ಗುಬ್ಬಿ | ವಿಎಸ್ಎಸ್ಎನ್ ಹೆಸರು ಬದಲಾವಣೆ : ತಾರಕ್ಕಕೇರಿದ ಮಾತಿನ ಚಕಮಕಿ

Date:

Advertisements

ಕೃಷಿ ಪತ್ತಿನ ಸಹಕಾರ ಸಂಘದ ಹೆಸರು ಬದಲಾಯಿಸಿದ್ದಕ್ಕೆ ಗ್ರಾಮಸ್ಥರ ನಡುವೆ ತೀವ್ರ ಜಟಾಪಟಿ ನಡೆದು ಎರಡೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆಯಿತು.

ಜಿ.ಹೊಸಹಳ್ಳಿ ಗ್ರಾಮದಲ್ಲಿರುವ ಮಡೇನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ಎಂಬ ಹೆಸರು ಸುಮಾರು 50 ವರ್ಷಗಳ ಹಿಂದಿನಿಂದಲೂ ನಡೆದು ಬಂದಿದೆ. ದಿಢೀರ್ ಆಗಿ ಮಡೇನಹಳ್ಳಿ ಹೆಸರು ಕೈ ಬಿಟ್ಟು ಜಿ.ಹೊಸಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ಎಂದು ಬದಲಾಯಿಸಿದ್ದಕ್ಕೆ ಮಡೇನಹಳ್ಳಿ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕಚೇರಿ ಬಳಿ ನಡೆದಿದ್ದ ಸರ್ವ ಸದಸ್ಯರ ಸಭೆಯಲ್ಲಿ ಮಾತಿನ ಸಮರ ಸಾರಿದರು.

ಬ್ಯಾಡಗೆರೆ, ತೊರೆಹಳ್ಳಿ ಕಟ್ಟಿಗೆನಹಳ್ಳಿ ಸೇರಿದಂತೆ ಮಡೇನಹಳ್ಳಿ, ಜಿ.ಹೊಸಹಳ್ಳಿ ಗ್ರಾಮಸ್ಥರ ಹಿತ ಕಾಯಲು ನಡೆದು ಬಂದ ವಿಎಸ್ಎಸ್ಎನ್ ಸೊಸೈಟಿ ಹೆಸರು ಬದಲಾವಣೆ ಬೇಕಿಲ್ಲ. ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಹೊಸಹಳ್ಳಿ ಹೆಸರಿನಲ್ಲಿ ಮತ್ತೊಂದು ಸಹಕಾರ ಸಂಘ ಮಾಡಿಕೊಳ್ಳಲಿ ಎಂದು ವಾದ ನಡೆಯಿತು. ಮಾತಿನ ಚಕಮಕಿ ತಾರಕ್ಕೇರಿ ಒಬ್ಬರನ್ನೊಬ್ಬರು ನೂಕಿ ತಳ್ಳಾಟ ನಡೆಸಿದರು.

ಸರ್ಕಾರದ ನಿಯಮಾನುಸಾರ ಗ್ರಾಮ ಪಂಚಾಯಿತಿ ಕೇಂದ್ರದ ಸಂಘಕ್ಕೆ ಜಿ.ಹೊಸಹಳ್ಳಿ ಹೆಸರು ಇಡಲು 2023 ರಲ್ಲಿ ತೀರ್ಮಾನಿಸಲಾಗಿತ್ತು ಎಂದು ಕೆಲವರ ವಾದ ನಡೆಸಿದರು. ಒಟ್ಟಾರೆ ಮಾತಿನ ಚಕಮಕಿ ತಾರಕ್ಕೆಕೇರುವ ಮುನ್ನ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಇಂದಿನ ಸರ್ವ ಸದಸ್ಯರ ಸಭೆ ನಡೆಸಿ ಮುಂದಿನ ಎರಡು ತಿಂಗಳ ನಂತರ ಹೆಸರು ನಾಮಕರಣ ವಿಚಾರಕ್ಕೆ ಸಭೆ ನಡೆಸಿ ತೀರ್ಮಾನಿಸಲು ಒಪ್ಪಿದ ಬಳಿಕ ಸದಸ್ಯರ ಸಭೆ ಶಾಂತಿಯುತವಾಗಿ ಮುಂದುವರಿಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X