ಗುಬ್ಬಿ | ಕೆರೆಯಲ್ಲಿ ಮುಳುಗಿದ ಯುವಕ : ಮಳೆಯಲ್ಲಿಯೇ ತೀವ್ರ ಶೋಧ ಬಳಿಕ ಮೃತದೇಹ ಪತ್ತೆ

Date:

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋದ ಶಿರಾ ಮೂಲದ ನಾಲ್ವರ ಪೈಕಿ ಓರ್ವ ಯುವಕ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆಯಲ್ಲೇ ಸತತ 16 ಗಂಟೆ ತೀವ್ರ ಶೋಧ ನಡೆಸಿದ ಬಳಿಕ ಮಂಗಳವಾರ ಬೆಳಿಗ್ಗೆ ಯುವಕನ ದೇಹ ಪತ್ತೆಯಾಗಿದೆ.

- Advertisement -

ಜಿ.ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಮದ್ಯಾಹ್ನ 4 ಗಂಟೆ ಸಮಯದಲ್ಲಿ ಈಜಲು ಹೋದ ನಾಲ್ಕು ಜನರ ಪೈಕಿ ಈಜು ಬಾರದ ರಾಕೇಶ್(28) ಮುಳುಗಿದ್ದ ಯುವಕ ಎನ್ನಲಾಗಿದೆ. ಹೊಸಹಳ್ಳಿಯಲ್ಲಿದ್ದ ಈ ಕೂಲಿ ಕಾರ್ಮಿಕರ ತಂಡ ಜಲ ಜೀವನ್ ಮಿಷನ್ ಕಾಮಗಾರಿ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಬ್ಬದ ಹಿನ್ನಲೆ ಊರಿಗೆ ತೆರಳಿ ರಜೆ ಮುಗಿಸಿಕೊಂಡು ಮರಳಿ ಬಂದು ಸೋಮವಾರ ಮಧ್ಯಾಹ್ನ ಕೆರೆಗೆ ಇಳಿದಿದ್ದಾರೆ. ಈ ಸಮಯದಲ್ಲಿ ರಾಕೇಶ್ ನಾಪತ್ತೆಯಾಗಿರುವುದಾಗಿ ಜೊತೆಗಾರರು ಹುಡುಕಾಟ ನಡೆಸಿ ನಂತರ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ನಂತರ ಪೊಲೀಸರೊಂದಿಗೆ ಅಗ್ನಿ ಶಾಮಕ ದಳ ತೀವ್ರ ಹುಡುಕಾಟ ನಡೆಸಿದರು.

ಕತ್ತಲಾದ ಬಳಿಕ ಮಂಗಳವಾರ ಬೆಳಿಗ್ಗೆ ಶೋಧ ಕಾರ್ಯ ಆರಂಭಿಸಿದ ಬಳಿಕ ರಾಕೇಶ್ ಶವ ಪತ್ತೆಯಾಗಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಮುಳುಗು ತಜ್ಞರು ಕಾರ್ಯಾಚರಣೆ ಯಶಸ್ವಿಯಾಗಿ ಮಳೆಯಲ್ಲೇ ನಡೆಸಿದ್ದಾರೆ. ಸೋಮವಾರದಿಂದ ಸ್ಥಳದಲ್ಲಿ ಮೊಕಂ ಹೂಡಿದ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...