ಗುಬ್ಬಿ | ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ತಾಲ್ಲೂಕು ಆಡಳಿತ ಸಜ್ಜು

Date:

 ಕನ್ನಡ ರಾಜ್ಯೋತ್ಸವ ಆಚರಣೆಗೆ ಮೆರೆಗು ತರುವ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಅರ್ಥಪೂರ್ಣ ಆಚರಣೆ ಮಾಡಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ತಹಶೀಲ್ದಾರ್ ಆರತಿ.ಬಿ ತಿಳಿಸಿದರು.

- Advertisement -

 ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಯಿಷಾ ತಾಸೀನ್ ಅವರ ನೇತೃತ್ವವಹಿಸಿದ್ದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ನಡೆದ ಸಿದ್ಧತೆ ಕುರಿತ ಚರ್ಚೆ ನಂತರ ಮಾತನಾಡಿದ ಅವರು ಪ್ರತಿ ವರ್ಷದಂತೆ ನಡೆಸುವ ರಾಜ್ಯೋತ್ಸವಕ್ಕೆ ಈ ಬಾರಿ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ಮೂಲಕ ಪಟ್ಟಣದಲ್ಲಿ ಭಾಷಾಭಿಮಾನ ಮೂಡಿಸಿ ಜೊತೆಗೆ ಡಿಸೆಂಬರ್ ಮಾಹೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ವೈಭವವಾಗಿ ಆಚರಿಸಿ ನಮ್ಮ ಮಾತೃಭಾಷೆ ಅಭಿಮಾನ ವ್ಯಕ್ತ ಪಡಿಸೋಣ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಕ್ರಮ ಆಯೋಜನೆ ಕುರಿತು ಚರ್ಚೆ ಮಾಡಲಾಯಿತು. ಪ್ರತಿ ವರ್ಷದಂತೆ ಬೃಹತ್ ವೇದಿಕೆ ನಿರ್ಮಾಣ ಮಾಡಿ ಶಾಸಕರ ಅಧ್ಯಕ್ಷತೆಯಲ್ಲಿ ಅರ್ಥಗರ್ಭಿತವಾಗಿ ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ 9 ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ ಅವರು ಶಿಕ್ಷಣ, ಕೃಷಿ, ಪರಿಸರ, ಕ್ರೀಡೆ, ವೈದ್ಯಕೀಯ, ರಂಗಭೂಮಿ, ಸಾಹಿತ್ಯ, ಜನಪದ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರ ಆಯ್ಕೆಗೆ ತಾಪಂ ಇಓ ಅವರ ಅಧ್ಯಕ್ಷತೆಯ ಸಮಿತಿ ರಚನೆ ಮಾಡಲಾಯಿತು.

ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪಹಾರ ವ್ಯವಸ್ಥೆ ಸಹ ಮಾಡಲು ಕೆಲ ಇಲಾಖೆಗೆ ವಹಿಸಲಾಯಿತು. ಕನ್ನಡದ ಬಗ್ಗೆ ವಿಶೇಷ ಉಪನ್ಯಾಸ ನೀಡಲು ಉತ್ತಮ ವಾಗ್ಮಿಗಳ ಆಯ್ಕೆಗೆ ಕೆಲ ಹೆಸರು ಪ್ರಸ್ತಾಪ ಮಾಡಲಾಯಿತು. ಅಂತಿಮ ನಿರ್ಧಾರ ಆಚರಣಾ ಸಮಿತಿ ತೀರ್ಮಾನಿಸಲಿದೆ. ಈ ಜೊತೆಗೆ ಎಲ್ಲಾ ಇಲಾಖೆಯ ಕಚೇರಿಗೆ ವಿದ್ಯುದ್ದೀಪಾಲಂಕರ ಮಾಡಲು ಸೂಚಿಸಲಾಯಿತು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ಕುಡಿಯುವ ನೀರು ಪೂರೈಕೆ, ಮೈದಾನ ಸ್ವಚ್ಚತೆ ಹಾಗೂ ಎಲ್ಲಾ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಆಯಾ ಇಲಾಖೆಗೆ ಸೂಚಿಸಲಾಯಿತು. 

ಕಸಾಪ ತಾಲ್ಲೂಕು ಅಧ್ಯಕ್ಷ ಯತೀಶ್ ಮಾತನಾಡಿ ಡಿಸೆಂಬರ್ 22 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಗುಬ್ಬಿ ಪಟ್ಟಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕರು ಸಮ್ಮೇಳನ ನಡೆಸಲು ಒಪ್ಪಿಗೆ ಸೂಚಿಸಿದ ಹಿನ್ನಲೆ ಪೂರ್ವಭಾವಿ ಸಭೆಯನ್ನು ಶೀಘ್ರದಲ್ಲಿ ಆಯೋಜಿಸಲಾಗುವುದು. ಎಲ್ಲಾ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಪಪಂ ಸದಸ್ಯ ಮಹಮದ್ ಸಾದಿಕ್, ಮುಖಂಡರಾದ ಸಲೀಂಪಾಷ, ಸಿ.ಆರ್.ಶಂಕರ್ ಕುಮಾರ್, ಜಿ.ಆರ್.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಪ್ರಸನ್ನ, ತಾಪಂ ಸಹಾಯಕ ನಿರ್ದೇಶಕ ಜಗನ್ನಾಥ್ ಗೌಡ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...