ಗುಬ್ಬಿ | ಇರಕಸಂದ್ರ ಗ್ರಾಪಂ ಅಧ್ಯಕ್ಷರಾಗಿ ಸಿದ್ದರಾಜು, ಉಪಾಧ್ಯಕ್ಷರಾಗಿ ಲತಾಕುಮಾರಿ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಇರಕಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇರಕಸಂದ್ರ ಬ್ಲಾಕ್ 2 ಸದಸ್ಯ ಸಿದ್ದರಾಜು ಅಧ್ಯಕ್ಷರಾಗಿ, ಇರಕಸಂದ್ರ ಬ್ಲಾಕ್ 1 ಸದಸ್ಯೆ ಲತಾಕುಮಾರಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

- Advertisement -

ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಹಿಂದೆ ಅಧ್ಯಕ್ಷರಾಗಿದ್ದ ಪುಟ್ಟರಾಜು ಹಾಗೂ ಉಪಾಧ್ಯಕ್ಷರಾಗಿದ್ದ ಚೈತ್ರಾ ನೀಡಿದ ರಾಜೀನಾಮೆ ಹಿನ್ನಲೆ ತೆರವಾದ ಸಾಮಾನ್ಯ ಮೀಸಲು ಅಧ್ಯಕ್ಷ ಸ್ಥಾನ ಹಾಗೂ ಹಿಂದುಳಿದ ವರ್ಗ(ಅ) ಮಹಿಳಾ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿದ್ಧ ಸಿದ್ದರಾಜು ಅಧ್ಯಕ್ಷರಾಗಿ, ಲತಾಕುಮಾರಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

1001350920

ನೂತನ ಅಧ್ಯಕ್ಷ ಪುಟ್ಟರಾಜು ಮಾತನಾಡಿ ಪ್ರಮುಖ ವ್ಯಾಪಾರಿ ಕೇಂದ್ರ ಚೇಳೂರು ಸಮೀಪದ ಇರಕಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಶಾಸಕ ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಸರ್ಕಾರದಿಂದ ಅನುದಾನ ತಂದು ಕೆಲಸ ಮಾಡಿ ಅಭಿವೃದ್ದಿ ವಿಚಾರದಲ್ಲಿ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನೂತನ ಉಪಾಧ್ಯಕ್ಷೆ ಲತಾಕುಮಾರಿ ಮಾತನಾಡಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅವಶ್ಯ ಸೌಕರ್ಯ ಒದಗಿಸುತ್ತೇವೆ. ಆದಾಯದ ಮೂಲ ಹೆಚ್ಚಿಸಿ ತೆರಿಗೆ ಹಣದಲ್ಲಿ ಶಾಲೆ, ಆಸ್ಪತ್ರೆ, ಅಂಗನವಾಡಿ, ಕುಡಿಯುವ ನೀರಿನ ಘಟಕ, ರಸ್ತೆ ಚರಂಡಿ ಹೀಗೆ ಅನೇಕ ಸವಲತ್ತು ಒದಗಿಸಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾರ್ಪಾಡು ಮಾಡುತ್ತೇವೆ ಎಂದರು.

ನಂತರ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಸ್ಥಳೀಯ ಮುಖಂಡರಾದ ಐ.ಜಿ.ಲಿಂಗರಾಜು, ಬಿದರೆ ಯತೀಶ್, ಕೃಷ್ಣೋಜಿರಾವ್, ಶಿವಾಜಿರಾವ್, ಹನುಮಂತಪ್ಪ, ನಾಗರಾಜು, ಗಂಗಣ್ಣ, ದಯಾನಂದಗೌಡ, ಮೈಲಾರಿ ಪಿಡಿಓ ಶ್ಯಾಮಲ ಸೇರಿದಂತೆ ಎಲ್ಲಾ ಗ್ರಾಪಂ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...