ಗುಬ್ಬಿ | ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ಎಸ್.ರಘು ಅವರಿಗೆ ‘ಉದ್ಯೋಗದಾತ’ ಬಿರುದು ಪ್ರದಾನ

Date:

Advertisements

ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಿ ತಮ್ಮ ಕಂಪೆನಿಯಲ್ಲಿ ಉದ್ಯೋಗ ನೀಡಿದ ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ಅವರಿಗೆ ಉದ್ಯೋಗದಾತ ಎಂಬ ಬಿರುದು ಬಿನ್ನವತ್ತಳೆ ಪ್ರದಾನ ಮಾಡಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಚನ್ನಬಸವೇಶ್ವರ ಯುವಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗೆಳೆಯರ ಬಳಗ ವತಿಯಿಂದ ನಡೆದ ಮಹಿಳಾ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಿ ಗ್ರಾಮೀಣ ಭಾಗದಲ್ಲಿ ಸಾಫ್ಟ್ ವೇರ್ ಕಂಪೆನಿ ತೆರೆದು 300 ಮಂದಿಗೆ ಉದ್ಯೋಗ ಸೃಷ್ಟಿಸಿದ ಎಸ್.ರಘು ಅವರ ಸಾಮಾಜಿಕ ಕಳಕಳಿ ಹಾಗೂ ಸೇವೆ ಗುರುತಿಸಿ ರಾಜ್ಯೋತ್ಸವ ಅಂಗವಾಗಿ ಬಿನ್ನವತ್ತಳೆ ನೀಡಿ ಉದ್ಯೋಗದಾತ ಎಂಬ ಬಿರುದು ತಹಶೀಲ್ದಾರ್ ಬಿ.ಆರತಿ ಅವರು ಪ್ರದಾನ ಮಾಡಿದರು.

ಬಿರುದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎಸ್.ರಘು, ನಗರದಲ್ಲಿ ಸಾಫ್ಟ್ ವೇರ್ ಕಂಪೆನಿ ನಡೆಸುವುದು ಸರ್ವೇ ಸಾಮಾನ್ಯ. ಆದರೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ವಿದ್ಯಾರ್ಹತೆಯ ಯುವಕರಿಂದ ಕಂಪೆನಿ ನಡೆಸುವುದು ಚಾಲೆಂಜ್ ಎನಿಸಿತ್ತು. ಆದರೆ ನಮ್ಮ ತಾಲ್ಲೂಕಿನ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ಜೊತೆ ಉದ್ಯೋಗ ನೀಡಿದ ತೃಪ್ತಿ ನನ್ನಲಿದೆ. ನನ್ನ ಕಳಕಳಿಯನ್ನು ಅರ್ಥೈಸಿಕೊಂಡು ಕೆಲ ಸಂಘಟನೆಗಳು ನನ್ನ ಗುರುತಿಸಿ ಸನ್ಮಾನಿಸಿದೆ. ಈ ಗೌರವ ಪಡೆದು ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ ಎಂದು ತಮ್ಮ ಅನುಭವ ಹಂಚಿಕೊಂಡರು.

Advertisements

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಆರತಿ, ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಮುಖ್ಯಾಧಿಕಾರಿ ಮಂಜುಳಾದೇವಿ, ಪ್ರಾಂಶುಪಾಲ ಪ್ರಸನ್ನಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಕೇಶವರಾಜ್, ಶ್ರೀ ಚನ್ನಬಸವೇಶ್ವರ ಯುವಕ ಸಂಘ ಪ್ರಧಾನ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್, ಸಾಮಾಜಿಕ ಕಾರ್ಯಕರ್ತರಾದ ಜಿ.ಆರ್.ರಮೇಶ್, ಜಿ.ಎಸ್.ಮಂಜುನಾಥ್, ಸುರಿಗೇನಹಳ್ಳಿ ರಂಗನಾಥ್, ಎಂ.ಎಸ್.ದೇವರಾಜ್ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X