ಗುಬ್ಬಿ | ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯಿಸಿ ಅ. 23ರಂದು ಹಿತ ರಕ್ಷಣಾ ಸಮಿತಿ ಧರಣಿ

Date:

 ಅಮೃತ ಮಹೋತ್ಸವ ಆಚರಣೆಗೆ ಸಮೀಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಮುಂಭಾಗ ಇದ್ದ ಕಾಂಪೌಂಡ್ ಬಿದ್ದು 20 ವರ್ಷ ಕಳೆದರೂ ಯಾವ ಜನಪ್ರತಿನಿಧಿ ಇತ್ತ ಕಡೆ ಗಮನಹರಿಸಿದ ಹಿನ್ನಲೆ ಗುಬ್ಬಿ ಪಟ್ಟಣ ಹಿತ ರಕ್ಷಣಾ ಸಮಿತಿ ವತಿಯಿಂದ ಇದೇ ತಿಂಗಳ 23 ರಂದು ಧರಣಿ ನಡೆಸಿ ಸಾರ್ವಜನಿಕರ ಗಮನ ಸೆಳೆಯಲಿದೆ ಎಂದು ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ಎಚ್.ಡಿ.ಯಲ್ಲಪ್ಪ ತಿಳಿಸಿದರು.

- Advertisement -

ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು 1952 ರಲ್ಲಿ ಮೈಸೂರು ಅರಸರಿಂದ ಆರಂಭವಾದ ಸರ್ಕಾರಿ ಈ ಶಾಲೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಕಾದಿದೆ. ಆದರೆ ಮೂಲಭೂತ ಅವಶ್ಯಕತೆಗಳ ಪೈಕಿ ಕಾಂಪೌಂಡ್ ಇಲ್ಲದೆ ಶಾಲಾ ಕಟ್ಟಡ ಹಾಳು ಸುರಿದಿದೆ. ಈ ತಡೆಗೋಡೆಗೆ ಹಲವು ಬಾರಿ ಸಾರ್ವಜನಿಕರು ಬೇಡಿಕೆ ಸಲ್ಲಿಸಿದ್ದರೂ ನಿರ್ಮಾಣ ಮಾಡಿಲ್ಲ. ಈ ನಿಟ್ಟಿನಲ್ಲಿ ದಿವ್ಯ ನಿರ್ಲಕ್ಷ್ಯ ಬಗ್ಗೆ ಸಾರ್ವಜನಿಕರ ಗಮನ ಸೆಳೆಯಲು ಅ.23 ರಂದು ಬೆಳಿಗ್ಗೆ 10 ಗಂಟೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ಕಾರಿ ಕಾಲೇಜು ಮತ್ತು ಪ್ರೌಢಶಾಲೆ ಈಗಾಗಲೇ ದಾಖಲಾತಿ ಕೊರತೆ ಎದುರಿಸುತ್ತಿದೆ. ತಡೆ ಗೋಡೆ ಇಲ್ಲದೆ ಶಾಲಾ ಮೈದಾನಕ್ಕೆ ಬರುವ ಎಲ್ಲಾ ವಾಹನಗಳ ಕರ್ಕಶ ಶಬ್ದ ಮಕ್ಕಳ ಭವಿಷ್ಯಕ್ಕೆ ಪೆಟ್ಟು ನೀಡಿದೆ. ಮಕ್ಕಳಲ್ಲಿ ಏಕಾಗ್ರತೆ ಕೊರತೆಗೂ ವಾಹನಗಳ ಸಂಚಾರ ಕಾರಣವಾಗಿದೆ. ಇದೆಲ್ಲಕ್ಕೂ ಕಾಂಪೌಂಡ್ ನಿರ್ಮಾಣ ಅಗತ್ಯವಿದೆ. ಜನಪ್ರತಿನಿಧಿಗಳು ಕಾಳಜಿ ವಹಿಸಿಲ್ಲ. ಜತೆಗೆ ಶಿಕ್ಷಣ ಇಲಾಖೆ ತೋರುತ್ತಿರುವ ಜಾಣ ಮೌನ ಹಾಗೂ ಜಾಣ ಕುರುಡು ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ನಿಟ್ಟಿನಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಈ ಸಾಮಾಜಿಕ ಕಾರ್ಯಕ್ಕೆ ಸಾಮಾಜಿಕ ಸಂಘ ಸಂಸ್ಥೆಗಳು, ಹಳೇ ವಿದ್ಯಾರ್ಥಿಗಳು ಹಾಗೂ ಸಮಾಜ ಸೇವಕರು ಸಾಥ್ ನೀಡಬೇಕೆಂದು ಮನವಿ ಮಾಡಿದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...