ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಆಜೀವ ಸದಸ್ಯರ ಸಭೆಯನ್ನು ಇದೇ ತಿಂಗಳ 16 ರಂದು ಸಂಜೆ 4 ಗಂಟೆಗೆ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ತಾಲ್ಲೂಕಿನ ಎಲ್ಲಾ ಆಜೀವ ಸದಸ್ಯರು ಸಭೆಗೆ ಆಗಮಿಸುವಂತೆ ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಆಹ್ವಾನ ನೀಡಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ತಮ್ಮ ಅಮೂಲ್ಯ ಸಲಹೆ ಸೂಚನೆ ನೀಡಬಹುದಾಗಿದೆ. 2025-26 ನೇ ಸಾಲಿನಲ್ಲಿ ಪರಿಷತ್ತಿನ ಕಾರ್ಯಕ್ರಮಗಳ ಕ್ರಿಯಾಯೋಜನೆ ಮತ್ತು ಸದಸ್ಯತ್ವ ನೋಂದಣಿ ಕುರಿತಾದ ವಿಚಾರ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು. ಈ ನಿಟ್ಟಿನಲ್ಲಿ ತಾಲ್ಲೂಕಿನ ಕಸಾಪ ಆಜೀವ ಸದಸ್ಯರು ಭಾಗವಹಿಸಲು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.