ಗುಬ್ಬಿ | ಬಹು ನಿರೀಕ್ಷೆಯ ಕಳ್ಳಿಪಾಳ್ಯ ಹೆದ್ದಾರಿ ಮೇಲ್ಸೇತುವೆಗೆ ಸ್ಥಳ ಪರಿಶೀಲಿಸಿದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ

Date:

ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬರುವ ಬೈಪಾಸ್ ರಸ್ತೆಯಲ್ಲಿ ಕಳ್ಳಿಪಾಳ್ಯ ಗೇಟ್ ನಿಂದ ಅಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಾರು ಗ್ರಾಮಗಳಿಗೆ ಪ್ರವೇಶಿಸುವ ಬಹು ಅವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಮೇಲ್ಸೇತುವೆ ನಿರ್ಮಾಣ ಶೀಘ್ರದಲ್ಲಿ ನಿರ್ಮಿಸುವ ಭರವಸೆ ನೀಡಿದರು.

- Advertisement -

ಭಾನುವಾರ ಬೆಳಿಗ್ಗೆ ಕಳ್ಳಿಪಾಳ್ಯಗೇಟ್ ಬಳಿ ಆಗಮಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಸ್ಥಳೀಯರ ಸಮಸ್ಯೆ ಬಗ್ಗೆ ಮಾಹಿತಿ ಕಲೆಹಾಕಿ ನಿತ್ಯ ವಾಹನಗಳ ಸಂಚಾರ, ಸಾವಿರಾರು ಮಂದಿ ಓಡಾಟದ ಬಗ್ಗೆ ತಿಳಿದು ಅಂದಾಜು 40 ರಿಂದ 45 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ರಸ್ತೆ ತುರ್ತು ನಿರ್ಮಿಸುವ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1001206958

ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಕಳ್ಳಿಪಾಳ್ಯ ಗೇಟ್ ಮೂಲಕ ಅಡಗೂರು, ಧೂಳನಹಳ್ಳಿ, ಪ್ರಭುವನಹಳ್ಳಿ ಹೀಗೇ ಅನೇಕ ಹಳ್ಳಿಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ಸಂಸದರಾಗಿ ಆಯ್ಕೆಯಾದ ಸಮಯದಲ್ಲಿ ವಿ.ಸೋಮಣ್ಣ ಅವರು ರಸ್ತೆ ಮೇಲ್ಸೇತುವೆ ಬಗ್ಗೆ ಭರವಸೆ ನೀಡಿ ನುಡಿದಂತೆ ನಡೆದಿದ್ದಾರೆ ಎಂದು ಸ್ಥಳೀಯರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಯೋಗಾನಂದಕುಮಾರ್, ಗ್ರಾಪಂ ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಸತ್ಯನಾರಾಯಣ, ಸದಸ್ಯರಾದ ಚನ್ನಬಸವೆಗೌಡ, ತಾಪಂ ಮಾಜಿ ಸದಸ್ಯ ಕರೆತಿಮ್ಮಯ್ಯ, ಬಿಜೆಪಿ ಮುಖಂಡ ಬ್ಯಾಟರಂಗೇಗೌಡ, ಸೋಮೇಶ್, ಮಂಜುನಾಥ್, ಕಾಂತಣ್ಣ, ಹೊಸಪಾಳ್ಯ ದಯಾನಂದ, ಮಧು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...