಿ ಇದೇ ಮಾರ್ಗದಲ್ಲಿ ಊರಿಗೆ ಮರಳುವಾಗ ತೊರೆಯ ನೀರಿನ ರಭಸಕ್ಕೆ ಕಾರು ಸಮೇತ ಕೊಚ್ಚಿ ಹೋಗಿದ್ದರು. ಸ್ಥಳೀಯರ ನೆರವಿನಿಂದ ಪರಮಣ್ಣ ಪಾರಾಗಿದ್ದಾರೆ. ಇದೇ ಸಮಯದಲ್ಲಿ ಸ್ಥಳೀಯ ಯುವಕನೊಬ್ಬನ ಬೈಕ್ ಸಹ ಕೊಚ್ಚಿ ಹೋಗಿದೆ. ಸದ್ಯ ಯುವಕ ಹಾರಿ ಹೊರ ಬಂದಿದ್ದಾನೆ. ಈ ರೀತಿಯ ಸಮಸ್ಯೆ ಪ್ರತಿ ವರ್ಷ ನಡೆಯುತ್ತಲೇ ಇರುತ್ತದೆ. ಕಳೆದ ವರ್ಷ ಟ್ರ್ಯಾಕ್ಟರ್, ಕಾರು ಕೊಚ್ಚಿ ಹೋಗಿತ್ತು. ಮೂವತ್ತು ವರ್ಷದಿಂದ ಸಮಸ್ಯೆಗೆ ಪರಿಹಾರ ಕೇಳಿ ಬೇಸತ್ತಿದ್ದೇವೆ ಎಂದು ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ರಂಗನಾಥ್ ಹೇಳುತ್ತಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತೊರೆಹಳ್ಳಿ ತೊರೆಗೆ ಅಗತ್ಯ ಸೇತುವೆ ನಿರ್ಮಾಣಕ್ಕೆ ಕಳೆದ ಮೂರು ಎರಡು ದಶಕದ ಬೇಡಿಕೆ ಇದ್ದರೂ ಇಲ್ಲಿನ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ವರ್ಷದ ಆರು ತಿಂಗಳು ಸೇತುವೆ ರಸ್ತೆ ಬಂದ್ ಆಗುತ್ತದೆ. ಹರಿಯುವ ನೀರಿನಲ್ಲಿ ಸರ್ಕಸ್ ಮಾಡಿದರೆ ವಾಹನ ಕೊಚ್ಚಿ ಹೋಗುವುದು ಗ್ಯಾರಂಟಿ. ಇಲ್ಲಿನ ಸಮಸ್ಯೆಗೆ ಪರಿಹಾರಕ್ಕೆ ಶಾಸಕರು ಹಾಗೂ ಸಂಸದರ ಗಮನಕ್ಕೆ ತಂದಿದ್ದರೂ ಸೂಕ್ತ ಪರಿಹಾರ ಸಿಕ್ಕಿಲ್ಲ. ರೈತರ ಕೃಷಿ ಚಟುವಟಿಕೆಗೆ ತೀವ್ರ ಸಮಸ್ಯೆ ಎದುರಾಗಿದೆ. ತೊರೆ ಹಳ್ಳಕ್ಕೆ ಮೇಲ್ಸೇತುವೆ ಅವಶ್ಯವಿದೆ. ಗುಬ್ಬಿ ಪಟ್ಟಣಕ್ಕೆ ತೊರೆಹಳ್ಳಿ ಗ್ರಾಮಸ್ಥರು ಹೋಗಲು ಹೊಸಹಳ್ಳಿ ಮೂಲಕ ಎಂಟು ಕಿಮೀ ಅಧಿಕವಾಗಿ ಸುತ್ತುವರಿದು ಹೋಗಬೇಕಿದೆ. ಕಡಬ ಗ್ರಾಮಕ್ಕೆ ತೆರಳುವ ಈ ಮಾರ್ಗ ಬಂದ್ ಆಗುತ್ತದೆ. ಹೊನ್ನಶೆಟ್ಟಿಹಳ್ಳಿ ಯಡವನಹಳ್ಳಿ ಮಾರ್ಗ ಕೂಡಾ ಬಂದ್ ಆಗುತ್ತದೆ. ಈ ಸಮಸ್ಯೆ ಪ್ರತಿ ಮಳೆಗಾಲದಲ್ಲಿ ಕಂಡರೂ ಅಧಿಕಾರಿಗಳು ಪ್ರತಿನಿಧಿಗಳು ಜಾಣ ಮೌನ ವಹಿಸಿದ್ದಾರೆ ಎಂದು ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಸುಮಾರು 300 ಮೀಟರ್ ದೂರದವರೆಗೆ ಕೊಚ್ಚಿ ಹೋಗಿದ್ದ ಕಾರು ಮತ್ತು ಬೈಕ್ ಸ್ಥಳೀಯರ ಸಹಕಾರದಿಂದ ತೊರೆ ನೀರಿನಿಂದ ಹೊರ ತೆಗೆಯಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...