ಗುಬ್ಬಿ | ಜಿಡಿಪಿ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶ : ನಿರ್ಮಲಾನಂದನಾಥ ಸ್ವಾಮೀಜಿ

Date:

ಭಾರತ ದೇಶ ಜಿಡಿಪಿಯಲ್ಲಿ ನಾಲ್ಕನೇ ಸ್ಥಾನವಿದ್ದು 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

- Advertisement -

ಗುಬ್ಬಿ ತಾಲೂಕಿನ ಕೆ ಜಿ ಟೆಂಪಲ್ ನಲ್ಲಿ ಕಾಳಿಕಂಟೇಶ್ವರಿ ಪತ್ತಿನ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಸಹಕಾರ ಸಂಘ ರಚನೆ ಗ್ರಾಮೀಣ ರೈತರ ಆರ್ಥಿಕ ಸಬಲತೆಗೆ ಕಾರಣವಾಗಲಿದೆ. ಆರ್ಥಿಕ ವಹಿವಾಟು ಬಡ ರೈತರ ಸಂಕಷ್ಟಕ್ಕೆ ನೆರವಾಗಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಮೆರಿಕಾದಂತಹ ದೇಶಗಳು ನಮ್ಮ ದೇಶದ ಮೇಲೆ ಸವಾರಿ ಮಾಡಲು ಕಾರಣವೇ ಆರ್ಥಿಕ ಹಿನ್ನಡೆ ಕಾರಣವಿತ್ತು. ಈಗ ಅಬಿವೃದ್ದಿ ಪಥದಲ್ಲಿ ಭಾರತ ದಾಪುಗಾಲು ಹಾಕಿದೆ. ಆರ್ಥಿಕವಾಗಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಸಹ ಉತ್ತಮ ಮಾರ್ಗವಾಗಿದೆ. ನಮ್ಮ ದೇಶದಲ್ಲಿ ಶೇ 50 ರಷ್ಟು ರೈತರು ದುಡಿಮೆ ಮಾಡುತ್ತಿದ್ದರು. ಅವರ ಆರ್ಥಿಕತೆಯ ಪ್ರಮಾಣ ಮಾತ್ರ ಶೇ.18 ರಷ್ಟು ಮಾತ್ರ ಇತ್ತು. ಈ ನಿಟ್ಟಿನಲ್ಲಿ ಸಹಕಾರ ಸಂಘ ರೈತರು ಬೆಳೆಯುವಂತಹ ಕೆಲಸಕ್ಕೆ ಕೈ ಹಾಕಬೇಕು ಎಂದರು.

ತಾವೇ ಬೆಳೆದ ಬೆಳೆಗಳನ್ನು ಬಳಸಿಕೊಂಡು ಉಪ ಉತ್ಪನ್ನಗಳನ್ನು ತಯಾರಿಸುವಂತಹ ಕೆಲಸಗಳು ನಡೆಯಬೇಕಾಗಿದೆ. ಇನ್ನೂ
ರೈತರು ಈ ದೇಶದ ಬೆನ್ನೆಲುಬಾಗಿದ್ದು ಯಾವುದೇ ಕಾರಣಕ್ಕೂ ತಮ್ಮ ಭೂಮಿಯನ್ನ ಮಾರಾಟ ಮಾಡುವಂತಹ ತಪ್ಪನ್ನು ಯಾರೂ ಮಾಡಬೇಡಿ.
ರೈತರು ಕಷ್ಟಪಟ್ಟು ದುಡಿಯುತ್ತಿದ್ದು ಅದನ್ನು ಉಳಿಸಿಕೊಳ್ಳುವ ಕೆಲಸವನ್ನು ಸಹ ಮಾಡಬೇಕಾಗಿದೆ. ಗ್ರಾಮಾಂತರದಲ್ಲಿ ಇರುವಂತಹ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಸಹ ಮಾಡಬೇಕಿದ್ದು
ಉತ್ತಮವಾದ ಆಹಾರ ಮೂಲಕ ಆರೋಗ್ಯ ಸಂಪಾದಿಸಿ ಎಂದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಮಾತನಾಡಿ ಈ ದೇಶದ ರೈತರು ಈ ದೇಶದ ಜೀವನಾಡಿಯಾಗಿದ್ದು ಅವರನ್ನು ಗೌರವಿಸುವಂತಹ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ರೈತರು ಬಲಿಷ್ಠರಾದಾಗ ಮಾತ್ರ ದೇಶವು ಸಹ ಬಲಿಷ್ಠವಾಗುತ್ತದೆ ನಮ್ಮ ಹೋರಾಟಗಳು ನಿರಂತರವಾಗಿದ್ದರು ರೈತರು ಯಾವುದೇ ಕಾರಣಕ್ಕೂ ರೈತ ಜೀವನದಿಂದ ವಿಮುಕ್ತಿ ಆಗದೆ ಅದರಲ್ಲಿಯೇ ಮುಂದುವರಿಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಅರೆ ಶಂಕರ ಮಠದ ಸಿದ್ದರಾಮಯ್ಯ ಚೈತನ್ಯ ಸ್ವಾಮೀಜಿ, ಶಾಸಕ ಎಸ್.ಆರ್.ಶ್ರೀನಿವಾಸ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು, ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಎನ್.ವೆಂಕಟೇಗೌಡ, ಡಾ.ನಾಗಭೂಷಣ್ ಸೇರಿದಂತೆ ಸ್ಥಳೀಯ ಮುಖಂಡರುಗಳು, ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...