ಗುಬ್ಬಿ | ಕನ್ನಡ ಮಾಧ್ಯಮಕ್ಕೆ ಉದ್ಯೋಗ ಮೀಸಲಾತಿ ಸಿಗಲಿ : ಸಮ್ಮೇಳನಾಧ್ಯಕ್ಷ ಡಾ.ಬಿ.ನಂಜುಂಡಸ್ವಾಮಿ

Date:

 ಕನ್ನಡ ಭಾಷೆ ಸಂಕಷ್ಟಕ್ಕೀಡಾಗಿ ಇತ್ತೀಚಿನ ದಿನದಲ್ಲಿ ಗ್ರಾಮಾಂತರ ಶಾಲೆಗಳು ಮುಚ್ಚುವ ಹಂತ ತಲುಪಿದೆ. ಖಾಸಗಿ ಆಂಗ್ಲ ಮಾಧ್ಯಮಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಕನ್ನಡ ಮಾಧ್ಯಮಕ್ಕೆ ಉದ್ಯೋಗ ಮೀಸಲಾತಿ ನೀಡುವ ದಿಟ್ಟ ನಿಲುವು ತಾಳಬೇಕಿದೆ ಎಂದು ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಬಿ.ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.

- Advertisement -

ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಆಯೋಜಿಸಿದ್ದ ಆರನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು ಯುವ ಜನರಲ್ಲಿ ಪುಸ್ತಕ ಪ್ರೀತಿ ಕಡಿಮೆಯಾಗಿದೆ. ಬೆರಳೆಣಿಕೆ ಮಂದಿ ಸಾಹಿತ್ಯಾಸಕ್ತಿ ಬೆಳೆಸಿಕೊಂಡು ಲೇಖನ ಬರೆದರೆ ಅವರಿಗೆ ಸರ್ಕಾರ ಯಾವುದೇ ಪ್ರೋತ್ಸಾಹ ನೀಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಗ್ರಂಥಾಲಯಗಳು ಸಹ ಓದುಗರ ಕೊರತೆ ಎದುರಿಸಿದೆ. ಸರ್ಕಾರ ಪುಸ್ತಕಗಳ ಖರೀದಿ ಮಾಡಬೇಕಿದೆ. ಪಟ್ಟಣ ನಗರದಲ್ಲಿ ಪ್ರತಿ ಪ್ರಜೆಯಿಂದ ಲೈಬ್ರರಿ ಸೆಸ್ ವಸೂಲಿ ಮಾಡಲಾಗುತ್ತಿದೆ. ಆದರೆ ಗ್ರಂಥಾಲಯಕ್ಕೆ ಪುಸ್ತಕಗಳು ಖರೀದಿ ಆಗುತ್ತಿಲ್ಲ. ಅಂತೂ ಇಂತೂ ಖರೀದಿ ನಡೆದರೆ ಅದರ ಹಣ ಬರಲು ಮೂರು ನಾಲ್ಕು ವರ್ಷ ಬೇಕಿದೆ. ಈ ಜೊತೆಗೆ ಪ್ರಕಾಶಕರ ಸ್ಥಿತಿ ಶೋಚನೀಯ ಎಂದು ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರ ಪುಸ್ತಕೋದ್ಯಮ ರಕ್ಷಿಸಬೇಕಿದೆ. ಈ ಕಾಯಕ ಎಲ್ಲಾ ಕನ್ನಡಿಗರ ಕರ್ತವ್ಯ ಎಂದರು.

1002536224

ಕಲೆಗಳ ನಾಡು ಗುಬ್ಬಿ ವೀರಗಾಸೆ, ನಂದಿಧ್ವಜ ಕುಣಿತ, ಲಿಂಗ ವೀರರ ಕುಣಿತ, ಕೋಲಾಟ, ಸೋಮನ ಕುಣಿತ, ತೊಗಲು ಗೊಂಬೆಯಾಟ, ಸೂತ್ರದ ಗೊಂಬೆಯಾಟ ಹೀಗೆ ಅನೇಕ ಗ್ರಾಮೀಣ ಸೊಗಡಿನ ಸಾಹಿತ್ಯದ ತವರೂರು ಇದಾಗಿದೆ. ವಚನ ಸಾಹಿತ್ಯದಲ್ಲಿ ಗುಬ್ಬಿ ಎರಡನೇ ಕಲ್ಯಾಣ ಎಂದೆನಿಸಿದೆ. ಗುಬ್ಬಿ ಚನ್ನಬಸವೇಶ್ವರರ ಬಗ್ಗೆ ಎಲ್ಲರಿಗೂ ತಿಳಿಸುವ ಕೆಲಸ ಮಾಡಿ ಹೊಸಹಳ್ಳಿ ಅರಸರ ರಾಜಗುರುಗಳಾಗಿ ನಡೆಸಿದ ವಚನ ಸಾಹಿತ್ಯ ಕೃಷಿ 70 ವರ್ಷ ನಡೆದಿತ್ತು. ಈ ಜೊತೆಗೆ ಗುಬ್ಬಿ ಮಲ್ಲಣ್ಣ, ಮಲ್ಲಣ್ಣಾರ್ಯಾ, ಗುಬ್ಬಿ ವೀರಣ್ಣ, ನಟ ಭಯಂಕರ ಗಂಗಾಧರಯ್ಯ, ಚಿ.ಉದಯಶಂಕರ್, ಸಾಲು ಮರದ ತಿಮ್ಮಕ್ಕ ಯಾರನ್ನೂ ಮರೆಯುವಂತಿಲ್ಲ. ಇಂತಹ ನೆಲೆಯ ಸಾಹಿತ್ಯ ಸಮ್ಮೇಳನ ನನಗೆ ತೃಪ್ತಿ ನೀಡಿದೆ ಎಂದರು.

ಬಿ.ಕೋಡಿಹಳ್ಳಿ ಮಠದ ಶ್ರೀ ಬಸವ ಭೃಂಗೇಶ್ವರ ಸ್ವಾಮೀಜಿ ಮಾತನಾಡಿ ಮರಿ ಕಲ್ಯಾಣ ಎಂದೇ ಉತ್ತರ ಕರ್ನಾಟಕದಲ್ಲಿ ಗುಬ್ಬಿ ಕ್ಷೇತ್ರ ಗುರುತಿಸಿಕೊಂಡಿದೆ. ಸಾಹಿತ್ಯಕ ಶ್ರೀಮಂತಿಕೆ ಇಲ್ಲಿದೆ. ಇಂದಿಗೂ ಸಾವಿರ ಬರವಣಿಗೆದಾರರು ಸಿಗುತ್ತಾರೆ. ಆದರೆ ಸಾಹಿತ್ಯಾಸಕ್ತಿ ಕೇವಲ ಸಿನಿಮಾ ಹಾಡಿನ ಸೀಮಿತವಾಗಿದೆ. ಕನ್ನಡ ಸಾಹಿತ್ಯಕ್ಕೆ ಎರಡೂವರೆ ವರ್ಷದ ಇತಿಹಾಸವಿದೆ. ಈಗಾಗಲೇ ಸುತ್ತಲಿನ ಅನ್ಯ ರಾಜ್ಯ ನಮ್ಮ ನೆಲ ಕಿತ್ತು ಸಾಹಿತ್ಯ ಕಿಟ್ಟುಕೊಳ್ಳುತ್ತಿದೆ. ನಮ್ಮ ಸಾಹಿತಿಗಳ ಬರವಣಿಗೆ ತಿರುಚುವ ಕೆಲಸ ನಡೆದಿದೆ. ಘೋರ ಸನ್ನಿವೇಶ ಎದುರಿಸುವ ಮುನ್ನ ನಮ್ಮ ಕನ್ನಡ ಸಾಹಿತ್ಯ ಉಳಿಸುವ ಕೆಲಸ ನಿರಂತರ ಮಾಡಬೇಕಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಕೀರ್ತನಾಕಾರ ಲಕ್ಷ್ಮಣ್ ದಾಸ್ ಮಾತನಾಡಿ ಹದಿನೆಂಟು ಕೋಮಿನ ಗುಬ್ಬಿಯಪ್ಪ ಇತಿಹಾಸಕ್ಕೆ ಸಾಕ್ಷಿ ಆಧಾರ ಸಹಿತ ಕೃತಿ ಬರೆದ ನಂಜುಂಡಸ್ವಾಮಿ ಸಮ್ಮೇಳನಕ್ಕೆ ಅರ್ಥ ತಂದಿದ್ದಾರೆ. ಗುಬ್ಬಿಯ ಮಹನೀಯರಲ್ಲಿ ನಿಟ್ಟೂರು ಶ್ರೀನಿವಾಸರಾವ್, ಹೊಸಕೆರೆ ಚಿದಂಬರಯ್ಯ, ಹಾಗಲವಾಡಿ ಜುಂಜಪ್ಪ, ನಾಟಕ ರತ್ನ ಗುಬ್ಬಿ ವೀರಣ್ಣ, ಚಿ.ಉದಯಶಂಕರ್, ಗಂಗಾಧರಯ್ಯ, ಹೀಗೆ ಅನೇಕರನ್ನು ಸ್ಮರಿಸುವ ಕರ್ತವ್ಯ ಎಲ್ಲರ ಮೇಲಿದೆ ಎಂದರು.

ಧ್ವಜ ಹಸ್ತಾಂತರ ಮಾಡಿದ ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಚಿಕ್ಕಣ್ಣ ಯಣ್ಣೆಕಟ್ಟೆ ಮಾತನಾಡಿ ಆರು ಸಮ್ಮೇಳನ ತಾಲ್ಲೂಕಿನ ಸಾಹಿತ್ಯಕ್ಕೆ ಸಾಕ್ಷಿಯಾಗಿದೆ. ನಮ್ಮ ಮೂಲ ನೆಲೆಯ ಪರಂಪರೆ ಬಿಂಬಿಸುವ ಸಾಹಿತ್ಯ ಜನಪದ ಸೊಗಡಿನಲ್ಲಿದೆ. ಜುಂಜಪ್ಪನ ಕಾವ್ಯ ಎಂದಿಗೂ ಕಾಡು ಗೊಲ್ಲರ ಪರಂಪರೆ ತೋರುತ್ತದೆ. ಜೊತೆಗೆ ಶಕ್ತಿ ದೇವತೆಗಳ ಆರಾಧನೆ ನಮ್ಮಲ್ಲಿ ಹೆಚ್ಚು ನಡೆಯುತ್ತದೆ. ಮಣ್ಣಮ್ಮ, ಗ್ರಾಮದೇವತೆ, ಆಲದ ಕೊಂಬೆಯಮ್ಮ, ಕೊಲ್ಲಾಪುರದಮ್ಮ, ದಂಡಿನ ಮಾರಮ್ಮ ಹೀಗೆ ಅನೇಕ ಇತಿಹಾಸ ನಮ್ಮಲ್ಲಿ ಪರಿಶಿಷ್ಟ ವಲಯದಿಂದ ಉಳಿದುಬಂದಿದೆ. ಕಲ್ಲೂರು ನಾಗರಾಜಪ್ಪ, ಎಸ್.ನಾಗಪ್ಪ ಮೊದಲಾದವರನ್ನು ಈ ಸಮಯ ಸ್ಮರಿಸಬೇಕಿದೆ. ಸಮ್ಮೇಳನ ಹೆಚ್ಚು ನಡೆದು ಯುವ ಸಾಹಿತಿಗಳಿಗೆ ವೇದಿಕೆ ರೂಪಿಸಲಿ ಎಂದು ಆಶಿಸಿದರು.

1002536225

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ ಸಮ್ಮೇಳನ ಯಶಸ್ವಿಗೆ ಸಹಕರಿಸಿದ್ದವರನ್ನು ಸ್ಮರಿಸಿದರು.

ವೇದಿಕೆಯ ಕಾರ್ಯಕ್ರಮಕ್ಕೆ ಮುನ್ನ ಬೆಳಿಗ್ಗೆ ಧ್ವಜಾರೋಹಣ ನಂತರ ಕನ್ನಡಾಂಬೆಯ ಭಾವಚಿತ್ರ ಹಾಗೂ ಸಮ್ಮೇಳಾಧ್ಯಕ್ಷರ ಭವ್ಯ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ನಡೆಯಿತು.

ಇದೇ ಸಂದರ್ಭದಲ್ಲಿ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಬಿಡುಗಡೆ ಗೊಳಿಸಿದರು.

ಯುವ ಸಾಹಿತಿಗಳಾದ ಅರುಣ್ ಕುಮಾರ್ ಅವರ ಸ್ಫೂರ್ತಿ ಕವನ ಸಂಕಲನ, ಗೀತಾ ಕಲ್ಲೂರು ಅವರ ಭಾವ ಸಿಂಚನ ಹಾಗೂ ಅಂಜನ್ ಕುಮಾರ್ ಅವರ ಕಾಲ್ಗೆಜ್ಜೆ ಪುಸ್ತಕವನ್ನು ಉಪನ್ಯಾಸಕ ಡಾ.ಗೋವಿಂದರಾಜು ಎಂ.ಕಲ್ಲೂರು ಬಿಡುಗಡೆ ಗೊಳಿಸಿದರು.

ವೇದಿಕೆಯಲ್ಲಿ ತಹಶೀಲ್ದಾರ್ ಆರತಿ.ಬಿ, ಬಿಇಓ ನಟರಾಜ್, ತಾಪಂ ಇಓ ರಂಗನಾಥ್, ಸಾಹಿತಿ ಎಚ್.ಕೆ.ನರಸಿಂಹಮೂರ್ತಿ, ಕಸಾಪ ತಾಲ್ಲೂಕು ಅಧ್ಯಕ್ಷ ಯತೀಶ್, ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್, ಪಪಂ ಮಾಜಿ ಸದಸ್ಯರಾದ ಮಹಮ್ಮದ್ ಸಾದಿಕ್, ಆಯಿಷಾ ತಾಸೀನ್, ಸವಿತಾ.ಎಸ್.ಗೌಡ, ಜಿ.ಸಿ.ಕೃಷ್ಣಮೂರ್ತಿ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಮುಖಂಡರಾದ ಕಳ್ಳಿಪಾಳ್ಯ ಲೋಕೇಶ್, ಬೆಣಚಿಗೆರೆ ರುದ್ರೇಶ್, ಜಿ.ವಿ.ಮಂಜುನಾಥ್, ಯಲ್ಲಪ್ಪ, ಅಪ್ಪಾಜಿ, ಚೇಳೂರು ಶಿವನಂಜಪ್ಪ, ಗುಬ್ಬಚ್ಚಿ ಸತೀಶ್, ಕಸಾಪ ಪದಾಧಿಕಾರಿಗಳಾದ ರಾಜೇಶ್ ಗುಬ್ಬಿ, ಸಿ.ಆರ್.ಶಂಕರ್ ಕುಮಾರ್, ಸಲೀಂಪಾಷ, ಜಯಣ್ಣ, ಸುಬ್ರಹ್ಮಣ್ಯ, ಕೆ.ವಿ.ದಯಾನಂದ್, ರವೀಶ್, ರಮೇಶ್ ಗೌಡ, ಕೋಟೆ ರಂಗಸ್ವಾಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...