ಗುಬ್ಬಿ | ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ: ಶಿಕ್ಷಣ ಸಂಯೋಜಕ ಲೋಕೇಶ್

Date:

ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ ಸಮಾಜಕ್ಕೆ ಕೊಡುಗೆಯಾಗಿ ಕೊಡುವುದು ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಿಕ್ಷಣ ಸಂಯೋಜಕ ಲೋಕೇಶ್ ತಿಳಿಸಿದರು.

- Advertisement -

ಗುಬ್ಬಿ ತಾಲ್ಲೂಕಿನ ಹಿಂಡಿಸಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸ ಮಾತನಾಡಿ, ಮಕ್ಕಳ ಪ್ರಗತಿಯನ್ನು ಪೋಷಕರು ಶಾಲೆಗೆ ಭೆಟಿ ನೀಡಿ ಪ್ರಗತಿಯನ್ನು ವಿಚಾರಿಸಿ ಕೊಳ್ಳಬೇಕು, ಇಂದು ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಅಚಾರಗಳನ್ನು ವಿಚಾರಗಳನ್ನು ಪಾಲಿಸಬೇಕು. ಪೋಷಕರು ಮನೆಯಲ್ಲಿ ಅಭ್ಯಾಸ ಮಾಡುವ ವಾತಾವರಣ ರೂಪಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಹಿಂಡಿಸಿಗೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಂಗಳಗೌರಮ್ಮ ಮಾತನಾಡಿ,ಪೋಷಕರು ತಮ್ಮ ಮನೆಗಳನ್ನು ಗ್ರಂಥಾಲಯಗಳನ್ನಾಗಿಸಿದಾಗ ಮಾತ್ರ ಮಕ್ಕಳು ಸಮಾಜದಲ್ಲಿ ಉನ್ನತವಾದ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಗುತ್ತದೆ. ಆದರೆ, ಟಿವಿ ಧಾರಾವಾಹಿ ಹಾಗೂ ಮೊಬೈಲ್‌ಗಳ ಗೀಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಕೀವಿಮಾತು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯ ವೇಕಟೇಶ್ ಮಾತನಾಡಿ, ಶಾಲೆಗಳ ಅಲಿವು ಉಳಿವಿಗೆ ಪೋಷಕರು ಸಹಕರಿಸಬೇಕು. ಗ್ರಾಮ ಮಟ್ಟದಲ್ಲಿ ಪೋಷಕರು ಶಾಲೆಯೊಂದಿಗೆ ಒಡನಾಟ ಇಟ್ಟುಕೊಂಡಾಗ ಮಾತ್ರ ಕನ್ನಡ ಶಾಲೆಗಳು ಅಭಿವೃದ್ಧಿಯಾಗುತ್ತವೆ ಎಂದು ತಿಳಿಸಿದರು.

ಗುಬ್ಬಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕಿ ಹಾಗೂ ಮುಖ್ಯ ಶಿಕ್ಷಕಿ ಪದ್ಮಾವತಿ.ಜಿ ಮಾತನಾಡಿ, ಮಕ್ಕಳಿಗೆ ಪೋಷಕರು ಗುರಿ ನೀಡಿ, ಅದನ್ನು ತಲುಪು ವವರೆಗೂ ಪ್ರೋತ್ಸಾಹ ನೀಡಬೇಕು. ಶಿಕ್ಷಕರಿಂದ ಗುಣಮಟ್ಟದ ಬೋಧನೆ, ವಿದ್ಯಾರ್ಥಿಗಳಿಂದ ಓದು, ಪಾಲಕರಿಂದ ಪರಿಶೀಲನೆ ಸರಿಯಾದ ರೀತಿಯಲ್ಲಿ ನಡೆದಲ್ಲಿ ಮಾತ್ರ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ, ನಿಜನಂದಮೂರ್ತಿ, ಸಿ ಆರ್ ಸಿ ಧರಣೇಶ್ ಟಿ ಎಂ , ಸಾವಿತ್ರಿಬಾಯಿಪುಲೆ ಸಂಘದ ಕಾರ್ಯದರ್ಶಿ ಮಂಜುಳ, ಎಸ್ ಡಿ ಎಂ ಸಿ ಅಧ್ಯಕ್ಷ ಪಾತಯ್ಯ, ವಿಎಸ್ ಎಸ್ ಎನ್ ನಿರ್ದೇಶಕಿ ಪಾರ್ವತಮ್ಮ, ಸಹಶಿಕ್ಷಕರಾದ ಮಂಜುಳ ,ಮಮತಾ, ಪ್ರಶಾಂತ್, ಅನುಪಮ, ವೀಣಾ, ಅಶಾ, ಜಯಮ್ಮ ಹಾಗೂ ಪೋಷಕರು ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...