ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Date:

 ಆರೋಗ್ಯವಾಗಿರಲು ಆಹಾರ ಮತ್ತು ನಮ್ಮ ಜೀವನಶೈಲಿಯ ಜೊತೆಗೆ ಶುಚಿತ್ವವೂ ಬಹಳ ಮುಖ್ಯವಾಗಿರುತ್ತದೆ. ರೋಗಾಣುಗಳು ನಮ್ಮಿಂದ ದೂರವಿರಬೇಕು ಎಂದರೆ ಆಗಾಗ ಕೈ ತೊಳೆಯಬೇಕು. ಈ ನಿಟ್ಟಿನಲ್ಲಿ ಅಕ್ಟೋಬರ್ ಮಾಹೆಯ 15 ರಂದು ವಿಶ್ವ ಕೈ ತೊಳೆಯುವ ದಿನವಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಕೈ ತೊಳೆಯುವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

- Advertisement -

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ.ಶೇಖರ್ ಮಾತನಾಡಿ ಬಹುಪಾಲ ರೋಗ ಬರುವುದು ಬರುವುದು ನಮ್ಮ ಕೈಗಳ ಮೂಲಕ. ಹಾಗಾಗಿ ಅದನ್ನು ಶುಚಿಯಾಗಿ ಇಟ್ಟುಕೊಂಡರೆ ಪದೇ ಪದೇ ಕಾಡುವ ಆರೋಗ್ಯ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದು. ಹಾಗಾಗಿ ನಾವು ಸುರಕ್ಷಿತವಾಗಿ ಮತ್ತು ಆರೋಗ್ಯಕರವಾಗಿರಲು ಆಗಾಗ ಕೈ ತೊಳೆಯುವು ಬಹಳ ಮುಖ್ಯ ಎಂಬುದನ್ನು ನೆನಪಿಸುವ ಸಲುವಾಗಿ ಜಾಗತಿಕವಾಗಿ ಅಕ್ಟೋಬರ್ 15 ರಂದು ಕೈ ತೊಳೆಯುವ ದಿನವನ್ನು ಆಚರಿಸಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕೈ ತೊಳೆಯುವ ಬಗ್ಗೆ ಜಾಗೃತಿ ಮೂಡಿಸಿ ಸೋಪಿನ ಮೂಲಕ ಸ್ವಚ್ಚವಾಗಿ ಕೈ ತೊಳೆದು ಪ್ರತಿ ದಿನ ಹೀಗೆಯೇ ಕೈ ತೊಳೆಯಲು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ರಾಮಕ್ಕ, ಮಹೇಂದ್ರ ಕುಮಾರ್, ಗೀತಾ ನಂದೀಶ್, ಗ್ರಾಪಂ ಗುಮಾಸ್ತೆ ಗೀತಾ, ಉಪೇಂದ್ರ ಕುಮಾರ್, ನಾಗಣ್ಣ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...