ಗುಬ್ಬಿ | ಕಡಬ ಗ್ರಾಪಂ ಉಪಾಧ್ಯಕ್ಷರಾಗಿ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಡಬ-1 ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.

- Advertisement -

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮೋಹನ್ ನಡೆಸಿಕೊಟ್ಟರು. ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ಕಲ್ಪನಾ ರಾಜೀನಾಮೆ ಸಲ್ಲಿಸಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ನಾಮಪತ್ರ ಸಲ್ಲಿಸಿದ್ದ ಹಿನ್ನಲೆ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನೂತನ ಉಪಾಧ್ಯಕ್ಷೆ ಪೂರ್ಣಿಮಾ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು. ನರೇಗಾ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದರು‌.

ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ, ಸದಸ್ಯರಾದ ಕಲ್ಪನಾ, ರಂಗನಾಥ್, ಶಿಲ್ಪ, ಲೋಕೇಶ್, ನಾಗರತ್ನ, ಪುಟ್ಟತಾಯಮ್ಮ, ಭರತ್ ಗೌಡ, ಗಿರೀಶ್, ಪುರುಷೋತ್ತಮ, ಕೆ.ಎಸ್.ಸತೀಶ್, ವೆಂಕಟರಂಗಯ್ಯ, ಪೂರ್ಣಲಕ್ಷ್ಮಿ, ಕವಿತ, ಸಿ.ಕೆ.ಗೌಡ, ಮುಖಂಡರಾದ ಚಿಕ್ಕ ತಿಮ್ಮಯ್ಯ, ರಾಜೇಶ್ ಗೌಡ, ಕಡಬ ಶಂಕರ್, ಮಂಜುನಾಥ್,ಕೆ.ಎಸ್.ರಮೇಶ್, ಪಾಂಡುರಂಗಯ್ಯ, ಪಿಡಿಓ ನಟರಾಜ್ ಸೇರಿದಂತೆ ಇತರರು ನೂತನ ಉಪಾಧ್ಯಕ್ಷೆ ಪೂರ್ಣಿಮಾ ಅವರಿಗೆ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...