ಗುಬ್ಬಿ | ಇಡಗೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿ ಛೇರ್ಮನ್ ರವಿ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.

- Advertisement -

ವಿಎಸ್ಎಸ್ಎನ್ ಸೊಸೈಟಿ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಇಡಗೂರು ಸಾಲಗಾರ ಕ್ಷೇತ್ರ ಸಾಮಾನ್ಯ ಮೀಸಲಿನಲ್ಲಿ ಜಿ.ಯತೀಶ್ ಅಧ್ಯಕ್ಷರಾಗಿ ಹಾಗೂ ಹಾರನಪಾಳ್ಯ ಸಾಲಗಾರ ಕ್ಷೇತ್ರ ಓಬಿಸಿ (ಬಿ) ಮೀಸಲಿನ ಎಚ್.ಡಿ.ಶ್ರೀನಿವಾಸ್ ಈ ಇಬ್ಬರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಯತೀಶ್ ಮಾತನಾಡಿ ರೈತರ ಕೃಷಿ ಅನುಕೂಲಕ್ಕೆ ತಕ್ಕಂತೆ ಸೊಸೈಟಿ ಕೆಲಸ ಮಾಡುತ್ತಿದೆ. ರೈತರ ಅಭಿವೃದ್ಧಿಗೆ ಪೂರಕ ಯೋಜನೆ ಹಾಗೂ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು ಆರ್ಥಿಕ ವಹಿವಾಟು ಸಹ ನಡೆಸಿದೆ. ಕೃಷಿ ಪರಿಕರ ಖರೀದಿ ಹಾಗೂ ಕೃಷಿ ಸಾಲ ನೀಡುತ್ತಾ ಇಡಗೂರು ಸುತ್ತಲಿನ ರೈತರ ನೆರವಿಗೆ ನಿಂತ ಈ ಸಂಘವನ್ನು ಉತ್ತಮ ಬ್ಯಾಂಕ್ ಆಗಿ ಮೇಲ್ದರ್ಜೆಗೇರಿಸುವ ಆಲೋಚನೆ ಇದೆ. ಎಲ್ಲಾ ಸದಸ್ಯರ ಒಮ್ಮತದಲ್ಲಿ ಸಂಘ ಅಭಿವೃದ್ದಿ ಪಡಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಸಂಘದ ಸದಸ್ಯರಾದ ಪ್ರಶಾಂತ್, ನರಸಿಂಹಮೂರ್ತಿ, ಮನೋಹರ್, ಶಿವಕುಮಾರ್, ಉಮಾ, ಅನುಸೂಯ, ದೇವರಾಜ್, ಐ.ಎನ್.ಮನೋಹರ್, ಗಫಾರ್, ರಮೇಶ್ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...