ಗುಬ್ಬಿ | ಕೆ.ಎನ್.ರಾಜಣ್ಣ ಪರ ಬ್ಯಾಟಿಂಗ್ ಮಾಡಿದ ವಾಲ್ಮೀಕಿ ಸಮುದಾಯದ ಮುಖಂಡರು

Date:

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿದ್ದು ಖಂಡನೀಯ ಎಂದು ರಾಜಣ್ಣ ಅವರ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ತಾಲ್ಲೂಕು ವಾಲ್ಮೀಕಿ ಮುಖಂಡರು ಕಾಂಗ್ರೆಸ್ ನಡೆ ಸಂಪೂರ್ಣ ದಲಿತ ವಿರೋಧಿ ಎನಿಸಿದೆ ಎಂದು ಗುಡುಗಿದರು.

- Advertisement -

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ದಲಿತರಿಗೆ ಶಿಕ್ಷೆ ನೀಡಿದೆ. ದಲಿತರು ಸತ್ಯ ಹೇಳುವಂತಿಲ್ಲವೇ, ಸದಾಕಾಲ ದೀನ ದಲಿತರ ಪರ ನಿಲ್ಲುವ ರಾಜಣ್ಣ ಅವರ ವ್ಯಕ್ತಿತ್ವ ಎಲ್ಲರಿಗೂ ತಿಳಿದಿದೆ. ನೇರವಾದಿ ಮತಪಟ್ಟಿಯ ಚಿತ್ರಣ ಸಿದ್ಧವಾದಾಗ ನಮ್ಮದೇ ಸರ್ಕಾರ ಇತ್ತು. ಅಂದು ಎಲ್ಲವನ್ನೂ ಗಮನಿಸಬೇಕಿತ್ತು ಎಂದು ನೇರವಾಗಿ ಸತ್ಯ ಹೇಳಿದ್ದಕ್ಕೆ ವಜಾ ಶಿಕ್ಷೆ ನೀಡಿದ್ದು ಸರಿಯಲ್ಲ. ವಾಲ್ಮೀಕಿ ಸಮಾಜವನ್ನು ಕಡೆಗಣಿಸಿದ್ದಾರೆ. ನಮ್ಮ ಜನಾಂಗದ ಬೆಳವಣಿಗೆ ಸಹಿಸದ ಕೆಲವರ ಕುತಂತ್ರಕ್ಕೆ ನಾಗೇಂದ್ರ ಅವರು ಮೊದಲ ಬಲಿ. ಈಗ ರಾಜಣ್ಣ ಅವರು ಎರಡನೇ ಬಲಿ. ಈ ಅಸಹನೆ ನಡವಳಿಕೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ವಾಲ್ಮೀಕಿ ಸಮಾಜ ಎಲ್ಲಡೆ ಪ್ರತಿಭಟನೆ ನಡೆಸಲಿದೆ. ಗುಬ್ಬಿ ತಾಲ್ಲೂಕಿನಲ್ಲಿ ಸಹ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ. ಶೀಘ್ರದಲ್ಲಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಲಕ್ಷ್ಮೀರಂಗಯ್ಯ ಮಾತನಾಡಿ ವಾಲ್ಮೀಕಿ ಸಮಾಜಕ್ಕೆ ಮಾಡಿದ ಅಪಮಾನ ಇದಾಗಿದೆ. ಕಾಂಗ್ರೆಸ್ ದಲಿತ ಪರ ನಿಲ್ಲುತ್ತಿಲ್ಲ. ದಲಿತ ಮುಖಂಡರ ಬೆಳವಣಿಗೆ ಸಹಿಸುತ್ತಿಲ್ಲ. ಕುತಂತ್ರ ನಡೆಸಿದ ಮಹಾನಾಯಕರಿಗೆ ಸಮಾಜ ತಕ್ಕ ಪಾಠ ಕಲಿಸಲಿದೆ. ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಲಿದೆ. ರಾಜಣ್ಣ ಅವರಿಗೆ ಆಗಿರುವ ಅನ್ಯಾಯ ವಿರುದ್ಧ ಪ್ರತಿಭಟನೆ ಪಕ್ಷಾತೀತವಾಗಿ ನಡೆಸಲಾಗುವುದು. ದಲಿತ ಪರ ಎಲ್ಲಾ ಸಂಘಟನೆ ಹೋರಾಟಕ್ಕೆ ಧುಮ್ಮುಕ್ಕಲಿದೆ ಎಂದರು.

ನಾಯಕ ಸಮಾಜದ ಅಧ್ಯಕ್ಷ ಸಾಕಸಂದ್ರ ದೇವರಾಜ್ ಮಾತನಾಡಿ ಎಲ್ಲಾ ಜಾತಿ ಧರ್ಮದವರನ್ನು ತೆಕ್ಕೆಗೆ ತೆಗೆದುಕೊಂಡು ಕೆಲಸ ಮಾಡುವ ರಾಜಣ್ಣ ಅವರು ಇಂದಿಗೂ ಸಾಮಾನ್ಯ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಇಲ್ಲಿಯೇ ಅವರ ಕಾರ್ಯಕ್ಕೆ ತಕ್ಕ ಉತ್ತರ ಸಿಕ್ಕಿದೆ. ಕಾಣದ ಕೈಗಳು ನಡೆಸಿದ ಕುತಂತ್ರಕ್ಕೆ ರಾಜಣ್ಣ ಅವರು ಬಲಿಯಾಗಿದ್ದಾರೆ. ತಲೆದಂಡ ಎಂದು ಖುಷಿ ಪಡುವವರು ತಿಳಿಸಿಕೊಳ್ಳಬೇಕು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಲೆದಂಡ ಎಂದು ಅರ್ಥ ಮಾಡಿಕೊಳ್ಳಬೇಕು. ಗುಬ್ಬಿ ತಾಲ್ಲೂಕಿನಲ್ಲಿ ಉಗ್ರ ಪ್ರತಿಭಟನೆಗೆ ದಿನಾಂಕ ನಿಗದಿ ಮಾಡಲಿದ್ದೇವೆ. ರಾಜಣ್ಣ ಪರ ವಾಲ್ಮೀಕಿ ಸಮಾಜ ನಿಲ್ಲಲಿದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಶಿವಣ್ಣ, ಮುಖಂಡರಾದ ಎಚ್.ಡಿ.ಯಲ್ಲಪ್ಪ, ಶಂಕರ್, ನಾಗೇಶ್, ರಾಜಶೇಖರ್, ವಿಶ್ವನಾಥ್, ಚೇತನ್ ನಾಯಕ್, ವಿದ್ಯಾ ಸಾಗರ್, ಮಂಜುನಾಥ್, ಕಂಚಿರಾಯಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...