ಗುಬ್ಬಿ | ನಿಟ್ಟೂರು ಗ್ರಾಪಂ ಅಧ್ಯಕ್ಷರಾಗಿ ಮಂಗಳಗೌರಮ್ಮ ಉಪಾಧ್ಯಕ್ಷರಾಗಿ ನರಸಯ್ಯ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಟ್ಟೂರು ಸದಸ್ಯೆ ಮಂಗಳಗೌರಮ್ಮ ಅಧ್ಯಕ್ಷರಾಗಿ, ನಿಟ್ಟೂರು ಮತ್ತೋರ್ವ ಸದಸ್ಯ ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

- Advertisement -

ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಹಾಗೂ ಕಂದಾಯ ನಿರೀಕ್ಷಕ ಗುರು ಪ್ರಸಾದ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಈ ಹಿಂದೆ ಅಧ್ಯಕ್ಷರಾಗಿದ್ದ ಸುಮಂಗಳ ಹಾಗೂ ಉಪಾಧ್ಯಕ್ಷರಾಗಿದ್ದ ಮಂಗಳಗೌರಮ್ಮ ನೀಡಿದ ರಾಜೀನಾಮೆ ಹಿನ್ನಲೆ ತೆರವಾದ ಸಾಮಾನ್ಯ ಮಹಿಳಾ ಮೀಸಲು ಅಧ್ಯಕ್ಷ ಸ್ಥಾನ ಹಾಗೂ ಹಿಂದುಳಿದ ವರ್ಗ(ಅ) ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿದ್ದ ಕಾರಣ ಮಂಗಳಗೌರಮ್ಮ ಅಧ್ಯಕ್ಷೆಯಾಗಿ, ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು. ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಂಗಳಗೌರಮ್ಮ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ಎಲ್ಲಾ ಸದಸ್ಯರಲ್ಲಿ ಸಂತಸ ಮೂಡಿದೆ.

ನೂತನ ಅಧ್ಯಕ್ಷೆ ಮಂಗಳಗೌರಮ್ಮ ಮಾತನಾಡಿ ಪ್ರಮುಖ ವ್ಯಾಪಾರಿ ಕೇಂದ್ರ ಎನಿಸಿದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಧ್ಯಕ್ಷರ ಜೊತೆ ಸೇರಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಚುನಾಯಿತ ಪ್ರತಿನಿಧಿಗಳ ಮೂಲಕ ಸರ್ಕಾರದಿಂದ ಅನುದಾನ ತಂದು ಕೆಲಸ ಮಾಡಿ ಅಭಿವೃದ್ದಿ ವಿಚಾರದಲ್ಲಿ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನೂತನ ಉಪಾಧ್ಯಕ್ಷ ನರಸಯ್ಯ ಮಾತನಾಡಿ ಎಚ್ ಎಎಲ್ ಘಟಕ ಸ್ಥಾಪನೆ ಮೂಲಕ ದೇಶಕ್ಕೆ ಪರಿಚಯವಾದ ನಿಟ್ಟೂರು ಗ್ರಾಮ ಪಂಚಾಯಿತಿ ಪಟ್ಟಣ ಪ್ರದೇಶದಂತೆ ಬೆಳೆದ ಗ್ರಾಮವಾಗಿದೆ. ಜೊತೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅವಶ್ಯ ಸೌಕರ್ಯ ಒದಗಿಸುತ್ತೇವೆ. ಆದಾಯದ ಮೂಲ ಹೆಚ್ಚಿಸಿ ತೆರಿಗೆ ಹಣದಲ್ಲಿ ಶಾಲೆ, ಆಸ್ಪತ್ರೆ, ಅಂಗನವಾಡಿ, ಕುಡಿಯುವ ನೀರಿನ ಘಟಕ, ರಸ್ತೆ ಚರಂಡಿ ಹೀಗೆ ಅನೇಕ ಸವಲತ್ತು ಒದಗಿಸಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾರ್ಪಾಡು ಮಾಡುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ನೂತನ ಉಪಾಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ಮುಖಂಡರಾದ ನಾಗರಾಜ್, ಜಗದೀಶ್, ಗಿರೀಶ್, ಯೋಗೀಶ್ ಸೇರಿದಂತೆ ಎಲ್ಲಾ ಗ್ರಾಪಂ ಸದಸ್ಯರು, ಪಿಡಿಓ ಉಮೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...