ಗುಬ್ಬಿ | ಅಸಮರ್ಪಕ ವಿದ್ಯುತ್ ಸರಬರಾಜು : ಸುರುಗೇನಹಳ್ಳಿ, ಮಲ್ಲಪ್ಪನಹಳ್ಳಿ ಫೀಡರ್ ಭಾಗದ ರೈತರಿಂದ ಬೆಸ್ಕಾಂ ಕಚೇರಿ ಮುತ್ತಿಗೆ

Date:

Advertisements

ದಿನಕ್ಕೆ ಅರ್ಧ ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಮಲ್ಲಪ್ಪನಹಳ್ಳಿ ಹಾಗೂ ಸುರುಗೇನಹಳ್ಳಿ ಫೀಡರ್ ಗೆ ಒಳಪಟ್ಟ ಸುಮಾರು ಹದಿನೈದು ಗ್ರಾಮದ ರೈತರು ದಿಢೀರ್ ಗುಬ್ಬಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ಜಡಿದು ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಬೆಸ್ಕಾಂ ಕಚೇರಿ ಮುಂದೆ ಜಮಾಯಿಸಿದ ನೂರಾರು ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಬಾಗಿಲು ಹಾಕಿ ಸುಮಾರು ಮೂರು ಗಂಟೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ವಿದ್ಯಾ ಸಾಗರ್, ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರ್ಕಾರಿ ಪೋನ್ ಕೂಡಾ ಸ್ವಿಚ್ ಆಫ್ ಮಾಡುತ್ತಾರೆ. ಸಮಸ್ಯೆ ಆಲಿಸುವವರೇ ಹೀಗೆ ಮಾಡಿದರೆ ಸಾಲ ಮಾಡಿಕೊಂಡು ಹಾಕಿಸಿದ ಬೋರ್ ವೆಲ್ ವಿಫಲವಾದರೆ ರೈತರು ಸಾಲ ತೀರಿಸಲಾಗದೆ ಮನೆ ತೋಟ ಮಾರಿಕೊಳ್ಳುವ ದುಸ್ಥಿತಿ ಎದುರಾಗಿದೆ. ಬೇಸಿಗೆ ಆರಂಭದಲ್ಲೇ ಕರೆಂಟ್ ಸಮಸ್ಯೆ ರೈತಾಪಿ ವರ್ಗವನ್ನು ಕಂಗಾಲಾಗಿಸಿದೆ. ಸುಮಾರು 20 ಗ್ರಾಮಕ್ಕೆ ಏಕಾಏಕಿ ಕರೆಂಟ್ ನೀಡುವುದು ಕಡಿಮೆ ಆಗಿದೆ. ಓವರ್ ಲೋಡ್ ಎಂಬ ಪದ ಕೇಳಿ ಜಿಗುಪ್ಸೆ ಬಂದಿದೆ. ಅರ್ಧ ಗಂಟೆ ಕರೆಂಟ್ ಬಂದರೆ ತೋಟ ಉಳಿಯುವುದು ಕಷ್ಟ. ತೆಂಗು ಅಡಿಕೆ ನಂಬಿದ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಮಲ್ಲಪ್ಪನಹಳ್ಳಿ ಭಾಗದಲ್ಲಿ ಚಿರತೆ ಕಾಟವಿದೆ. ರಾತ್ರಿ ವೇಳೆ ಇಡೀ ಗ್ರಾಮವೇ ಕಗ್ಗತ್ತಲಲ್ಲಿ ಇದ್ದು ಸಾಕು ಪ್ರಾಣಿಗಳನ್ನು ಚಿರತೆ ಹೊತ್ತೊಯ್ದ ಘಟನೆ ಸಾಕಷ್ಟು ನಡೆದಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೇಳಿದರೆ ಸಿಸಿ ಕ್ಯಾಮೆರಾ ಹಾಕಿಸಿಕೊಳ್ಳಿ ಅನ್ನುತ್ತಾರೆ. ನಾವೇನು ಮಾಡಬೇಕು ಎಂಬುದು ಅರಿಯದಾಗಿದೆ. ಎಲ್ಲದಕ್ಕೂ ವಿದ್ಯುತ್ ಸಮಸ್ಯೆ ಮೂಲವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಎಲ್ಲಾ ಕರೆಂಟ್ ಸಮಸ್ಯೆಗೆ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ನೀಡಬೇಕು. ಅಲ್ಲಿಯವರೆವಿಗೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

1001041740

ಗ್ರಾಪಂ ಮಾಜಿ ಸದಸ್ಯ ಗಂಗಾಧರ್ ಮಾತನಾಡಿ ಸರ್ಕಾರ ಏಳು ಗಂಟೆ ತ್ರೀ ಫೇಸ್ ಕರೆಂಟ್ ಎಂದು ಹೇಳಿತ್ತು. ಆದರೆ ಬೇಸಿಗೆ ಹುಟ್ಟುವ ಮುನ್ನವೇ ಕರೆಂಟ್ ಖೋತಾ ಎದುರಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮೂರು ತಾಸು ಪ್ರತಿಭಟನೆ ನಡೆಸಿದರೂ ಇಲ್ಲಿ ಕೇಳುವವರಿಲ್ಲ. ಸಹಾಯಕ ಅಭಿಯಂತರರು ಪೋನ್ ಕರೆ ಸ್ವೀಕರಿಸಲಿಲ್ಲ. ಈಗ ಬಂದೆ ಎನ್ನುತ್ತಲೇ ಮೂರು ತಾಸು ಕಳೆದಿದ್ದಾರೆ. ಕಚೇರಿ ಬಾಗಿಲು ಹಾಕಿದರೂ ಯಾಕೆ ಎಂದು ಕೇಳುವವರಿಲ್ಲ ಎಂದರೆ ಬೆಸ್ಕಾಂ ಅಧಿಕಾರಿಗಳ ಕಾರ್ಯ ವೈಖರಿ ಮೆಚ್ಚುವಂತದ್ದು ಎಂದು ವ್ಯಂಗ್ಯವಾಡಿದರು.

ಉಚಿತ ಕರೆಂಟ್ ರೈತರಿಗೆ ಬೇಕಿಲ್ಲ. ನಮ್ಮ ತೆರಿಗೆ ಹಣದಲ್ಲಿ ವೇತನ ಪಡೆಯುವ ಬೆಸ್ಕಾಂ ಅಧಿಕಾರಿಗಳು ರೈತರ ಕೆಲಸ ಮಾತ್ರ ಮಾಡುತ್ತಿಲ್ಲ. ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ದಿನವಿಡೀ ಧರಣಿ ನಡೆಸಿದರೂ ರೈತರನ್ನು ಕಡೆಗಣಿಸುವ ಕೆಲಸ ಅಧಿಕಾರಿಗಳು ಮಾಡಬಾರದು. ಅರಣ್ಯ ಪ್ರದೇಶದ ಪಕ್ಕದ ತೋಟದ ಮನೆಯಲ್ಲಿ ಚಿರತೆ ಕಾಟ ಹೆಚ್ಚಿದೆ. ಹಸು ಕರು, ಮೇಕೆ, ಕುರಿ, ನಾಯಿ ಹೊತ್ತೊಯ್ದ ಚಿರತೆ ರೈತರ ಮಕ್ಕಳನ್ನು ಬಲಿ ಪಡೆಯುವ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಬೆಸ್ಕಾಂ ಅಧಿಕಾರಿಗಳು ನೇರ ಹೊಣೆ ಆಗಬೇಕು ಎಂದು ಕಿಡಿಕಾರಿದರು.

ಮೂರು ತಾಸು ಕಳೆದ ಬಳಿಕ ಸ್ಥಳಕ್ಕೆ ಬಂದ ಪೊಲೀಸರ ಜೊತೆ ಪ್ರತಿಭಟನಾಕಾರರು ವಾಗ್ವಾದಕ್ಕೆ ಇಳಿದರು. ನಂತರ ಧಾವಿಸಿದ ಬೆಸ್ಕಾಂ ಎಇಇ ಜಲದೀಶ್ ಅವರ ವರ್ತನೆಗೆ ಸಿಡಿಮಿಡಿಗೊಂಡ ಪ್ರತಿಭಟನಾಕಾರರು ಆಕ್ರೋಶ ಭರಿತ ಮಾತಿನ ಚಕಮಕಿ ನಡೆಸಿದರು. ನಂತರ ತಿಳಿಯಾದ ವಾತಾವರಣದಲ್ಲಿ ಚರ್ಚಿಸಿ ಸಮಸ್ಯೆ ಆಲಿಸಿದರು. ಎರಡು ಫೀಡರ್ ಗೆ ಸಮರ್ಪಕ ಕರೆಂಟ್ ತಂದು ಪ್ರತಿ ದಿನ ಮೂರು ತಾಸು ತ್ರೀ ಫೇಸ್ ಕರೆಂಟ್ ಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚೇತನ್ ನಾಯಕ್, ನರಸಿಂಹರಾಜು, ರಂಗಸ್ವಾಮಿ, ಬಸವರಾಜು, ಮುಳ್ಕಟ್ಟಯ್ಯ, ಮೂರ್ತಿ, ಪ್ರಕಾಶ್, ಕೃಷ್ಣಪ್ಪ, ಮಲ್ಲಿಕಾರ್ಜುನ, ಪಾತಯ್ಯ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X