ಗುಬ್ಬಿ | ಜೈ ಭೀಮ್ ಹಾಡು ಹಾಕಿದ್ದಕ್ಕೆ ದಲಿತ ಯುವಕನ ಮೇಲೆ ಗಂಭೀರ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು

Date:

ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿ ಬರುತ್ತಿದ್ದ ಅಂಬೇಡ್ಕರ್ ಅವರ ಜೈ ಭೀಮ್ ಹಾಡು ಕೇಳಿ ಆಕ್ರೋಶಗೊಂಡು ಹಾಲಿನ ವಾಹನ ತಡೆದು ಈ ಹಾಡು ಹಾಕದಂತೆ ವಾಹನದಲ್ಲಿದ್ದ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮರ್ಮಾಂಗಕ್ಕೆ ಗಂಭೀರವಾಗಿ ಹೊಡೆದು ಜಾತಿ ನಿಂದನೆ ಮಾಡಿರುವ ಘಟನೆಯ ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ಗುಬ್ಬಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದ ರೈಲ್ವೆ ಇಲಾಖೆ ಪೊಲೀಸ್ ಚಂದ್ರಶೇಖರ್ ಮತ್ತು ಮತ್ತೊಬ್ಬ ವ್ಯಕ್ತಿ ನರಸಿಂಹರಾಜು ಎನ್ನುವವರು ಜಾತಿ ನಿಂದನೆ ಮಾಡಿ ದಲಿತ ಯುವಕನ ಮರ್ಮಾಂಗಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಹಲ್ಲೆಗೊಳಗಾದ 19 ವರ್ಷದ ದೀಪು ಎಂಬಾತ ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎನ್ನಲಾಗಿದ್ದು ಮತ್ತೊಬ್ಬ ನರಸಿಂಹಮೂರ್ತಿ ಸೇರಿದಂತೆ ಇಬ್ಬರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಂದಿನಂತೆ ಹಾಲಿನ ವಾಹನ ಚಾಲನೆ ಮಾಡಿಕೊಂಡು ಇಬ್ಬರು ದಲಿತ ಸಮುದಾಯದ ಯುವಕರು ಸರಿಸುಮಾರು ಸಂಜೆ 6 ಗಂಟೆ ಸಮಯದಲ್ಲಿ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಅವರಿಗೆ ಇಷ್ಟವಾದ ಬಾಬಾ ಸಾಹೇಬ ಅಂಬೇಡ್ಕರ್ ಅವರ ಬಗೆಗಿನ ಜೈ ಭೀಮ್ ಹಾಡು ಹಾಕಿಕೊಂಡು ಬರುತ್ತಿದ್ದ ವೇಳೆ ಈ ಇಬ್ಬರು ವ್ಯಕ್ತಿಗಳು ರಸ್ತೆಯಲ್ಲಿ ಅಡ್ಡಗಟ್ಟಿ ನೀವು ಯಾವ ಜಾತಿಯವರು ಎಂದು ಜಾತಿ ನಿಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೊತೆಗೆ ಈ ಹಾಡು ಎಲ್ಲಿಯೂ ಹಾಕದಂತೆ ತಾಕೀತು ಮಾಡಿರುವ ಘಟನೆ ಖಂಡನೀಯ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಎಂದು ದಲಿತ ಮುಖಂಡರು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...