ಗುಬ್ಬಿ | ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

Date:

ಗುಬ್ಬಿ ಪಟ್ಟಣದ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಹೊಂದಿಕೊಂಡಂತೆ ನೂತನವಾಗಿ ನಿರ್ಮಾಣವಾದ ಇಂಡಿಯನ್ ಆಯಿಲ್ ಕಂಪೆನಿಯ ಶ್ರೀ ರಾಘವೇಂದ್ರ ಫ್ಯೂಯಲ್ ಸೆಂಟರ್ ಅನ್ನು ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.

- Advertisement -

ಚೇಳೂರು ರಸ್ತೆಗೆ ಅಡ್ಡಲಾಗಿ ಬರುವ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆ ಮೇಲ್ಸೇತುವೆ ಪಕ್ಕದಲ್ಲಿ ಆರಂಭವಾದ ಈ ಪೆಟ್ರೋಲ್ ಬಂಕ್ ಉದ್ಘಾಟಿಸಿ ಮಾತನಾಡಿದ ಕೇಂದ್ರದ ಜಲಶಕ್ತಿ ಸಚಿವ ವಿ.ಸೋಮಣ್ಣ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಅತ್ಯವಶ್ಯಕವಾದ ಪೆಟ್ರೋಲ್ ಮತ್ತು ಡೀಸೆಲ್ ದೊರೆಯುವ ವ್ಯವಸ್ಥೆ ಮಾಡಿರುವುದು ಪೂರಕವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚತುಷ್ಪಥ ರಸ್ತೆ ಕಾಮಗಾರಿ ಈ ಹೆದ್ದಾರಿಗೆ ಅವಶ್ಯವಿತ್ತು. ವಾಹನ ದಟ್ಟಣೆ ಹೆಚ್ಚಾದಂತೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಜೊತೆ ನಗರ ಪಟ್ಟಣಗಳ ಹೊರ ವಲಯದಲ್ಲಿ ಸರ್ವಿಸ್ ರಸ್ತೆ ಬೃಹತ್ ವಾಹನ ಸಂಚಾರಕ್ಕೆ ಮಾರ್ಗವಾಗಿದೆ. ಇಂತಹ ಮಾರ್ಗ ಮಧ್ಯೆ ಪೆಟ್ರೋಲ್ ಡೀಸೆಲ್ ಒದಗಿಸುವ ಕೆಲಸ ಈ ಬಂಕ್ ಮಾಡಲಿ ಎಂದು ಮಾಲೀಕ ಯತೀಶ್ ಅವರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಬಿಜೆಪಿ ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್, ಪಿ.ಬಿ.ಚಂದ್ರಶೇಖರಬಾಬು, ಜೆಡಿಎಸ್ ಮುಖಂಡರಾದ ಕಳ್ಳಿಪಾಳ್ಯ ಲೋಕೇಶ್, ಜಿ.ಎನ್.ಬೆಟ್ಟಸ್ವಾಮಿ, ಜಿ.ಡಿ.ಸುರೇಶಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಪಂಚಾಕ್ಷರಿ, ಎಚ್.ಟಿ.ಭೈರಪ್ಪ, ಎಸ್.ವಿಜಯಕುಮಾರ್, ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಆರ್.ಶಿವಕುಮಾರ್, ಬಂಕ್ ಮಾಲೀಕ ಚನ್ನಶೆಟ್ಟಿಹಳ್ಳಿ ಯತೀಶ್, ಚನ್ನಬಸವಯ್ಯ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...