ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗೂಂಡಾ ವರ್ತನೆಗೆ ಸಿಪಿಐಎಂ ಖಂಡನೆ

Date:

     ಬಗರ್ ಹುಕ್ಕುಂ ಸಾಗುವಳಿ ಹಾಗೂ ಭೂಹೀನ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರತಿಭಟಿಸಿದ ರೈತರನ್ನು ಹಾಗೂ ರೈತರ ಚಳುವಳಿಯನ್ನು ಅಪಮಾನಿಸಿದ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ಕ್ಷಮೆ ಕೇಳುವಂತೆ ಒತ್ತಾಯಿಸಿ ಮಂಗಳವಾರ ಗುಬ್ಬಿ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಬಗರ್ ಹುಕ್ಕುಂ ಸಾಗುವಳಿದಾರ ರೈತರ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಿ ಮನವಿ ನೀಡಿ ವಾಪಾಸ್ ಆಗುವ ಸಂದರ್ಭದಲ್ಲಿ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಮದ್ಯ ಪ್ರವೇಶ ಮಾಡಿದ್ದಲ್ಲದೆ, ತಹಶೀಲ್ದಾರ್ ಗೆ ತಿಳಿಹೇಳುವ ಬದಲು ರೈತ ಚಳುವಳಿಯನ್ನು ಸರ್ವಾಧಿಕಾರಿ ಗೂಂಡ ವರ್ತನೆಯಿಂದ ಅಪಮಾನಿಸಿರುವುದನ್ನು ಸಿ.ಪಿ.ಐ.(ಎಂ) ಪಕ್ಷದ ತುಮಕೂರು ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಸಿಪಿಐಎಂ ಪಕ್ಷದಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

     ಆಡಳಿತ ಪಕ್ಷದ ಶಾಸಕ ಎಂಬುದನ್ನು ಮರೆತು ದರ್ಪದಿಂದ ರೈತಸಂಘ ಮುಂಖಡರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೋಲಿಸರ ಮೇಲೆ ಬಹಿರಂಗವಾಗಿ ಒತ್ತಡ ಹಾಕಿದ್ದಾರೆ ಬಗರ್ ಹುಕ್ಕುಂ ಸಾಗುವಳಿ ಮತ್ತು ಭೂಹೀನ ರೈತರು ಸಂಘಟಿತವಾಗಿ ಪ್ರಜಾಪ್ರಭುತ್ವ ರೀತಿಯಲ್ಲಿ ತಮ್ಮ ಬೇಡಿಕೆಗಳ ಹೀಡೆರಿಕೆಗೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಆರ್ಜಿ ಸಲ್ಲಿಸುವುದನ್ನು ಮಹಾ ಆಪರಾಧವೆಂದು ಬಿಂಬಿಸಲು ತಹಶೀಲ್ದಾರ್‌ರವರ ಜೊತೆ ಶಾಮೀಲು ಆಗಿರುವುದು ಕ್ಷೇತ್ರದ ಜನತೆಗೆ ಮಾಡಿರುವ ದ್ರೋಹವಾಗಿದೆ, ರಾಜ ಪ್ರಭುತ್ವದ ಉತ್ತಾರಾಧಿಕಾರಿಗಳಂತೆ ವರ್ತಿಸುವ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ಮತ್ತು ಶಾಸಕರಿಗೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯದಂತೆ ನಡೆದು ಕೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರು ದೇಶದ ಬೆನ್ನೆಲುಬಾದ ರೈತರು ಮತ್ತು ರೈತ ಚಳುವಳಿಯನ್ನು ಆಪಮಾನಿಸುವುದನ್ನು ನಿಲ್ಲಿಸಬೇಕೆಂದು ತಿಳಿಹೇಳಬೇಕೆಂದು ಸಿ.ಪಿ.ಐ.(ಎಂ) ಪಕ್ಷ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

 ಶಾಸಕರು ಮತ್ತು ತಹಶೀಲ್ದಾರ್ ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ ಮೇವು ಕುಡಿಯುವ ನೀರಿನ ವ್ಯವಸ್ಥೆಮಾಡಲು ತುರ್ತು ಕ್ರಮವಹಿಸುವಂತೆ ಸಿ.ಪಿ.ಐ.(ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯರಾದ ಸೈಯದ್ ಮುಜೀಬ್, ಜಿಲ್ಲಾ ಮುಖಂಡರಾದ ಬಿ. ಉಮೇಶ್ ಒತ್ತಾಯಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...