ಗುಬ್ಬಿ | ಕಾಲ್ತುಳಿತಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ : ಬಿಜೆಪಿ ಆರೋಪ

Date:

Advertisements

ಖಾಸಗಿ ಕ್ಲಬ್ ಆಯೋಜನೆಯ ಕ್ರಿಕೆಟ್ ಪಂದ್ಯಾವಳಿ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ವಿಜಯೋತ್ಸವ ಆಚರಣೆ ಮಾಡಿದ ಕಾಂಗ್ರೆಸ್ ಸರ್ಕಾರ 11 ಜನ ಕ್ರಿಕೆಟ್ ಅಭಿಮಾನಿಗಳ ಬಲಿ ಪಡೆದಿದೆ. ಈ ದುರಂತಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ. ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ತಾಲ್ಲೂಕು ಘಟಕ ಒತ್ತಾಯಿಸಿತು.

ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಆಗಿರುವ ದುರ್ಘಟನೆಗೆ ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿರುವ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ಸಲ್ಲಿಸಬೇಕು ಎಂದು ಒಕ್ಕೊರಲಿನ ಒತ್ತಾಯ ಮಾಡಿದರು.

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಎತ್ತಿಗೆ ಜ್ವರ ಬಂದ್ರೆ ಕೋಣನಿಗೆ ಬರೆ ಎಂಬಂತೆ ಕಾಂಗ್ರೆಸ್ ಸರ್ಕಾರದ ನಡೆ ಕಂಡು ಬಂದಿದೆ. ಸರ್ಕಾರವೇ ಮುಂದೆ ನಿಂತು ವಿಜಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದೆ. ಕಾಲ್ತುಳಿತಕ್ಕೆ ಅಮಾಯಕರ ಬಲಿ ಪಡೆದು ಈಗ ಪೊಲೀಸ್ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ನುಣುಚಿಕೊಂಡಿದೆ. ಖಾಸಗಿ ಕ್ರೀಡಾಕೂಟದಲ್ಲಿ ಗೆದ್ದರೆ ಈ ಮಟ್ಟದ ಸಂಭ್ರಮ ಅಗತ್ಯವಿಲ್ಲ. ಇವರೇ ಆಡಿದಂತೆ ಬೀಗುತ್ತಾ ಸಿದ್ದರಾಮಯ್ಯ ಬ್ಯಾಟಿಂಗ್, ಶಿವಕುಮಾರ್ ಬೋಲಿಂಗ್ ಮಾಡಿದಂತೆ ವರ್ತಿಸಿ ಈಗ ಕ್ರಿಕೆಟ್ ಬೋರ್ಡ್ ಸಮಿತಿಯ ಮೇಲೆ ಗೂಬೆ ಕೂರಿಸಿದ್ದಾರೆ. ಇದೆಲ್ಲಾ ಅಚಾತುರ್ಯಕ್ಕೆ ಸಿದ್ದರಾಮಯ್ಯ ಅವರೇ ಹೊಣೆ ಹೊರಬೇಕು ಎಂದು ಕಿಡಿಕಾರಿದರು.

Advertisements

ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಕ್ರಿಕೆಟ್ ಯಾವ ಸಂಸ್ಥೆ ಈ ವಿಜಯೋತ್ಸವ ಆಚರಣೆಗೆ ಒಪ್ಪಿಗೆ ನೀಡಿಲ್ಲ. ಪೊಲೀಸ್ ಇಲಾಖೆ ಕೂಡ ಸ್ಪಷ್ಟವಾಗಿ ಹೇಳಿತ್ತು ಕಾರ್ಯಕ್ರಮ ಮಾಡುವುದು ಬೇಡವೆಂದು. ಆದರೆ ಸರ್ಕಾರವೇ ಒತ್ತಾಯದಿಂದ ಆಯೋಜನೆ ಮಾಡಿ ಅಮಾಯಕ 11 ಜನರನ್ನು ಬಲಿ ಪಡೆದಿದೆ. ರಾಷ್ಟ್ರ ಅಥವಾ. ರಾಜ್ಯ ಪ್ರತಿನಿಧಿಸಿ ಪ್ರತಿಷ್ಠಿತ ಕ್ರೀಡೆ ಗೆದ್ದವರಿಗೆ ಸನ್ಮಾನ ಮಾಡುವುದು ಸರಿ. ಆದರೆ ಖಾಸಗಿ ಕ್ಲಬ್ ಆಯೋಜನೆಯ ಕ್ರಿಕೆಟ್ ಪಂದ್ಯಾವಳಿಗೆ ಇಷ್ಟೆಲ್ಲಾ ಬಿಲ್ಡಪ್ ಬೇಕಿಲ್ಲ. ಅಮಾಯಕರ ಸಾವಿಗೆ ಮುಖ್ಯಮಂತ್ರಿಗಳು ನೇರ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ ಮಾತನಾಡಿ ಕಳೆದೆರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕುರಿತು ಬಿಜೆಪಿ ಹಲವು ಬಾರಿ ರಸ್ತೆಗಿಳಿದಿದೆ. ಉತ್ತರ ಪ್ರದೇಶದ ಮುಖ್ಯಂತ್ರಿಗಳ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದ ಸಿದ್ದರಾಮಯ್ಯ ಅವರು ಯೋಚನೆ ಮಾಡಬೇಕಿದೆ. 66 ಕೋಟಿ ಜನರನ್ನು ಒಂದು ಕಾರ್ಯಕ್ರಮದಲ್ಲಿ ಸೇರಿಸಿ ಒಂದು ಚೂರೂ ಲೋಪ ಬಾರದಂತೆ ಮಹಾ ಕುಂಭಮೇಳ ಯಶಸ್ವಿಯಾಗಿ ನಡೆಸಿದ್ದರು. ಆದರೆ ಇಲ್ಲಿ ಎರಡು ಲಕ್ಷ ಜನರನ್ನು ಹತೋಟಿಗೆ ತರಲಾಗದೆ ಹನ್ನೊಂದು ಜನರ ಬಲಿ ಪಡೆದಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಮಾಜಿ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ, ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಸಿ.ಕೃಷ್ಣಮೂರ್ತಿ, ಮುಖಂಡರಾದ ಯತೀಶ್, ಸಿದ್ದರಾಮಯ್ಯ, ಪುಟ್ಟರಾಜು, ಎಚ್.ಎಲ್.ಬಸವರಾಜು, ನರಸಿಂಹಮೂರ್ತಿ, ಪ್ರಮೋದ್, ಕೃಷ್ಣಮೂರ್ತಿ, ಅರೇನಹಳ್ಳಿ ರಾಜು, ಸ್ವಾಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X