ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನ ಹಾಗೂ ಬಾಬು ಜಗಜೀವನರಾಂ ಅವರ 118 ಜನ್ಮ ದಿನದ ಅಂಗವಾಗಿ ಸಾಧನೆಗೈದ ಮಹನೀಯರಿಗೆ ನೀಡುವ ಪ್ರಶಸ್ತಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ವೀಣಾ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಪರಿಶಿಷ್ಟ ಜಾತಿ ಹಾಗೂ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಲು ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಪ್ರಶಸ್ತಿ ನೀಡುವ ಕೆಲಸ ಮಾಡುವ ಸಮಾಜ ಕಲ್ಯಾಣ ಇಲಾಖೆಗೆ ಇದೇ ತಿಂಗಳ 27 ರೊಳಗೆ ತಮ್ಮ ಅಗತ್ಯ ದಾಖಲೆ ಹಾಗೂ ಸಾಧನೆಗೈದ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಿದರು.
2025 ನೇ ಸಾಲಿನ ಈ ಪ್ರಶಸ್ತಿಯನ್ನು ಏಪ್ರಿಲ್ ಮಾಹೆ 5 ರಂದು ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆಯಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ ಅವರು ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಮನವಿ ಮಾಡಿದರು.