ಗುಬ್ಬಿ | ಬೆಲವತ್ತ ಗ್ರಾಪಂ ಉಪಾಧ್ಯಕ್ಷರಾಗಿ ರಾಜಶೇಖರ್ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಬೆಲವತ್ತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಂದಿಹಳ್ಳಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆಯಾದರು.

- Advertisement -

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರು ಪ್ರಸಾದ್ ನಡೆಸಿಕೊಟ್ಟರು. ಸಾಮಾನ್ಯ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಆನಂದ್ ರಾಜೀನಾಮೆ ಸಲ್ಲಿಸಿದ್ದ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಜಶೇಖರ್ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ನೂತನ ಉಪಾಧ್ಯಕ್ಷ ಎನ್.ಬಿ.ರಾಜಶೇಖರ್ ಮಾತನಾಡಿ ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಸಂಸದ ವಿ.ಸೋಮಣ್ಣ ಅವರ ಮೂಲಕ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಸಹ ಜನಪ್ರತಿನಿಧಿಗಳ ಮೂಲಕ ತಂದು ಅಭಿವೃದ್ದಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಲತಾ ದಯಾನಂದ್ ಮಾತನಾಡಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಗುರುತಿಸುವ ಕೆಲಸ ಎಲ್ಲಾ ಸದಸ್ಯರ ಜೊತೆ ಸೇರಿ ನಡೆಸುತ್ತೇವೆ. ಅಭಿವೃದ್ದಿ ಕೆಲಸಗಳಿಗೆ ಪಕ್ಷಾತೀತ ನಿಲುವು ತಾಳಿ ಎಲ್ಲಾ ಜನ ಪ್ರತಿನಿಧಿಗಳ ಭೇಟಿ ಮಾಡಿ ಸವಲತ್ತು ತರುವ ಕೆಲಸ ಮಾಡುತ್ತೇವೆ. ಮೈಸೂರು ರಸ್ತೆಯ ನಮ್ಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮವನ್ನು ಏಕರೂಪದಲ್ಲಿ ಅಭಿವೃದ್ದಿ ಪಡಿಸಲು ಉಳಿದ ನಾಲ್ಕೈದು ತಿಂಗಳು ನಿರಂತರ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ನೂತನ ಉಪಾಧ್ಯಕ್ಷ ರಾಜಶೇಖರ್ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ವಿ ಎಸ್ ಎಸ್ ಎನ್ ಮಾಜಿ ಅಧ್ಯಕ್ಷ ವಸಂತಕುಮಾರ್, ಮುಖಂಡರಾದ ಮಂಡಿ ಬಾಬಣ್ಣ, ರಾಮೇಗೌಡ, ಭೀಮೇಶ್, ವಕೀಲ ರಮೇಶ್, ದಯಾನಂದ್ ಸೇರಿದಂತೆ ಎಲ್ಲಾ ಗ್ರಾಪಂ ಸದಸ್ಯರು, ಪಿಡಿಓ ಸಿದ್ದರಾಜು, ಪಂಚಾಯಿತಿ ಸಿಬ್ಬಂದಿಗಳು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...