ಗುಬ್ಬಿ | ಕಡಬದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ದಸಂಸ ಒತ್ತಾಯ

Date:

ಇತಿಹಾಸ ಪ್ರಸಿದ್ಧ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಸ್ಥಳ ನೀಡಬೇಕು. ಹಾಗೆಯೇ ಪುತ್ಥಳಿ ನಿರ್ಮಿಸಿ ಅನಾವರಣಗೊಳಿಸುವ ಸಂಪೂರ್ಣ ಜವಾಬ್ದಾರಿ ಸ್ಥಳೀಯ ಗ್ರಾಮ ಪಂಚಾಯಿತಿ ಮೀಸಲು ಹಣದಲ್ಲಿ ನಡೆಸಿಕೊಡಬೇಕು ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಕಡಬ ಶಂಕರ್ ಒತ್ತಾಯಿಸಿದರು.

- Advertisement -

ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಹಾಗೂ ಪಿಡಿಓ ಅವರಿಗೆ ಮನವಿ ನೀಡಿ ಮಾತನಾಡಿದ ಅವರು ನಾಲ್ಕು ಲಕ್ಷ ಅಂದಾಜು ವೆಚ್ಚದ ಪ್ರತಿಮೆ ನಿರ್ಮಾಣಕ್ಕೆ ಪಂಚಾಯಿತಿವತಿಯಿಂದ ಶೇಕಡಾ 25 ಮೀಸಲು ಹಣ ಬಳಕೆ ಮಾಡಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಎಲ್ಲಾ ಸದಸ್ಯರ ನಿರ್ಣಯದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲು ಹಣವನ್ನು ಬಳಸಬೇಕು. ಗ್ರಾಮ ಪಂಚಾಯಿತಿ ಸಮೀಪದಲ್ಲೇ ಪುತ್ಥಳಿ ಅನಾವರಣ ಮಾಡಬೇಕು. ಮುಂದಿನ ಸಭೆಯಲ್ಲಿ ತೀರ್ಮಾನ ಮಾಡಬೇಕು. ವಿಳಂಬ ಧೋರಣೆ ಅನುಸರಿಸಿದರೆ ಪಂಚಾಯಿತಿ ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಗ್ರಾಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷೆ ಕಲ್ಪನಾ ಹಾಗೂ ಪಿಡಿಓ ನಟರಾಜ್ ಮುಂದಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಸದಸ್ಯರ ಒಮ್ಮತ ಪಡೆದು ಕೆಲಸ ಮಾಡಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಸುರೇಶ್, ರಾಮಯ್ಯ, ಗೋಪಿಕೃಷ್ಣ, ದಯಾನಂದ್, ಗೋವಿಂದಯ್ಯ, ರಾಜು, ರಂಗರಾಜು, ಸೋಮಶೇಖರ್, ರಾಕೇಶ್, ತೇಜಸ್ ಕುಮಾರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...