ಗುಬ್ಬಿ | ಮಾರಶೆಟ್ಟಿಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಗಂಗಮ್ಮ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.

- Advertisement -

ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ ಅಧ್ಯಕ್ಷರಾಗಿದ್ದ ಯೋಗಿತಾ ಅವರು ನೀಡಿದ ರಾಜೀನಾಮೆ ಹಿನ್ನಲೆ ತೆರವಾದ ಸಾಮಾನ್ಯ ಮಹಿಳಾ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿ ಗಂಗಮ್ಮ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ನೂತನ ಅಧ್ಯಕ್ಷೆ ಗಂಗಮ್ಮ ಮಾತನಾಡಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಅಭಿವೃದ್ದಿ ವಿಚಾರದಲ್ಲಿ ಒಕ್ಕೊರಲಿನ ಅಭಿಪ್ರಾಯ ಪಡೆದು ಮಾದರಿ ಗ್ರಾಮ ಪಂಚಾಯಿತಿ ಹೆಗ್ಗಳಿಕೆಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಚ್ಎಎಲ್ ಘಟಕ ಸ್ಥಾಪನೆ ನಂತರ ವಿಶ್ವ ವ್ಯಾಪ್ತಿ ಗುರುತಿಸಿಕೊಂಡ ನಮ್ಮ ಪಂಚಾಯಿತಿಯ ಎಲ್ಲಾ ಗ್ರಾಮಗಳಿಗೆ ಅವಶ್ಯ ರಸ್ತೆ, ನೀರು, ಬೀದಿ ದೀಪ ಒದಗಿಸಿ ಚುನಾಯಿತ ಪ್ರತಿನಿಧಿಗಳ ಮೂಲಕ ಸರ್ಕಾರದ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಪಂ ಉಪಾಧ್ಯಕ್ಷೆ ಅನುಸೂಯದೇವಿ, ಸದಸ್ಯರಾದ ಸಿದ್ದರಾಮೇಗೌಡ, ಶಿವಸ್ವಾಮಿ, ವಿಜಯ ಗಂಗಾಧರ್, ರಾಧಾ, ಚಂದ್ರಯ್ಯ, ತಿಮ್ಮರಾಜು, ನಯನ, ಯೋಗೀಶ್, ಮುನೇಶ್, ಗಂಗಮ್ಮ, ಮಮತಾ, ತಿಮ್ಮಯ್ಯ, ಕಲಾವತಿ, ಪ್ರಸಾದ್, ಜಯಮ್ಮ, ಮೋಹನ್ ಕುಮಾರ್, ನಾಗರಾಜು, ಮಂಗಳಗೌರಮ್ಮ, ವನಿತಾ, ಬಸವರಾಜು, ಮುಖಂಡರಾದ ಸಾಕಸಂದ್ರ ದೇವರಾಜ್, ಪುಟ್ಟರಾಜು, ತಿಮ್ಲಿಪಾಳ್ಯ ಶಶಿಧರ್, ಪಿಡಿಓ ತನುಜಾ ಬನಕಟ್ಟೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...