ಗುಬ್ಬಿ | ತಾರ್ಕಿಕ ಅಂತ್ಯ ಕಾಣದ ಕೇಶಿಪ್ ರಸ್ತೆ ಟೋಲ್ ; ರೈತ ಪರ ತೀರ್ಮಾನಕ್ಕೆ ಬದ್ಧ : ಶಾಸಕ ಶ್ರೀನಿವಾಸ್

Date:

ಗುಬ್ಬಿ  ತಾಲ್ಲೂಕಿನ ಜಿ.ಹೊಸಹಳ್ಳಿ ಬಳಿ ಆರಂಭವಾದ ಟೋಲ್ ತೆರಿಗೆ ಸಂಗ್ರಹಕ್ಕೆ ಎರಡು ಬಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಂದ 15 ದಿನ ಗಡುವು ಪಡೆದಿದ್ದ ಶಾಸಕ ಎಸ್.ಆರ್.ಶ್ರೀನಿವಾಸ್ ಸೋಮವಾರ ಮುಕ್ತ ಚರ್ಚೆಗೆ ಸಭೆ ನಡೆಸಿದರು.

- Advertisement -

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರೈತರು ಕೇವಲ ರೈತಾಪಿ ವರ್ಗ ಓಡಾಡುವ ಈ ರಸ್ತೆಗೆ ವಾಹನ ತೆರಿಗೆ ಹಾಕುವುದು ಸರಿಯಲ್ಲ. ಯಾವ ಹೆದ್ದಾರಿ ನಿಯಮ ಪಾಲಿಸದೆ ಕಳೆದ ಹತ್ತು ವರ್ಷದ ಹಿಂದೆ ನಿರ್ಮಾಣವಾದ ಕೇಶಿಪ್ ರಸ್ತೆಗೆ ದಿಢೀರ್ ಅವೈಜ್ಞಾನಿಕ ಟೋಲ್ ನಿರ್ಮಾಣ ಮಾಡಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ನೋವು ಕೊಡಲು ಹೊರಟಿರುವುದು ಖಂಡನೀಯ ಎಂದು ನೇರ ಚರ್ಚೆಗೆ ಇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ಸ್ಥಳೀಯ ರೈತರಿಗೆ ಅನಾನುಕೂಲ ಮಾಡುವ ಟೋಲ್ ಇಲ್ಲಿ ಅನಾವಶ್ಯಕ. ಯಾವುದೇ ಕೈಗಾರಿಕಾ ವಲಯ ಇಲ್ಲದ ಈ ಭಾಗದ ರಸ್ತೆ ಕೇವಲ ರೈತರು ಬಳಸುತ್ತಾರೆ. ಈ ಬಗ್ಗೆ ಎರಡು ಬಾರಿ ಪ್ರತಿಭಟನೆ ನಡೆದಿದೆ. ಈಗ ಗಡುವು ಪಡೆದು ಸಭೆ ನಡೆಸಿದ್ದೀರಿ. ಹದಿನೈದು ದಿನದ ಗಡುವು ಮುಗಿದಿದೆ. ಟೋಲ್ ತೆರವು ಮಾಡದಿದ್ದರೆ ರೈತರ ಆಕ್ರೋಶ ಕಟ್ಟೆ ಒಡೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

1002334673

ಜೆಡಿಎಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ ರೈತರು ಹಾಗೂ ಸರ್ಕಾರದ ಮಧ್ಯೆ ಶಾಸಕರು ಸೇತುವೆ ಆಗಿ ಕೆಲಸ ಮಾಡಬೇಕಿದೆ. ರೈತರ ಬವಣೆ ಅರಿತ ಶಾಸಕರು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ರೈತರ ಪರ ನಿಲುವು ತೋರುವ ತೀರ್ಮಾನ ಕೈಗೊಳ್ಳಬೇಕು. ಟೋಲ್ ಗುತ್ತಿಗೆದಾರ ಶಾಸಕರಿಗೆ ತಿಳಿಸಿದ್ದೇವೆ ಎನ್ನುತ್ತಾರೆ. ಆದರೆ ನಮ್ಮ ಗಮನಕ್ಕೆ ಬಂದಿಲ್ಲ ಎಂದು ಶಾಸಕರು ಹೇಳುತ್ತಾರೆ. ಈ ಗೊಂದಲ ಮೂಡುವ ಬದಲು ರೈತರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಒಟ್ಟಿಗೆ ಚರ್ಚಿಸಿ ಒಂದು ತೀರ್ಮಾನ ಕೈಗೊಳ್ಳಿ ಎಂದು ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಅವೈಜ್ಞಾನಿಕ ಟೋಲ್ ಬಗ್ಗೆ ವಿವರಿಸಿದ್ದರೂ ಸಚಿವರು ಒಪ್ಪುತ್ತಿಲ್ಲ. ಎರಡು ಕಿಮೀ ವ್ಯಾಪ್ತಿಯ ಜನರಿಗೆ ಮಾತ್ರ ವಾಹನ ಸಂಚಾರ ಅನುವು ಮಾಡುವುದು ಸರಿಯಲ್ಲ. ಇಡೀ ತಾಲ್ಲೂಕಿನ ಜನರಿಗೆ ಅನುಕೂಲ ಆಗಬೇಕು. ಇಲ್ಲವಾದರೆ ಟೋಲ್ ನಿರ್ಮಾಣ ಅಗತ್ಯವಿಲ್ಲ. ರೈತರು ಮುಂದಿನ ಹೋರಾಟಕ್ಕೆ ಬಂದರೆ ಟೋಲ್ ಕಿತ್ತೊಗೆಯುವ ಅವಕಾಶ ಹೆಚ್ಚಿದೆ. ಈ ಸಭೆಯಲ್ಲಿ ರೈತರ ಪರ ತೀರ್ಮಾನ ಕೈಗೊಳ್ಳಿ ಎಂದು ತಿಳಿಸಿದರು.

ಎಲ್ಲಾ ರೈತರ ಮಾತುಗಳನ್ನು ಆಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಸರ್ಕಾರ ಗುತ್ತಿಗೆ ಕರಾರು ಈ ಹಿಂದೆಯೇ ಮಾಡಿದೆ. ಕರಾರು ನಿಯಮ ಸರ್ಕಾರ ಬದಲಿಸಲು ಸಾಧ್ಯವಿಲ್ಲ. ಗುತ್ತಿಗೆದಾರ ಅಧಿಕಾರಿಗಳ ಜೊತೆ ಚರ್ಚಿಸಿ ಒಂದು ಒಪ್ಪಂದ ಮಾಡಬಹುದಾಗಿದೆ. ತಾಲ್ಲೂಕಿನ ಎಲ್ಲಾ ವಾಹನಗಳಿಗೆ ಪಾಸ್ ವ್ಯವಸ್ಥೆ ಮಾಡಲು ಚರ್ಚೆ ಮಾಡುತ್ತೇನೆ. ಅಥವಾ ನನ್ನ ಕ್ಷೇತ್ರದಿಂದ ಹೊರ ಭಾಗಕ್ಕೆ ಟೋಲ್ ಸ್ಥಳಾಂತರ ಮಾಡಲು ಅವಕಾಶ ಇದ್ದರೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿ ಒಂದು ದಿನದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತೇನೆ. ರೈತ ಪರ ತೀರ್ಮಾನಕ್ಕೆ ಬದ್ದನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟಾರೆ ಎರಡು ಗಂಟೆ ನಡೆದ ಸಭೆಯಲ್ಲಿ ಯಾವುದೇ ತಾರ್ಕಿಕ ಅಂತ್ಯ ಕಾಣದ ಚರ್ಚೆ ಮುಂದಿನ ಅಧಿಕಾರಿಗಳ ಸಭೆಯಲ್ಲಿ ಶಾಸಕರ ತೀರ್ಮಾನ ತಿಳಿದು ರೈತರ ಹೋರಾಟದ ಸ್ವರೂಪ ತಿಳಿಸುವುದಾಗಿ ರೈತ ಮುಖಂಡರು ತಿಳಿಸಿ ತಾತ್ಕಾಲಿಕವಾಗಿ ಸಭೆ ಅಂತ್ಯಗೊಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಆರತಿ.ಬಿ, ತಾಪಂ ಇಓ ರಂಗನಾಥ್, ಸಿಪಿಐ ರಾಘವೇಂದ್ರ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಜಿಲ್ಲಾ ಕಾರ್ಯದರ್ಶಿ ಶಂಕರಪ್ಪ, ಗ್ರಾಪಂ ಸದಸ್ಯ ರೇಣುಕಾಪ್ರಸಾದ್, ಜಿ.ಎಂ.ಶಿವಾನಂದ್, ರೈತಸಂಘದ ಸಿ.ಟಿ.ಕುಮಾರ್, ಗುರುಚನ್ನಬಸವಪ್ಪ, ಯತೀಶ್, ಪ್ರಕಾಶ್, ವೀರಭದ್ರೇಗೌಡ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...