ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ತುಳಸಿದಾಸ್ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುರಿಗೇನಹಳ್ಳಿ ತುಳಸಿದಾಸ್ ಅವಿರೋಧ ಆಯ್ಕೆಯಾದರು.

- Advertisement -

ಪಂಚಾಯಿತಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ ಅಶ್ವತ್ತೇಗೌಡ ನೀಡಿದ ರಾಜೀನಾಮೆ ಹಿನ್ನಲೆ ತೆರವಾದ ಸಾಮಾನ್ಯ ಮೀಸಲು ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿ ಸುರಿಗೇನಹಳ್ಳಿ ಸದಸ್ಯ ತುಳಸಿದಾಸ್ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನೂತನ ಅಧ್ಯಕ್ಷ ತುಳಸಿದಾಸ್ ಮಾತನಾಡಿ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ. ಅಭಿವೃದ್ದಿ ವಿಚಾರದಲ್ಲಿ ಒಕ್ಕೊರಲಿನ ಅಭಿಪ್ರಾಯ ಪಡೆದು ಮಾದರಿ ಗ್ರಾಮ ಪಂಚಾಯಿತಿ ಹೆಗ್ಗಳಿಕೆಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗ್ರಾಮೀಣ ಭಾಗದಲ್ಲಿ ಅವಶ್ಯ ರಸ್ತೆ, ನೀರು, ಬೀದಿ ದೀಪ ಒದಗಿಸಿ ಚುನಾಯಿತ ಪ್ರತಿನಿಧಿಗಳ ಮೂಲಕ ಸರ್ಕಾರದ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಪಂ ಉಪಾಧ್ಯಕ್ಷ ರಂಗರಾಜು, ಸದಸ್ಯರಾದ ಗಂಗನರಸಮ್ಮ, ಜಯಮ್ಮ, ಶಾಂತಲ, ವೆಂಕಟಲಕ್ಷ್ಮಮ್ಮ, ಅಂಬುಜಮ್ಮ, ನೀಲಮ್ಮ, ಧನಲಕ್ಷ್ಮಿ, ಅನಿತಾ, ಶಿವಣ್ಣ, ಶ್ವೇತಾ, ಮಂಜಮ್ಮ, ರಾಮೇಗೌಡ, ನಾಗರಾಜು, ಪ್ರೇಮಾ, ಸೈಯದ್ ಖಲಂದರ್, ಭಾರತಿ, ಮುಖಂಡರಾದ ಸು.ಮುನಿಯಪ್ಪ, ಕೆ.ಸಿ.ಗಿರೀಶ್ ಪಾಂಡುರಂಗಯ್ಯ, ದಿವಾಕರ್, ರಂಗನಾಥ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...