ಗುಬ್ಬಿ | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸೆ. 12ಕ್ಕೆ ಬೃಹತ್ ತಮಟೆ ಚಳುವಳಿ : ಮಾರಶೆಟ್ಟಿಹಳ್ಳಿ ಬಸವರಾಜು

Date:

Advertisements

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ನೇತೃತ್ವದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಗುಬ್ಬಿ ದಸಂಸ ತಾಲ್ಲೂಕು ಸಂಚಾಲಕ ಮಾರಶೆಟ್ಟಿಹಳ್ಳಿ ಬಸವರಾಜು ತಿಳಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೇಂದ್ರದಲ್ಲೂ ಚಳುವಳಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಗುಬ್ಬಿ ತಾಲೂಕು ದಸಂಸ ಸಂಘಟನಾ ಸಂಚಾಲಕ ಜಿ ಅರಿವೇಸಂದ್ರ ಕೃಷ್ಣಪ್ಪ ಮಾತನಾಡಿ ತುಮಕೂರು ಜಿಲ್ಲೆಯಲ್ಲಿ ನಡೆಯುವ ಹೋರಾಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಭಾಗವಹಿಸಲಿದ್ದಾರೆ. ಈ ಬೃಹತ್ ತಮಟೆ ಚಳುವಳಿ ನಡೆಸುವ ಮೂಲಕ ಒಳ ಮೀಸಲಾತಿ ಹೋರಾಟವನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರವನ್ನು ಎಚ್ಚರಗೊಳಿಸುವ ಕೆಲಸವನ್ನು ಮಾಡಬೇಕು ಎಂದು ಮನವಿ ಮಾಡಿದರು.

Advertisements

ಆದಿ ಜಾಂಬವ ಯುವ ಬ್ರಿಗೇಡ್ ತಾಲೂಕ ಅಧ್ಯಕ್ಷ ಬಸವರಾಜು ಮಾತನಾಡಿ ಒಳ ಮೀಸಲಾತಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರ ಕೂಡಲೆ ಸಮುದಾಯದ ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಈ ಹೋರಾಟಕ್ಕೆ ಆದಿ ಜಾಂಬವ ಯುವ ಬ್ರಿಗೇಡ್ ನ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.

ಹಿರಿಯ ಸಲಹೆಗಾರ ಮಡೇನಹಳ್ಳಿ ದೊಡ್ಡಯ್ಯ ಮಾತನಾಡಿ ಪ್ರೊ. ಬಿ ಕೃಷ್ಣಪ್ಪನವರ ಜನ್ಮ ದಿನ ಜೂನ್ 9ರಂದು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬೇಕು ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ವಸತಿ ನಿಲಯಗಳಲ್ಲಿ ಹೊರ ಸಂಪನ್ಮೂಲದಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು. ಬಾಕಿ ಉಳಿದಿರುವ ಬ್ಯಾಕ್ ಲಾಕ್ ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣ ಭರ್ತಿ ಮಾಡಬೇಕೆಂಬ ಹಲವು ಹೊಕ್ಕುತ್ತಾಯಗಳನ್ನು ಬೃಹತ್ ತಮಟೆ ಚಳುವಳಿಯ ಮೂಲಕ ಮಂಡಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಕುಂದು ಕೊರತೆ ವಿಭಾಗದ ಸಿ ಎಸ್ ಪುರ ಬೆಟ್ಟಸ್ವಾಮಿ, ತಾಲೂಕು ಉಸ್ತುವಾರಿ ನರೇಂದ್ರ ಕುಮಾರ್ ( ಕಪಾಲಿ ), ಕಾರ್ಮಿಕ ಒಕ್ಕೂಟದ ಸುರೇಶ್ ಕುಂದರನಹಳ್ಳಿ, ನಗರ ಸಂಚಾಲಕ ಕೃಷ್ಣಸ್ವಾಮಿ, ಆಂತರಿಕ ಶಿಸ್ತು ವಿಭಾಗದ ನಿಟ್ಟೂರು ಜಗದೀಶ್ ಮುಂತಾದವರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X