ಗುಬ್ಬಿ | ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಡಿ.23 ರಂದು ಬೃಹತ್ ಪ್ರತಿಭಟನೆ : ದಲಿತ ಪರ ಸಂಘಟನೆಗಳ ನಿರ್ಧಾರ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಲ್ಲದೆ ಅಂಬೇಡ್ಕರ್ ಅನುಯಾಯಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಸಂಸತ್ತಿನಲ್ಲಿ ನೀಡಿರುವುದು ಖಂಡಿಸಿ ದಲಿತ ಪರ ಸಂಘಟನೆಗಳು ಹಾಗೂ ಅಲ್ಪಸಂಖ್ಯಾತ, ಹಿಂದುಳಿದ ವರ್ಗದ ಸಂಘಟನೆಗಳು ಇದೇ ತಿಂಗಳ 23 ರಂದು ಉಗ್ರ ಹೋರಾಟಕ್ಕೆ ಕರೆ ನೀಡಲು ಪೂರ್ವಬಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸಂವಿಧಾನ ಪವಿತ್ರ ಗ್ರಂಥ ರಚಿಸಿದ ಅಂಬೇಡ್ಕರ್ ಅವರು ದೈವಿ ಸ್ವರೂಪ. ಇವರ ಸ್ಮರಣೆ ಮಾಡುವುದು ಸಹಿಸದ ಅಸಹಿಷ್ಣುತೆ ವಾದ ಅಮಿತ್ ಷಾ ಅವರಿಂದ ಬಯಲಾಗಿದೆ. ಅಂಬೇಡ್ಕರ್ ಬಗ್ಗೆ ಹಗುರ ಮಾತು, ಅವರ ಸ್ಮರಣೆ ಮಾಡುವುದಕ್ಕಿಂತ ದೇವರ ಸ್ಮರಣೆ ಮಾಡಿ ಎಂದಿರುವುದು ಖಂಡನೀಯ. ಅವರ ದೃಷ್ಟಿಯಲ್ಲಿ ಅಂಬೇಡ್ಕರ್ ಏನೆಂದು ಭಾಸವಾಗಿದೆ ಎಂದು ಎಲ್ಲಾ ಮುಖಂಡರು ಒಕ್ಕೊರಲಿನ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ರಾಜ್ಯಸಭೆಯಲ್ಲಿ ಕೆಟ್ಟ ಮಾತುಗಳಲ್ಲೇ ಅಂಬೇಡ್ಕರ್ ಪೂಜಿಸುವ ಅನುಯಾಯಿಗಳ ಬಗ್ಗೆ ಅವಹೇಳನ ಮಾಡಿರುವುದು ಖಂಡನೀಯ. ಅಂಬೇಡ್ಕರ್ ರಚಿಸಿದ ಸಂವಿಧಾನ ಅಡಿಯಲ್ಲಿ ರಾಜಕೀಯ ಮಾಡುತ್ತಾ ಅಧಿಕಾರ ನಡೆಸುತ್ತಿರುವ ಅಮಿತ್ ಷಾ ಅವರು ಗೃಹ ಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಯೋಗ್ಯರಲ್ಲ. ಕೂಡಲೇ ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ರಾಷ್ಟ್ರಪತಿಗಳು ಅವರ ಸ್ಥಾನದ ಕೆಳಗಿಳಿಸಬೇಕು ಎಂದು ಒತ್ತಾಯಿಸಿ ಇದೇ ವಿಚಾರವಾಗಿ ಡಿಸೆಂಬರ್ 23 ಸೋಮವಾರ ಗುಬ್ಬಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಎಲ್ಲಾ ಅಂಬೇಡ್ಕರ್ ಅಭಿಮಾನಿಗಳು ಆಗಮಿಸಲು ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿದ್ದು ಅಮಿತ್ ಷಾ ಅಂಬೇಡ್ಕರ್ ಅವರ ಸ್ಮರಣೆ ಮಾಡುವ ದೀನ ದಲಿತರಿಗೆ ವ್ಯಸನಿ ಎಂಬ ಪದ ಬಳಕೆ ತೀವ್ರ ಖಂಡನೀಯ. ಅಧಿಕಾರ ನಡೆಸಲು ಅಂಬೇಡ್ಕರ್ ಅವರ ಸಂವಿಧಾನ ಬೇಕು. ಆದರೆ ಅಂಬೇಡ್ಕರ್ ವ್ಯಕ್ತಿತ್ವ, ತತ್ವ ಆದರ್ಶ ಮಾತ್ರ ಬೇಕಿಲ್ಲ. ಇದು ಜಾತೀಯತೆಯ ಮನಸ್ಥಿತಿ ಜೀವಂತ ಎಂಬುದು ಬಿಂಬಿಸುತ್ತದೆ. ಅಂಬೇಡ್ಕರ್ ಬಗ್ಗೆ ಮಾತನಾಡಿಲ್ಲ. ಮಾಧ್ಯಮ ತಿರುಚಿದೆ ಎಂದು ಕ್ಷಮೆ ಕೇಳಿದರೂ ನಾವು ಹೋರಾಟ ಮುಂದುವರೆಸಿ ರಾಜೀನಾಮೆ ಸಲ್ಲಿಸಲು ಆಗ್ರಹಿಸೋಣ ಎಂದು ಕರೆ ನೀಡಿದರು.

ಮುಖಂಡ ಚೇಳೂರು ಶಿವನಂಜಪ್ಪ ಮಾತನಾಡಿ ವ್ಯಸನಿಗಳ ಎಂಬ ಪದ ಬಳಕೆ ಅವರ ಜಾತಿ ಮನಸ್ಥಿತಿ ತೋರಿಸಿದೆ. ಇಡೀ ದೇಶಕ್ಕೆ ಆಗಿರುವ ಅವಮಾನ ಇದಾಗಿದೆ. ಸಾಮಾಜಿಕ ನ್ಯಾಯ ಪಡೆದ ಎಲ್ಲಾ ನಾಗರೀಕರಿಗೂ ಆಗಿರುವ ಅಪಮಾನಕ್ಕೆ ತಕ್ಕ ಪಾಠ ಕಲಿಸಬೇಕಿದೆ. ಎಲ್ಲಾ ಅಂಬೇಡ್ಕರ್ ಭಕ್ತರು, ಅಭಿಮಾನಿಗಳು, ಅನುಯಾಯಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕರೆ ನೀಡಿದರು.

ಭಾರತ್ ಭೀಮ್ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಮಾತನಾಡಿ ಅಮಿತ್ ಷಾ ಮಾತುಗಳು ಇಡೀ ದೇಶಕ್ಕೆ ಆಗಿರುವ ಅಪಮಾನ. ಅಂಬೇಡ್ಕರ್ ಪೂಜಿಸುವ ಕೋಟ್ಯಾಂತರ ಮಂದಿಗೆ ಈ ರೀತಿ ಹೀಯಾಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದು. ಕೇಂದ್ರ ಸರ್ಕಾರ ಯೋಜಿಸಬೇಕು. ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಸೋಮವಾರ ನಡೆಯುವ ಬೃಹತ್ ಪ್ರತಿಭಟನೆಗೆ ಅಹಿಂದ ವರ್ಗದ ಎಲ್ಲರೂ ಒಗ್ಗೂಡಿ ಬರಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಸಂಸ ತಾಲ್ಲೂಕು ಸಂಚಾಲಕ ಕಡಬ ಶಂಕರ್, ಮುಖಂಡರಾದ ಕುಂದರನಹಳ್ಳಿ ನಟರಾಜ್, ಲಕ್ಕೇನಹಳ್ಳಿ ನರಸಿಯಪ್ಪ, ರಾಜಪ್ಪ, ಮಧು, ಇಮ್ರಾನ್, ರಿಜ್ವಾನ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...