ಗುಬ್ಬಿ | ಕೆಆರ್ ಎಸ್ ಪಕ್ಷದ ಪ್ರತಿಭಟನೆಗೆ ಕಂದಾಯ ನೌಕರರ ವಿರೋಧ

Date:

ತುಮಕೂರು ಜಿಲ್ಲಾಧಿಕಾರಿಗಳಿಗೆ ಭ್ರಷ್ಟಚಾರ ಹೆಸರಿನಲ್ಲಿ ಅಪಮಾನ ಮಾಡಿರುವ ಕೆಆರ್ ಎಸ್ ಪಕ್ಷ ವರ್ತನೆ ಖಂಡನೀಯ. ಜಿಲ್ಲಾಧಿಕಾರಿಗಳ ಪರವಾಗಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಘೋಷಣೆ ಹಾಕಿ ಸರ್ಕಾರಿ ನೌಕರರ ಸಂಘ, ಕಂದಾಯ ನೌಕರರ ಸಂಘ, ಗ್ರಾಮ ಆಡಳಿತಾಧಿಕಾರಿಗಳ ಸಂಘ, ಭೂ ಮಾಪಕರ ಸಂಘ ಹಾಗೂ ಗ್ರಾಮ ಸಹಾಯಕರ ಸಂಘದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

- Advertisement -

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ತಹಶೀಲ್ದಾರ್ ಆರತಿ.ಬಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಪ್ರಸಾದ್ ಯಾವುದೇ ಸಾಕ್ಷ್ಯಾಧಾರ ಇಲ್ಲದ ಆರೋಪ ಮಾಡಿದ್ದಲ್ಲದೆ ಉನ್ನತ ಅಧಿಕಾರಿಗಳಿಗೆ ಶಾಲು ಪೇಟೆ ರೇಷ್ಮೆ ಸೀರೆ ನೀಡಿ ನಾಗರೀಕ ಸನ್ಮಾನ ಮಾಡುವುದಾಗಿ ಹೇಳಿರುವ ಪಕ್ಷ ಸಣ್ಣ ನೌಕರರನ್ನು ಬಿಡುವುದಿಲ್ಲ. ಮಾನಸಿಕ ಹಿಂಸೆ ನೀಡಲು ಎಲ್ಲಾ ರೀತಿಯಲ್ಲಿ ಮುಂದಾಗುತ್ತಾರೆ. ಮೊಬೈಲ್ ಹಿಡಿದು ವಿಡಿಯೋ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ತೀವ್ರ ಹಿಂಸೆ ಇತ್ತೀಚಿಗೆ ಹೆಚ್ಚಾಗಿದೆ. ಆರ್ ಟಿಐ ಕಾರ್ಯಕರ್ತರ ಹೆಸರಿನಲ್ಲಿ ಸಹ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಿ ಸರ್ಕಾರಿ ನೌಕರರನ್ನು ಉಳಿಸಿ ಕೆಲಸ ಮಾಡಲು ಅನುವು ಮಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಕಂದಾಯ ನೌಕರರ ಸಂಘದ ಅಧ್ಯಕ್ಷ ಮೋಹನ್ ಮಾತನಾಡಿ ಮಹಿಳಾ ಸಿಬ್ಬಂದಿಗಳ ಕೆಲಸಕ್ಕೆ ಅಡ್ಡಿ ಪಡಿಸಿ ವಿಡಿಯೋ ಹಿಡಿದು ಫೇಸ್ ಬುಕ್ ಮೂಲಕ ನೇರ ಪ್ರಸಾರ ಮಾಡುವುದು ಸರಿಯಲ್ಲ. ರಾಜ್ಯದ ಹಲವು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿಗಳ ಮೇಲೆ ಇಲ್ಲಸಲ್ಲದ ದೂರು ಹೇಳಿ ವಿಡಿಯೋ ಮಾಡುವುದು ಮಾನಸಿಕ ಹಿಂಸೆ ಆಗಿದೆ ಎಂದು ಮೌಖಿಕ ದೂರು ಈಗಾಗಲೇ ಬಂದಿವೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈಗ ಜಿಲ್ಲೆಯ ದಂಡಾಧಿಕಾರಿ ಮೇಲೆ ಆರೋಪ ಮಾಡುತ್ತಿರುವುದು ತೀವ್ರ ಆಘಾತ ತಂದಿದೆ. ಮುಂದಿನ ದಿನದಲ್ಲಿ ಬಿ ಮತ್ತು ಸಿ ದರ್ಜೆ ನೌಕರರ ಗತಿ ಹೇಗೆ ಎಂಬ ಆಂತಕ ಎಲ್ಲರಲ್ಲೂ ಮನೆ ಮಾಡಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷೆ ಸುಮತಿ ಮಾತನಾಡಿ ಸಾರ್ವಜನಿಕ ಕೆಲಸ ಮಾಡುವ ಸರ್ಕಾರಿ ನೌಕರರನ್ನು ಸಾರ್ವಜನಿಕವಾಗಿಯೇ ಅಪಮಾನಿಸುವುದು ಎಷ್ಟು ಸರಿ. ಕಾನೂನು ಬದ್ಧ ಕೆಲಸ ಮಾಡುವಾಗ ಕೆಲ ನಿಷ್ಠುರ ಸನ್ನಿವೇಶ ಎದುರಾಗುತ್ತವೆ. ಈ ಸಮಯ ಭ್ರಷ್ಟಚಾರ ಆರೋಪ ಮಾಡುವುದು ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಭೂ ಮಾಪಕರ ಸಂಘದ ಅಧ್ಯಕ್ಷ ನಿಜಗುಣಪ್ಪ, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಸೇರಿದಂತೆ ಎಲ್ಲಾ ಸಂಘದ ಪದಾಧಿಕಾರಿಗಳು, ಸದಸ್ಯರು ಕಪ್ಪು ಪಟ್ಟಿ ಧರಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ತುಮಕೂರು | ಎಸ್‌ಎಸ್‌ಐಟಿ–ಸಿಎಂಟಿಐ ಒಪ್ಪಂದ: ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಸಂಶೋಧನೆಗೆ ಅವಕಾಶ

ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...

ರಾಯಚೂರು | ಕಸದ ರಾಶಿಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ

ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ...