ಗುಬ್ಬಿ | ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

Date:

Advertisements

ಪ್ರವಾಸಿ ತಾಣ ಪ್ರದೇಶಗಳಲ್ಲಿ ಒಂದಾದ ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಮೇಲಿನ ಘೋರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 30 ಜನರ ಹತ್ಯೆ ನಡೆದ ಘೋರ ಭಯೋತ್ಪಾದಕ ಕೃತ್ಯ ಖಂಡಿಸಿ ಗುಬ್ಬಿಯಲ್ಲಿ ಉಗ್ರರಿಗೆ ಗುಂಡಿಕ್ಕಿ ಕೊಲ್ಲುವಂತೆ ಘೋಷಣೆ ಕೂಗಿ ಪ್ರವಾಸಿಗರ ಸಾವಿಗೆ ಮೇಣದಬತ್ತಿ ಬೆಳಗಿಸಿ ಸಂತಾಪ ಸೂಚಿಸಿದರು.

ಕಳೆದ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ ಹಲವರು ಮೃತಪಟ್ಟ ಘಟನೆಯಿಂದ ಕಾಶ್ಮೀರ ಕಣಿವೆಯಲ್ಲಿ ಭೀತಿ ಅವರಿಸಿದ್ದು ರಾಷ್ಟ್ರವ್ಯಾಪ್ತಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗುಬ್ಬಿ ಪಟ್ಟಣದಲ್ಲಿ ನಾಗರೀಕರು ಗುಬ್ಬಿಯ ಕೋರ್ಟ್ ಸರ್ಕಲ್ ಬಳಿ ದಿಢೀರ್ ಜಮಾಯಿಸಿ ಮೇಣದ ಬತ್ತಿ ಹಿಡಿದು ಉಗ್ರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಜಮ್ಮು- ಕಾಶ್ಮೀರದ ರಾಜಧಾನಿ ಶ್ರೀನಗರದಿಂದ ಕೇವಲ 90 ಕಿಲೋ ಮೀಟರ್ ದೂರದ ಮಿನಿ ಸ್ವಿಜರ್ಲ್ಯಾಂಡ್ ಖ್ಯಾತಿಯ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಖಂಡನೀಯ. ಈ ಕೂಡಲೇ ಅಮಾಯಕ ಪ್ರವಾಸಿಗರ ಸಾವಿಗೆ ಕಾರಣವಾದ ಉಗ್ರರನ್ನು ಮುಲಾಜಿಲ್ಲದೆ ಸದೆಬಡಿಯುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

Advertisements

ಪಪಂ ಸದಸ್ಯ ಮಹಮ್ಮದ್ ಸಾದಿಕ್ ಮಾತನಾಡಿ ನೆಮ್ಮದಿ ನೆಲೆಸಿದ್ದ ಪ್ರವಾಸಿ ತಾಣದ ಮೇಲೆ ದಾಳಿ ನಡೆಸಿ ಅಶಾಂತಿ ನೆಲೆಸುವಂತೆ ಮಾಡಿದ ಉಗ್ರರನ್ನು ಹುಡುಕಿ ಗುಂಡಿಕ್ಕಿ ಕೊಲ್ಲುವ ಜೊತೆಗೆ ಮುಂದೆ ಇಂತಹ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಶಾಂತಿ ನೆಮ್ಮದಿ ಇದ್ದ ದೇಶದಲ್ಲಿ ಉಗ್ರ ಚಟುವಟಿಕೆ ಮಾಡುವ ಉಗ್ರರು ಮತ್ತೊಮ್ಮೆ ಭಾರತಕ್ಕೆ ನುಸುಳದಂತೆ ಎಚ್ಚರಿಕೆ ನೀಡಬೇಕಿದೆ. ಉಗ್ರರ ಮಟ್ಟ ಹಾಕಿ ಭಾರತ ಖಡಕ್ ಸಂದೇಶ ನೀಡಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಮುಖಂಡ ಜಿ.ಡಿ.ಸುರೇಶಗೌಡ ಮಾತನಾಡಿ ಪ್ರವಾಸಕ್ಕೆ ತೆರಳಿದ್ದ ಭಾರತೀಯರ ಮೇಲೆ ಧರ್ಮ ಆಧಾರಿತದ ದಾಳಿ ನಡೆಸಿ ಕ್ರೌರ್ಯ ಮೆರೆದ ಉಗ್ರರನ್ನು ಸಹಿಸುವ ಮಾತಿಲ್ಲ. ಕಳೆದ ದಿನ ನಡೆದ ಈ ದುರ್ಘಟನೆ ಭಾರತವನ್ನೇ ಬೆಚ್ಚಿ ಬೀಳಿಸಿದ ಕೃತ್ಯ ಕನ್ನಡಿಗರಿಗೆ ನೋವಿನ ಸಂಗತಿಯಾಗಿದೆ. ಕೃತ್ಯಕ್ಕೆ ಕಾರಣರಾದ ಉಗ್ರರನ್ನು ಸದೆಬಡಿಯಲು ಭಾರತ ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಜಿ.ಆರ್.ಶಿವಕುಮಾರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕಾಂತರಾಜು, ವೀರಶೈವ ಮಹಾಸಭಾ ಅಧ್ಯಕ್ಷ ಮಂಜುನಾಥ್, ಕ್ರೀಡಾ ಪ್ರೋತ್ಸಾಹಕ ಶಂಕರ್ ಕುಮಾರ್, ವೀರಶೈವ ಯುವಸೇನೆ ಅಧ್ಯಕ್ಷ ಅರ್ಜುನ್, ಪಿಎಲ್ ಡಿ ಬ್ಯಾಂಕ್ ಸದಸ್ಯರಾದ ನಾಗರಾಜು, ಡಿ.ರಘು, ಪಪಂ ಮಾಜಿ ಸದಸ್ಯ ವಿರೂಪಾಕ್ಷ, ವರ್ತಕರ ಸಂಘದ ಅಧ್ಯಕ್ಷ ದಯಾನಂದಮೂರ್ತಿ, ಲಯನ್ಸ್ ಕೀರ್ತಿರಾಜ್, ಮುಖಂಡರಾದ ಮಲ್ಲಿಕಾರ್ಜುನ್, ಪ್ರಮೋದ್, ಸುರುಗೇನಹಳ್ಳಿ ರಂಗನಾಥ್ ಸೇರಿದಂತೆ ಪಟ್ಟಣದ ನಾಗರೀಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X