ಗುಬ್ಬಿ | ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗುಡ್ಡದಹಳ್ಳಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆಯಾದರು.

- Advertisement -

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಪಂ ಇಓ ಶಿವಪ್ರಕಾಶ್ ನಡೆಸಿಕೊಟ್ಟರು. ಸಾಮಾನ್ಯ ಮಹಿಳೆ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಎಂ.ಎಸ್.ವರಲಕ್ಷ್ಮೀ ರಮೇಶ್ ಸಲ್ಲಿಸಿದ್ದ ರಾಜೀನಾಮೆ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಮ್ಮ ಅವರನ್ನು ಅಧ್ಯಕ್ಷರಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನೂತನ ಅಧ್ಯಕ್ಷೆ ರೇಣುಕಮ್ಮ ರಾಮಕೃಷ್ಣಯ್ಯ ಮಾತನಾಡಿ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಶಾಸಕ ವಾಸಣ್ಣ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಗ್ರಾಪಂ ಸದಸ್ಯ ಯತೀಶ್ ಮಾತನಾಡಿ ಬಿದರೆಯನ್ನು ಮಾದರಿ ಗ್ರಾಮ ಪಂಚಾಯಿತಿಯಾಗಿ ಗುರುತಿಸುವ ಕೆಲಸ ಎಲ್ಲಾ ಸದಸ್ಯರ ಜೊತೆ ಸೇರಿ ನಡೆಸುತ್ತೇವೆ. ಅಭಿವೃದ್ದಿ ಕೆಲಸಗಳಿಗೆ ಪಕ್ಷಾತೀತ ನಿಲುವು ತಾಳಿ ಎಲ್ಲಾ ಜನ ಪ್ರತಿನಿಧಿಗಳ ಭೇಟಿ ಮಾಡಿ ಸವಲತ್ತು ತರುವ ಕೆಲಸ ಮಾಡುತ್ತೇವೆ. ಶಾಸಕ ವಾಸಣ್ಣ ತೋರಿದ ಮಾರ್ಗದಲ್ಲಿ ಅಭಿವೃದ್ದಿ ಪಡಿಸಲು ಉಳಿದ ನಾಲ್ಕೈದು ತಿಂಗಳು ನಿರಂತರ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಪಂ ಉಪಾಧ್ಯಕ್ಷೆ ಸುಶೀಲ, ಸದಸ್ಯರಾದ ಶಿವಲಿಂಗಯ್ಯ, ಮೈಲಾರಯ್ಯ, ಪಾಂಡುರಂಗಯ್ಯ, ಕೃಷ್ಣಪ್ಪ, ಉಮೇಶ್, ಶಶಿಕಲಾ, ನೇತ್ರಾವತಿ, ಗೀತಾ, ಶಿವಣ್ಣ, ಉಮೇಶ್, ಮುಖಂಡರಾದ ಶಿವಾಜಿರಾವ್, ಕೃಷ್ಣೋಜಿರಾವ್, ಪಿಡಿಓ ಅಶೋಕ್ ಬಸವನಾಳ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...