ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ತಾಪಂ ಇಓ ಶಿವಪ್ರಕಾಶ್ ತಿಳಿಸಿದರು.
ಗುಬ್ಬಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಆಯೋಗ, ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ಎಸ್ಎಸ್ ವತಿಯಿಂದ ಹಮ್ಮಿಕೊಂಡಿದ್ದ ಮತದಾನರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ವಿದ್ಯಾರ್ಥಿಯು ಹಳ್ಳಿಗಳಲ್ಲಿ ಮತದಾನದ ಬಗ್ಗೆ ತಿಳಿಹೇಳಬೇಕು. ಎಲ್ಲರೂ ಸಾಮಾಜಿಕವಾಗಿ ತಮ್ಮ ಈ ಕರ್ತವ್ಯ ನಿರ್ವಹಿಸಬೇಕು ಎಂದರು.
ಪ್ರತಿಜ್ಞಾವಿಧಿ ಆಲಿಸಿದ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಪ್ರಾಮಾಣಿಕವಾಗಿ ಜವಾಬ್ದಾರಿ ಅರಿತು ಕಾರ್ಯ ಮಾಡಬೇಕು ಎಂದ ಅವರು ಮತದಾರ ಜಾಗೃತಿ ಆಗದಿದ್ದರೆ ದೇಶದ ಭವಿಷ್ಯ ಸರಿಯಾದ ದಿಕ್ಕಿನಲ್ಲಿ ಸಾಗುವುದಿಲ್ಲ. ನಮ್ಮ ದೇಶದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿಯಾಗಿದೆ. ಮತದಾನ ಹಕ್ಕು 18 ವರ್ಷ ತುಂಬಿದ ಯುವಕ ಯುವತಿಯರು ಕೂಡಲೇ ತಮ್ಮ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಭೇಟಿ ಮಾಡಿ ಹೆಸರು ನೋಂದಾಯಿಸಿಕೊಳ್ಳಿ. ಹಾಗೆಯೇ ಹೆಚ್ಚಿನ ಮಾಹಿತಿಗೆ ಸಾಮಾಜಿಕ ಜಾಲತಾಣ ಬಳಸಿ ವಿಚಾರ ತಿಳಿಯಬಹುದಾಗಿದೆ ಎಂದು ಹೇಳಿದರು.
ಪ್ರಾಂಶುಪಾಲ ಡಾ.ಪ್ರಸನ್ನಕುಮಾರ್ ಸೇರಿದಂತೆ ಎಲ್ಲಾ ಉಪನ್ಯಾಸಕರು ಇದ್ದರು.