ಗುಬ್ಬಿ | ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಜಾಗೃತಿವಹಿಸಬೇಕು : ಚೇಳೂರು ಪಿಎಸ್ ಐ ನಾಗರಾಜು

Date:

ಆಧುನಿಕತೆ ಬೆಳೆದಂತೆ ಅಪರಾಧ ಕೃತ್ಯ ಹಾಗೂ ಅನೈತಿಕ ಚಟುವಟಿಕೆ ಹೆಚ್ಚಾಗತೊಡಗಿದೆ. ವಿಶ್ವಮಟ್ಟದ ಪಿಡುಗು ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಗ್ರಾಮೀಣ ಭಾಗದಲ್ಲಿ ಎಚ್ಚರವಹಿಸಬೇಕು ಎಂದು ಚೇಳೂರು ಪಿಎಸ್ನಾ ಐಗರಾಜು ಕರೆ ನೀಡಿದರು.

- Advertisement -

ತಾಲ್ಲೂಕಿನ ಚೇಳೂರು ಗ್ರಾಮದ ಕಾಳಿದಾಸ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಸಿದ್ದಗಂಗಾ ರೋಟರಿ ಅಭಿವೃದ್ದಿ ಸಂಸ್ಥೆ, ಹೈದರಬಾದ್ ವೈ ಚಾಯ್ಸ್ ಫೌಂಡೇಶನ್, ತುಮಕೂರು ಒನ್ ಸ್ಟಾಪ್ ಸೆಂಟರ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಸುರಕ್ಷಿತಾ ಗ್ರಾಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಮಕ್ಕಳು ಹಾಗೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಆಸೆ ಆಮಿಷಯೊಡ್ಡಿ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಊರಿನ ಪ್ರಜ್ಞಾವಂತ ಜನರು ಈ ಬಗ್ಗೆ ನಿಗಾವಹಿಸಿ ಹೊಸಬರ ಪರಿಚಯ ಅವರ ನಡೆನುಡಿ ಗಮನಿಸಿ ಅನುಮಾನ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮುಖ್ಯ ಶಿಕ್ಷಕ ಜಯಣ್ಣ ಮಾತನಾಡಿ ಮಕ್ಕಳಲ್ಲಿ ಈ ಬಗ್ಗೆ ಎಚ್ಚರಿಕೆ ಅಗತ್ಯವಿದೆ. ಹಳ್ಳಿಯಿಂದ ಶಾಲೆಗೆ ಬಂದು ಮರಳಿ ಹೋಗುವಾಗ ರಸ್ತೆಯಲ್ಲಿ ಅಪರಿಚಿತರ ಸಂಪರ್ಕ ಮಾಡದಂತೆ ಜಾಗೃತಿ ಮೂಡಿಸಬೇಕಿದೆ. ಮಕ್ಕಳ ಮಾರಾಟ ದಂಧೆ ಈಗಾಗಲೇ ಸಾಕಷ್ಟು ಕಡೆ ನಡೆದಿದೆ. ಈ ನಿಟ್ಟಿನಲ್ಲಿ ಮಾನವ ಸಾಗಾಣಿಕೆ ಬಗ್ಗೆ ಪೊಲೀಸ್ ಇಲಾಖೆ ಜೊತೆ ಸಾರ್ವಜನಿಕರು ಕೈ ಜೋಡಿಸಿ ಈ ಕ್ರೈಮ್ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಅಭಿವೃದ್ದಿ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿದ್ಧಗಂಗಾ ರೋಟರಿ ಸಂಸ್ಥೆ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ಮಾನವ ಕಳ್ಳ ಸಾಗಾಣಿಕೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕೂಡ ಒಂದಾಗಿದೆ. ಮಕ್ಕಳ ಹಕ್ಕು ಕಸಿದು ದುಡಿಮೆ ಮಾಡಿಸಲು ಊರಿಂದ ಊರಿಗೆ ಕರೆ ತರುವ ಸಾಗಾಣಿಕೆ ನಡೆಯುತ್ತಿದೆ. ಮಾನವ ಕಳ್ಳ ಸಾಗಾಣಿಕೆ ದಂಧೆಯ ಒಂದು ಭಾಗವಾದ ಬಾಲ ಕಾರ್ಮಿಕರ ಬಗ್ಗೆ ಸಹ ನಾವು ಸೂಕ್ಷ್ಮವಾಗಿ ಅಧ್ಯಯನ ನಡೆಸಿ ದಂಧೆಗೆ ಕಡಿವಾಣ ಹಾಕಲು ಪ್ರಯತ್ನ ನಡೆಸಿದ್ದೇವೆ ಎಂದು ತಿಳಿಸಿದರು.

ಸಿದ್ದಗಂಗಾ ರೋಟರಿ ಸಂಸ್ಥೆ ಸದಸ್ಯ ಶಿವರಾಜ್ ಮಾತನಾಡಿ ಚಿನ್ನಾಭರಣ, ಹಣ ಸೇರಿದಂತೆ ಇನ್ನಿತರ ವಸ್ತುಗಳ ಕಳ್ಳತನ ನಡೆದ ಈ ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ಈಗ ದೊಡ್ಡ ಮಾರಕವಾಗಿದೆ. ಮಾನವ ಹಕ್ಕು ಉಲ್ಲಂಘನೆ ಜೊತೆಗೆ ಅಕ್ರಮ ದಂಧೆಗೆ ಮೂಲವಾದ ಈ ಸಾಗಾಣಿಕೆ ನಿಲ್ಲಿಸಲು ಎಲ್ಲರೂ ಪಣ ತೊಡಬೇಕು ಎಂದರು.

ಈ ಸಂದರ್ಭದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಶ್ವೇತಾ, ಅಭಿವೃದ್ದಿ ಸಂಸ್ಥೆಯ ಹೈದರ್ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...