ಗುಬ್ಬಿ | ನಿಖಿಲ್ ಕುಮಾರಸ್ವಾಮಿ ಪಟ್ಟಾಭಿಷೇಕ ಒಪ್ಪಿಕೊಂಡ ಕಾಂಗ್ರೆಸ್ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ

Date:

Advertisements

ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ. ನಿಖಿಲ್ ಗೆಲುವು ಖಚಿತ ಎಂದು ತುರುವೇಕೆರೆ ಶಾಸಕ ಎಂ..ಟಿ.ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ, ಮಾವಿನಹಳ್ಳಿ ಹಾಗೂ ಚಂಗಾವಿ ಕೆರೆಗಳು ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಣೆ ಮಾಡಿದ ನಂತರ ಮಾತನಾಡಿ ಮಾಜಿ ಸಂಸದ ಸುರೇಶ್ ಅವರು ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ. ಮಾಜಿ ಪ್ರಧಾನಿ ಅವರ ವರ್ಚಸ್ಸು ಎಲ್ಲರಿಗೂ ತಿಳಿದಿದೆ. ಆಂಬುಲೆನ್ಸ್ ಎಂಬ ಮಾತು ಸರಿಯಲ್ಲ. ಹೆಲಿಕಾಪ್ಟರ್ ನಲ್ಲಿ ಬಂದು ಪಟ್ಟಾಭಿಷೇಕ ನೆರವೇರಿಸುತ್ತಾರೆ. ಗೆಲುವಿನ ಸೂಚನೆಗೆ ಹತಾಶೆಯಲ್ಲಿ ಅಸಂಬದ್ಧ ಪದ ಬಳಕೆ ಸಲ್ಲದು ಎಂದು ಖಂಡಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೀಶ್ವರ್ ಅವರಿಗೆ ಟಿಕೆಟ್ ನೀಡಲು ಕುಮಾರಣ್ಣ ಆಹ್ವಾನ ನೀಡಿದ್ದರು. ಆದರೆ ಈ ಮೊದಲೇ ಒಪ್ಪಂದ ಮಾಡಿಕೊಂಡ ಹಿನ್ನಲೆ ಟಿಕೆಟ್ ನೀಡಲಿಲ್ಲ ಎಂದು ಸಿಂಪತಿ ಗಿಟ್ಟಿಸಿಕೊಳ್ಳುವ ನಾಟಕ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದ ಅವರು ತುಮುಲ್ ಒಕ್ಕೂಟದ ಚುನಾವಣೆಯಲ್ಲಿ ತುರುವೇಕೆರೆ ತಾಲ್ಲೂಕಿನ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವನವಿದೆ. ಕಾಂಗ್ರೆಸ್ ಪಕ್ಷ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಆದರೆ ನಾವು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಾಗುತ್ತಿದ್ದೇವೆ. ನಮ್ಮಲ್ಲಿ 113 ಮತಗಳಿದ್ದು 95 ಮತಗಳಿಗೆ ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು.

Advertisements
1000608439

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಬೃಹತ್ ಪಾದಯಾತ್ರೆ ಖಂಡಿತಾ ಮಾಡುತ್ತೇವೆ. 70 ಕಿಮೀ ನಾಲೆಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಹೆದ್ದಾರಿ ಬಂದ್ ಆಗಲಿದೆ. ಕೆಲ ಮುಖಂಡರು ಪೊಲೀಸ್ ಕೇಸ್ ಎಂದು ಹೆದರಿ ತಪ್ಪಿಸಿಕೊಳ್ಳುತ್ತಾರೆ. ಯಾರೋ ಎದೆಗುಂದುವ ಅವಶ್ಯವಿಲ್ಲ. ರೈತರು ಯಡೆಮಟ್ಟೆ ಜೊತೆ ಬರಲು ಖುದ್ದು ನಾನೇ ಕರೆ ನೀಡಿದ್ದೇನೆ. ಪೊಲೀಸರು ಸಾವಿರಾರು ರೈತರನ್ನು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಪಟ್ಟ ಕೆರೆಗಳು ಹೆಚ್ಚಾಗಿವೆ. ಹೇಮಾವತಿ ಅಚ್ಚುಕಟ್ಟು ಪ್ರದೇಶ ಘೋಷಣೆಗೆ ತುರುವೇಕೆರೆ ತಾಲ್ಲೂಕಿನ 55 ಸಾವಿರ ಹೆಕ್ಟೇರ್ ಜಮೀನು ಸೇರಿದೆ. ಗುಬ್ಬಿ ತಾಲ್ಲೂಕಿನ ಅಚ್ಚುಕಟ್ಟು ವಿಚಾರ ಅಲ್ಲಿನ ಶಾಸಕರು ಮಾತನಾಡುತ್ತಾರೆ ಎಂದು ಉತ್ತರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚನ್ನನೇಹಳ್ಳಿ ಮೂರ್ತಣ್ಣ, ನಂಜೇಗೌಡ, ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ನರಸೇಗೌಡ, ಹೋಬಳಿ ಅಧ್ಯಕ್ಷ ಜಗದೀಶ್, ಯುವ ಜೆಡಿಎಸ್ ಅಧ್ಯಕ್ಷ ನವೀನ್ ಕುಮಾರ್, ಶಾಸಕರ ಪುತ್ರ ವೆಂಕಟೇಶ್, ವೀರಣ್ಣಗುಡಿ ರಾಮಣ್ಣ, ಮಾವಿನಹಳ್ಳಿ ರವಿ, ಕೆ.ರಾಮಣ್ಣ, ಈಶ್ವರ್, ಕೃಷ್ಣೇಗೌಡ, ಅವ್ವೇರಹಳ್ಳಿ ಕೃಷ್ಣಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X