ಗುಬ್ಬಿ | ನಾಗರಾಜು ಹುಟ್ಟುಹಬ್ಬ : ಆರೋಗ್ಯ, ರಕ್ತದಾನ ಶಿಬಿರ ಯಶಸ್ವಿ

Date:

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ ಹಿನ್ನಲೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಅರ್ಥ ತಂದುಕೊಟ್ಟಿತು.

- Advertisement -

ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ ಶಾಲಾ ಮೈದಾನದಲ್ಲಿ ಆಯೋಜನೆ ಮಾಡಿದ್ದ ಆರೋಗ್ಯ ಶಿಬಿರ ಬೆಳಿಗ್ಗೆಯಿಂದ ಸಾವಿರಾರು ಮಂದಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿದರು. 40 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿ ಶಿಬಿರವನ್ನು ಅರ್ಥಪೂರ್ಣಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವೇದಿಕೆಗೆ ಆಗಮಿಸಿದ ಬಿ.ಎಸ್.ನಾಗರಾಜು ದೊಡ್ಡ ಕೇಕ್ ಕತ್ತರಿಸಿ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ನಂತರ ಮಾತನಾಡಿ ತಾಲ್ಲೂಕಿನಲ್ಲಿ ಕಳೆದ ನಾಲ್ಕು ವರ್ಷದಲ್ಲೇ ಜನರ ಪ್ರೀತಿ ಗಳಿಸಿದ್ದೇನೆ. ಜೆಡಿಎಸ್ ಅಭ್ಯರ್ಥಿಯಾಗಿ 43 ಸಾವಿರ ಮತ ಪಡೆದ ನಾನು ನಂಬರ್ ಗೇಮ್ ನಲ್ಲಿ ಸೋತಿದ್ದರೂ ಜನರ ಪ್ರೀತಿ ಗಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದಕ್ಕೆ ಇಂದಿನ ಕಾರ್ಯಕ್ರಮದಲ್ಲಿ ನೆರೆದ ಸಾವಿರಾರು ಜನರೇ ಸಾಕ್ಷಿ ಎಂದರು.

ಕೇವಲ ಚುನಾವಣೆಗೆ ನಾನು ಬಂದಿಲ್ಲ. ತಾಲ್ಲೂಕಿನ ರೈತನ ಮಗನಾಗಿ ಈ ಜನರಿಗಾಗಿ ದುಡಿಯಲು ಬಂದಿದ್ದೇನೆ. ಹೇಮಾವತಿ ಹೋರಾಟ ನಮ್ಮ ಮೊದಲ ಯಶಸ್ವಿ ಹೋರಾಟ. ಎನ್ ಡಿಎ ಮೈತ್ರಿ ಇಲ್ಲಿ ವಿರೋಧ ಪಕ್ಷವಾಗಿ ಜವಾಬ್ದಾರಿ ಕೆಲಸ ನಡೆಸಿದೆ. ನೀರಿಗಾಗಿ ನಿರಂತರ ಹೋರಾಟ ನಡೆಸುತ್ತೇನೆ. ಯಾವುದೇ ಕಾರಣಕ್ಕೂ ಲಿಂಕ್ ಕೆನಾಲ್ ಮಾಡಲು ಬಿಡುವುದಿಲ್ಲ ಎಂದ ಅವರು ದಿಲೀಪ್ ಅವರು ಸಹ ನಮ್ಮೊಂದಿಗೆ ಮೈತ್ರಿ ನಾಯಕರಾಗಿ ಜೊತೆಗಿದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಭ್ರಷ್ಟಾಚಾರ ವಿರುದ್ಧ ಸಹ ಹೊರಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

1001713439

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ನಾಗರಾಜು ಮತ್ತು ನಾನು ಒಗ್ಗೂಡಿ ಎನ್ ಡಿಎ ಮೂಲಕ ಒಂದು ಶಕ್ತಿಯಾಗಿ ತಾಲ್ಲೂಕಿನಲ್ಲಿ ವಿರೋಧ ಪಕ್ಷವಾಗಿ ಹೊರಹೊಮ್ಮುವ ಮೂಲಕ ಅಸಮರ್ಥ ಕೆಲಸಗಳ ವಿರುದ್ಧ ನಿಂತು ಜನಪರ ಕೆಲಸ ಮಾಡುತ್ತೇವೆ. ಚುನಾವಣೆಯಲ್ಲಿ ನಮ್ಮಿಬ್ಬರಿಗೂ ಆಶೀರ್ವಾದ ಸಿಗಲಿಲ್ಲ . ಆದರೂ ವಿರೋಧ ಪಕ್ಷವಾಗಿ ಒಟ್ಟಿಗೆ ಜನಪರ ನಿಲ್ಲುತ್ತೇವೆ. ಮೊದಲ ಹೋರಾಟ ಹೇಮಾವತಿ ಕೆನಾಲ್ ನಿಲ್ಲಿಸುವಲ್ಲಿ ಗೆದ್ದಿದ್ದೇವೆ. ಆದರೆ ಸಂಪೂರ್ಣ ಕಾಮಗಾರಿ ರದ್ದು ಮಾಡಲು ಹೋರಾಟ ನಡೆಸಲೇ ಬೇಕು ಎಂದ ಅವರು ನಾಗರಾಜು ಅವರಿಗೆ ದೇವರು ಆರೋಗ್ಯ ಕೊಟ್ಟು ಹೋರಾಟದ ಶಕ್ತಿ ಹೆಚ್ಚಲಿ ಎಂದು ಆಶಿಸಿದರು.

ಮುಖಂಡ ಎಂ.ಜಿ.ಶಿವಲಿಂಗಯ್ಯ ಮಾತನಾಡಿ ದಿಲೀಪ್ ಮತ್ತು ನಾಗರಾಜು ಅವರಿಗೆ ಬಂದ ಒಟ್ಟು ಮತಗಳು ಒಂದು ಲಕ್ಷ. ಈ ಮತಗಳು ಮುಂದಿನ ಚುನಾವಣೆಯಲ್ಲಿ ಒಗ್ಗೂಡಿ ಬರಲಿದೆ. 40 ಸಾವಿರ ಅಂತರದ ಗೆಲುವು ಎನ್ ಡಿಎ ಅಭ್ಯರ್ಥಿಯದ್ದಾಗಲಿದೆ. ಇದು ಐತಿಹಾಸಿಕ ಗೆಲುವು ಆಗಲಿದೆ ಎಂದರು.

1001713440

ಜೆಡಿಎಸ್ ಮುಖಂಡರಾದ ಕಳ್ಳಿಪಾಳ್ಯ ಲೋಕೇಶ್, ಜಿ.ಎನ್.ಬೆಟ್ಟಸ್ವಾಮಿ ಹಾಗೂ ಯೋಜನಂದಕುಮಾರ್ ಮಾತನಾಡಿ ನಾಗರಾಜು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ನಂತರ ಅಭಿಮಾನಿಗಳು ಬೃಹತ್ ಹೂವಿನಹಾರ ಹಾಕಿ, ಕಂಬಳಿ ಹೊದಿಸಿ ಕುರಿ ಮರಿಯನ್ನು ಕೊಡುಗೆಯಾಗಿ ನೀಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕವೀರಯ್ಯ, ಮುಖಂಡರಾದ ಸಿದ್ದಗಂಗಮ್ಮ, ಜಿ.ಡಿ.ಸುರೇಶಗೌಡ, ಕೆ.ಬಿ.ಕೃಷ್ಣಪ್ಪ, ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಜಿ.ಸಿ.ಕೃಷ್ಣಮೂರ್ತಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಮುಖಂಡರಾದ ಡಿ.ರಘು, ಜಿ.ಎಂ.ಶಿವಾನಂದ, ರುದ್ರೇಶ್, ಚಂದು, ವೆಂಕಟೇಶ್, ಗುಬ್ಬಿಹಟ್ಟಿ ಮಹಾಲಿಂಗಯ್ಯ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...