ಗುಬ್ಬಿ | ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಭಾರತ್ ಭೀಮ್ ಸೇನೆ ಒತ್ತಾಯ: ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ

Date:

ಸೌಜನ್ಯ ಸಾವಿಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸಿ ಭಾರತ ಭೀಮ್ ಸೇನಾ ಸಂಘಟನೆಯ ನೂರಾರು ಪದಾಧಿಕಾರಿಗಳು ಗುಬ್ಬಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು.

- Advertisement -

ಗುಬ್ಬಿ ಪಟ್ಟಣದ ಬಸ್ ನಿಲ್ದಾಣದಿಂದ ಪಾದಯಾತ್ರೆಗೆ ಚಾಲನೆ ನೀಡುವ ಮೂಲಕ ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗುವ ಮೂಲಕ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆಯಲ್ಲಿ ನಿಂತು ಪ್ರತಿಭಟನೆ ನಡೆಸಿದ ಜೈ ಭೀಮ್ ಕಾರ್ಯಕರ್ತರು ನಿಷ್ಪಕ್ಷಪಾತ ತನಿಖೆ ನಡೆಸಿ ಸೌಜನ್ಯ ಸೇರಿದಂತೆ ಅನ್ಯಾಯಕ್ಕೆ ಒಳಗಾದ ಎಲ್ಲ ಹೆಣ್ಣುಮಕ್ಕಳಿಗೆ ನ್ಯಾಯ ಸಿಗುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜೈ ಭೀಮ್ ಸೇನೆ ರಾಜ್ಯಾಧ್ಯಕ್ಷ ದಿನೇಶ್ ಮಾತನಾಡಿ, “ಸೌಜನ್ಯ ಎಂಬ ಹೆಣ್ಣುಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಹಲವು ವರ್ಷಗಳಿಂದ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದ್ದು, ಇತ್ತೀಚೆಗೆ ಈ ಎಲ್ಲ ಪ್ರಕರಣಕ್ಕೆ ಪೂರಕವಾಗಿ ಸಾಕ್ಷ್ಯಾಧಾರ ಲಭ್ಯವಾಗಿ ಸರ್ಕಾರ ಮಧ್ಯೆ ಪ್ರವೇಶಿಸಿ ಎಸ್‌ಐಟಿ ತನಿಖೆಗೆ ಆದೇಶಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರ ಜನರ ಕಣ್ಣೊರೆಸುವ ಕೆಲಸ ಮಾಡದೆ ಪೊಲೀಸರ ಮೇಲೆ ಒತ್ತಡ ಹಾಕದೆ, ಯಾವುದೇ ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೆ ಒಳಗಾಗದಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಭಾರತ ಭೀಮ್‌ ಸೇನಾ ಪಾದಯಾತ್ರೆ

“ಪೊಲೀಸರ ಪಾರದರ್ಶಕ ತನಿಖೆಯಿಂದ ಅತ್ಯಾಚಾರಕ್ಕೆ ಒಳಗಾದ ಹೆಣ್ಣುಮಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡುವ ಜತೆಗೆ ಮುಂದಿನ ದಿನಗಳಲ್ಲಿ ಇಂತಹ ನೀಚ ಕೃತ್ಯಗಳು ನಡೆಯದಂತೆ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಕಿಡಿಗೇಡಿಗಳಿಗೆ ಎಚ್ಚರಿಕೆಯ ಸಂದೇಶ ಸಾರುವಂತಿರಬೇಕು. ಇಲ್ಲವಾದರೆ ನಮ್ಮ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಜತೆಗೂಡಿ ವಿಧಾನಸೌಧದ ಎದುರು ತಮಟೆ ಚಳವಳಿ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಶಿಕ್ಷಕಿ ಮನೆಯಲ್ಲಿ ಭಾರೀ ಕಳ್ಳತನ: ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು ಕಳವು

ಪಾದಯಾತ್ರೆಯಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ಸಚಿನ್, ಸಂಘಟನಾ ಕಾರ್ಯದರ್ಶಿ ಮಧು, ರಾಜ್ಯ ಉಪಾಧ್ಯಕ್ಷ ಮಂಜುನಾಥ್, ಅಲ್ಪಸಂಖ್ಯಾತರ ರಾಜ್ಯಾಧ್ಯಕ್ಷ ರಿಜ್ವಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ರಾನ್, ರಾಜ್ಯ ಯುವ ಘಟಕದ ಉಪಾಧ್ಯಕ್ಷ ವಿಜಯ ಭಾಸ್ಕರ್, ಜಿಲ್ಲಾಧ್ಯಕ್ಷ ಗಿರೀಶ್, ಮಹಿಳಾ ಅಧ್ಯಕ್ಷೆ ಮಂಜುಳಾ, ಸಾದತ್, ತಾಲೂಕು ಅಧ್ಯಕ್ಷ ರಿಜ್ವಾನ್ ಮತ್ತು ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ವಾಸುಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...