ಗುಬ್ಬಿ | ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ

Date:

 ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನಿಸಿ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ವಿತರಣೆ ಮಾಡುವ ಮೂಲಕ ಅದ್ದೂರಿಯಾಗಿ 70 ನೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

- Advertisement -

ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕನ್ನಡ ಭುವನೇಶ್ವರಿ ದೇವಿಯ ಭಾವಚಿತ್ರ ಮೆರವಣಿಗೆ ಸರ್ಕಾರಿ ಕಾಲೇಜು ಮೈದಾನಕ್ಕೆ ತಲುಪಿತ್ತು. ನಂತರ ತಾಲ್ಲೂಕು ಆಡಳಿತ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ನೆರವೇರಿಸಿ ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ತಿಳಿಸಿ ಮಾತೃಭಾಷೆ ಕನ್ನಡ ಮನೆ ಮನಗಳಲ್ಲಿ ರಾರಾಜಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಹಶೀಲ್ದಾರ್ ಆರತಿ.ಬಿ ಮಾತನಾಡಿ ಕನ್ನಡ ನಮ್ಮ ಅಸ್ಮಿತೆ. ನಮ್ಮ ಭಾಷೆ ಮೇಲಿನ ಅಭಿಮಾನ ಹೆಚ್ಚಿಸಿಕೊಂಡು ಮನದಲ್ಲಿ ಆರಾಧಿಸಬೇಕು. ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಕವಿ ವಾಣಿಯಂತೆ ನಾವೆಲ್ಲರೂ ಮಾತೃಭಾಷೆ ಉಳಿಸಿ ಬೆಳೆಸೋಣ ಎಂದರು.

ಕನ್ನಡ ಉಪನ್ಯಾಸಕ ಮುರುಳೀಧರ್ ಮಾತನಾಡಿ ಜನನಿ ಹಾಗೂ ಜನ್ಮಭೂಮಿ ಸ್ವರ್ಗಕ್ಕಿಂತ ದೊಡ್ಡದು ಎಂಬಂತೆ ನಮ್ಮ ಮಾತೃಭಾಷೆ ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು. 1956 ರಂದು ಭಾಷಾವಾರು ವಿಂಗಡಿಸಿ ಮೈಸೂರು ರಾಜ್ಯ ಕನ್ನಡನಾಡು ಆಗಿತ್ತು. 1973 ರಲ್ಲಿ ಕರ್ನಾಟಕ ಹೆಸರು ಅಧಿಕೃತ ನಾಮಕರಣ ಮಾಡಲಾಯಿತು. ಎರಡು ಸಾವಿರ ವರ್ಷಗಳ ಇತಿಹಾಸ ಕನ್ನಡ ಭಾಷೆಗಿದೆ. ಕನ್ನಡ ಸಾಹಿತ್ಯ ಎಂಟು ಜ್ಞಾನಪೀಠ ಪ್ರಶಸ್ತಿ ತಂದಿದೆ. ಸರಳ ವಚನ ಸಾಹಿತ್ಯ, ಕೀರ್ತನಾ ಸಾಹಿತ್ಯ ಹೀಗೆ ಕನ್ನಡ ಬೆಳೆಯುತ್ತಿದೆ. ಮುಂದಿನ ಪೀಳಿಗೆ ಕನ್ನಡ ಉಳಿಸಿ ಬೆಳೆಸಬೇಕು ಎಂದರು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಆಯಿಷಾ ತಾಸೀನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ತಾಪಂ ಇಓ ರಂಗನಾಥ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಸೇರಿದಂತೆ ಎಲ್ಲಾ ಪಪಂ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...