ಗುಬ್ಬಿ | ನಿರ್ಭೀತಿಯಿಂದ ಒತ್ತುವರಿ ತೆರವು ಮಾಡಿ : ಅಧಿಕಾರಿಗಳಿಗೆ ಧೈರ್ಯ ತುಂಬಿದ ಪಪಂ ಸದಸ್ಯರು

Date:

ಗುಬ್ಬಿ ಪಟ್ಟಣದ ಎಲ್ಲಾ ಬಡಾವಣೆಯಲ್ಲಿ ರಸ್ತೆ ಬದಿ ಒತ್ತುವರಿ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಸ್ಥಳದಲ್ಲಿ ಯಾವುದೇ ಶಿಫಾರಸ್ಸಿಗೆ ತಲೆ ಕೆಡಿಸಿಕೊಳ್ಳದೆ ಅಧಿಕಾರಿಗಳು ಒತ್ತುವರಿ ತೆರವು ಮಾಡಿ ಎಂದು ಪಪಂ ಸದಸ್ಯರು ಅಧಿಕಾರಿಗಳಿಗೆ ಧೈರ್ಯ ತುಂಬಿದ ಘಟನೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆಯಿತು.

- Advertisement -

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ನೇತೃತ್ವದ ಸಭೆಯ ಅಧ್ಯಕ್ಷತೆಯನ್ನು ಪಪಂ ಅಧ್ಯಕ್ಷೆ ಆಯಿಷಾ ತಾಸೀನ್ ವಹಿಸಿದ್ದರು. ಕಳೆದ ಬಾರಿ ಒತ್ತುವರಿ ತೆರವು ವಿಚಾರ ಕೈಗೆತ್ತಿಕೊಂಡು ಅರ್ಧಕ್ಕೆ ಕೆಲಸ ಕೈಬಿಟ್ಟ ಬಗ್ಗೆ ಪ್ರಸ್ತಾಪ ಮಾಡಿದ ಸದಸ್ಯರು ಯಾರೇ ಒತ್ತುವರಿ ಮಾಡಿದ್ದರೂ ನಿರ್ಭೀತಿಯಿಂದ ಕೆಲಸ ಮಾಡುವಂತೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಭೆಯ ಆರಂಭದಲ್ಲಿ ಪಟ್ಟಣ ಪಂಚಾಯಿತಿ ಅಂಗಡಿ ಮಳಿಗೆಗಳ ಬಾಡಿಗೆ ಬಾಕಿ ವಸೂಲಿ ವಿಚಾರ ಪ್ರಸ್ತಾಪ ಮಾಡಲಾಯಿತು. ಒಂದು ಲಕ್ಷದೊಳಗೆ ಬಾಕಿ ಇದ್ದಾಗಲೇ ವಸೂಲಿ ಮಾಡಬೇಕು. 2026 ಕ್ಕೆ ಕರಾರು ಮುಗಿಯುವ ಕಾರಣ ಬಾಕಿ ವಸೂಲಿ ತುರ್ತು ಮಾಡಬೇಕು. ಹತ್ತು ಲಕ್ಷ ಹಣ ಬಾಡಿಗೆ ಬಾಕಿ ಇರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ ಮಾತನಾಡಿ ಕಳೆದ ಸಭೆಯಲ್ಲಿ ನಾವು ಚರ್ಚೆ ಮಾಡಿದ ವಿಚಾರ ಈ ಸಭೆಯ ನಡಾವಳಿಯಲ್ಲಿ ಮುದ್ರಣವೇ ಮಾಡಿಲ್ಲ. 4 ನೇ ವಾರ್ಡ್ ನಲ್ಲಿ ನಡೆದ ಪೈಪ್ ಲೈನ್ ಬಿಲ್ ಪಾವತಿ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಆದರೆ ನಡಾವಳಿಯಲ್ಲಿ ಕೈ ಬಿಡಲಾಗಿದೆ ಎಂದು ಕಿಡಿಕಾರಿದ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಕಾಂಪೌಂಡ್ ಬಿದ್ದು ಬಹಳ ವರ್ಷವಾಗಿದೆ. ಬಾಕಿ ಇರುವ ಹಳೇಯ ತಡೆ ಗೋಡೆ ತೆರವು ಮಾಡಬೇಕು. ಇಲ್ಲವಾದಲ್ಲಿ ಜೀವಹಾನಿ ಆಗುವ ಸಂಭವ ಇದೆ. ಈ ಹಿನ್ನಲೆ ಅನುದಾನ ಬಿಡುಗಡೆ ಮಾಡಿ ಹೊಸದಾಗಿ ಕಾಂಪೌಂಡ್ ನಿರ್ಮಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು. ಕೂಡಲೇ ಸ್ಪಂದಿಸಿದ ಶಾಸಕರು ಎಚ್ ಎಎಲ್ ಘಟಕದ ಸಿಎಸ್ಆರ್ ಫಂಡ್ ಮೂಲಕ ಕಾಂಪೌಂಡ್ ನಿರ್ಮಿಸುವ ಭರವಸೆ ನೀಡಿದರು.

ಬಡಾವಣೆಯ ರಸ್ತೆಗಳಿಗೆ ಶೀಟ್ ಹಾಕಿಕೊಂಡು ಕಾರುಗಳನ್ನು ನಿಲ್ಲಿಸುವುದು, ಹೂವಿನಗಿಡ ಬೆಳೆದು ಬೇಲಿ ಹಾಕಿರುವುದು ತೆರವು ಮಾಡಲು ಸ್ಥಳೀಯ ಸದಸ್ಯರನ್ನು ಮುಂದಿಟ್ಟುಕೊಂಡು ಕೆಲಸ ಮಾಡಿ ಎಂದು ಸದಸ್ಯ ಸಿ.ಮೋಹನ್ ಆಗ್ರಹಿಸಿದರು. ತೆರವು ಕಾರ್ಯಾಚರಣೆಗೆ ಯಾರೂ ಅಡ್ಡಿಪಡಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ ಶಾಸಕರು ವ್ಯವಸ್ಥೆ ಹದಗೆಟ್ಟಿದೆ. ಅಧಿಕಾರಿಗಳು ಕೆಲಸ ಮಾಡುವಾಗ ಸದಸ್ಯರೇ ಅಡ್ಡಿ ಮಾಡುವ ಬಗ್ಗೆ ಕೇಳಿದ್ದೇನೆ. ಈ ವಿಚಾರದಲ್ಲಿ ಒಗ್ಗಟ್ಟಿನಿಂದ ಒತ್ತುವರಿ ತೆರವು ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಹೇರೂರು ಕೆರೆಗೆ ತೆರಳುವ ಮಾರ್ಗದಲ್ಲಿ ಕೋಳಿ ಮತ್ತು ಮೀನಿನ ತ್ಯಾಜ್ಯ ಎಸೆಯುತ್ತಿರುವುದು ಸರಿಯಲ್ಲ. ಈ ಬಗ್ಗೆ ಹಲವು ಬಾರಿ ಕೇಳಿದರೂ ಅಧಿಕಾರಿಗಳು ಕೆಲಸ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸದಸ್ಯ ಜಿ.ಸಿ.ಕೃಷ್ಣಮೂರ್ತಿ ಲೈಬ್ರರಿ ಪಕ್ಕದ ರಸ್ತೆ ಡಾಂಬರ್ ಕಂಡಿಲ್ಲ. ವಾಹನ ಸಂಚಾರ ಅತಿಯಾದ ಈ ರಸ್ತೆಗೆ ಡಾಂಬರು ಹಾಕಲು ಆಗ್ರಹಿಸಿದರು. ಈ ವಿಚಾರಕ್ಕೆ ಸಾಥ್ ನೀಡಿದ ಸದಸ್ಯ ಸಿ.ಮೋಹನ್ ಒಂದು ಬದಿ ಚರಂಡಿ ಇದ್ದು ಮತ್ತೊಂದು ಬದಿಗೆ ಚರಂಡಿ ಕಟ್ಟಿ ಸಿಸಿ ರಸ್ತೆ ನಿರ್ಮಾಣ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಪಾರ್ಕ್ ನಿರ್ವಹಣೆ ಮಾಡಲು ಬರುವ ಯಾರೇ ಆಗಿರಲಿ ಪಟ್ಟಣ ಪಂಚಾಯಿತಿಗೆ ಕಟ್ಟ ಬೇಕಾದ ಬಾಕಿ ತೆರಿಗೆ ಅಥವಾ ಬಾಡಿಗೆ ಕಟ್ಟಿ ಮುಂದುವರೆಯಲು ಸದಸ್ಯ ಶಶಿಕುಮಾರ್ ಚರ್ಚಿಸಿದರು.

ಮಳೆ ಬಂದಾಗ ಎಪಿಎಂಸಿ ಮುಂಭಾಗ ಚರಂಡಿ ನೀರು ರಸ್ತೆಗೆ ಹಾಗೂ ಪಪಂ ಅಂಗಡಿ ಮಳಿಗೆಗಳಿಗೆ ನುಗ್ಗುತ್ತಿದೆ. ದೊಡ್ಡ ಚರಂಡಿ ಹಾಗೂ ಸೇತುವೆ ಮರು ನಿರ್ಮಾಣ ಮಾಡಬೇಕಿದೆ. ಹಾಗೂ ಬಸ್ ನಿಲ್ದಾಣದಲ್ಲಿ ಸಹ ನೀರು ನಿಲ್ಲುತ್ತಿದೆ. ಈ ಜಾಗವನ್ನು ಅಚ್ಚಕಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು ಮಾಡಲು ಸದಸ್ಯ ಜಿ.ಆರ್.ಶಿವಕುಮಾರ್ ಮನವಿ ಮಾಡಿದರು. ಅಧ್ಯಯನ ಪ್ರವಾಸ ಕೈಗೊಂಡ ಪಟ್ಟಣ ಪಂಚಾಯಿತಿ ಸದಸ್ಯರ ಜೊತೆ ಬೇರೆಯವರ ಪ್ರವಾಸ ಅಗತ್ಯವಿಲ್ಲ ಎಂದು ಸದಸ್ಯೆ ಸವಿತಾ ಎಸ್.ಗೌಡ ಆಕ್ಷೇಪ ವ್ಯಕ್ತಪಡಿಸಿದರು. ಮಹಿಳಾ ಸದಸ್ಯರ ಜೊತೆ ಅವರ ಗಂಡಂದಿರ ಪ್ರವಾಸ ಮಾಡಿದ್ದಲ್ಲಿ ಪ್ರತ್ಯೇಕ ಹಣ ನೀಡಬೇಕಿದೆ ಎಂದು ಹಿರಿಯ ಸದಸ್ಯ ಮಹಮದ್ ಸಾದಿಕ್ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾದ ಯುಜಿಡಿ ಒಳಚರಂಡಿ ಕೊಳವೆ ಮಾರ್ಗದ ಒಟ್ಟು 1600 ಚೆಂಬರ್ ಹಾಗೂ ಮ್ಯಾನ್ ಹೋಲ್ ಪರಿಶೀಲನೆ ಹಾಗೂ ಸ್ವಚ್ಛತೆಗೆ ಹಣ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಯಿತು.

ಹೀಗೆ ಹತ್ತು ಹಲವು ಸಮಸ್ಯೆ ಆಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಸದಸ್ಯರು ಒಗ್ಗೂಡಿ ಕೆಲಸ ಮಾಡಬೇಕಿದೆ. ಅವಧಿಯ ಅಂತ್ಯದ ವೇಳೆ ಯಾವುದೇ ಗೊಂದಲ ಮಾಡಿಕೊಳ್ಳದೆ ಅಧ್ಯಯನ ಪ್ರವಾಸ ಮುಗಿಸಿ ಬಂದು ಪಟ್ಟಣದ ಅಭಿವೃದ್ಧಿಗೆ ಎಲ್ಲರೂ ಒಮ್ಮತದ ಸಹಕಾರ ನೀಡುವಂತೆ ಸೂಚಿಸಿದರು. ನಂತರ ಮತ್ತಷ್ಟು ಅಭಿವೃದ್ದಿ ವಿಚಾರ ಹಾಗೂ ರಸ್ತೆ ಅಭಿವೃದ್ಧಿ ಪಟ್ಟಿ ಮಾಡಲಾಯಿತು.

ಸಭೆಯಲ್ಲಿ ಪಪಂ ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಮುಖ್ಯಾಧಿಕಾರಿ ಮಂಜುಳಾದೇವಿ, ಇಂಜಿನಿಯರ್ ಬಿಂದುಸಾರ ಸೇರಿದಂತೆ ಎಲ್ಲಾ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...