ಗುಬ್ಬಿ | ಪಿಎಲ್ ಡಿ ಬ್ಯಾಂಕ್ ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ ಭರ್ಜರಿ ಗೆಲುವು.

Date:

Advertisements

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಿ.ಎಸ್.ಪುರ ಹೋಬಳಿ ಸಾಲಗಾರರ ಕ್ಷೇತ್ರ ಸಾಮಾನ್ಯ ಮೀಸಲು ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ 40 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಸಿ.ಎಸ್.ಪುರ ಹೋಬಳಿಯ ಸಾಮಾನ್ಯ ಮೀಸಲು ಸಾಲಗಾರರ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಮಹದೇವಯ್ಯ ಹಾಗೂ ಕಾಳೇಗೌಡ ನಾಮಪತ್ರ ಸಲ್ಲಿಸಿ ಕಣದಲ್ಲಿ ನೇರ ಹಣಾಹಣಿ ನಡೆಸಿದರು.

ಚುನಾವಣಾ ಮತದಾನ ಪ್ರಕ್ರಿಯೆ ನಡೆದು ನಂತರ ಎಣಿಕೆ ಕಾರ್ಯ ನಡೆಯಿತು. ಒಟ್ಟು 58 ಮತಗಳ ಪೈಕಿ 56 ಮತಗಳು ಚಲಾವಣೆಗೊಂಡಿತ್ತು. ಚಲಾವಣೆ ಪೈಕಿ ಒಂದು ಮತ ತಿರಸ್ಕೃತ ಮತವಾಗಿ ಉಳಿದ 55 ಮತಗಳಲ್ಲಿ ಬುಕ್ಕಸಾಗರ ಮಹದೇವಯ್ಯ 40 ಮತಗಳನ್ನು ಪಡೆದು ಬಾರಿ ಅಂತರದಲ್ಲಿ ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ಕಾಳೇಗೌಡ 15 ಮತಗಳ ಪಡೆದು ಪರಾಜಯಗೊಂಡರು.

Advertisements

ನೂತನ ನಿರ್ದೇಶಕ ಬುಕ್ಕಸಾಗರ ಮಹದೇವಯ್ಯ ಸುದ್ದಿಗಾರರ ಜೊತೆ ಮಾತನಾಡಿ ಕೃಷಿಕರ ಪರ ಕೆಲಸ ಮಾಡುವ ಪಿಎಲ್ ಡಿ ಬ್ಯಾಂಕ್ ಅಭಿವೃದ್ಧಿಗೆ ಸದಾ ಕಾಲ ಶ್ರಮಿಸುತ್ತೇವೆ. ವಿಶ್ವಾಸವಿಟ್ಟು ಮತದಾರರ ಇಚ್ಚೆಯಂತೆ ಕೆಲಸ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿದು ಬ್ಯಾಂಕ್ ಸರ್ವತೋಮುಖ ಅಭಿವೃದ್ಧಿ ಪಡಿಸಲು ಎಲ್ಲಾ ಸದಸ್ಯರ ವಿಶ್ವಾಸದಲ್ಲಿ ಸಾಗುತ್ತೇವೆ ಎಂದ ಅವರು ನನ್ನ ಗೆಲುವಿಗೆ ಶ್ರಮಿಸಿದ ಮುಖಂಡ ಎಂ.ವಿ.ಶ್ರೀನಿವಾಸ್ ಅವರ ತಂಡಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಎಂ.ವಿ.ಶ್ರೀನಿವಾಸ್, ಶಶಿಕಿರಣ್, ಸತೀಶ್ ಕುಮಾರ್, ಹೊನ್ನವಳ್ಳಿ ಕುಮಾರ್, ಮೋಹನ್, ವಕೀಲ ಕಾಂತರಾಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X