ಗುಬ್ಬಿ | ಜಾತಿ ಕಾಲಂನಲ್ಲಿ ಹೊಲಯ ಎಂದು ಬರೆಸಿ : ಟಿ. ಈರಣ್ಣ

Date:

 ಜಾತಿ ಗಣತಿಯಲ್ಲಿ ಗುಬ್ಬಿ ತಾಲ್ಲೂಕಿನ ಛಲವಾದಿ ಸಮುದಾಯದವರು  ಜಾತಿ ಕಾಲಂನಲ್ಲಿ ‘ಹೊಲೆಯ’ ಎಂದು ಬರೆಸಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಟಿ. ಈರಣ್ಣ ತಿಳಿಸಿದರು.

- Advertisement -

 ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು  ಛಲವಾದಿ ಮಹಾಸಭಾ ವತಿಯಿಂದ ಆಯೋಜಿಸಿದ್ದ ಒಳ ಮೀಸಲಾತಿ ಮತ್ತು ಜಾತಿಗಣತಿ ಸಮಾಲೋಚನ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಒಳ ಮೀಸಲಾತಿ ವರ್ಗಿಕರಣಕ್ಕೆ ಗಣತಿಗೆ ಅವಕಾಶ ಕಲ್ಪಿಸಿದ್ದು, ಇದರಲ್ಲಿ ಬಲಗೈ ಸಮುದಾಯಕ್ಕೆ 37 ಉಪಜಾತಿಗಳು ಸೇರಲಿವೆ. ಮೇ 5 ರಿಂದ ನಡೆಯಲಿರುವ ಜಾತಿ ಮತ್ತು ಜನಗಣತಿಯಲ್ಲಿ ಉಪಜಾತಿಯ ಅವಕಾಶವನ್ನು ಮಾಡಿಕೊಟ್ಟಿದೆ. ಜಾತಿ ಕಾಲಂ ನಲ್ಲಿ ಹೊಲೆಯ ಎಂದು ಬರೆಸಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನಡೆದ ಸಭೆಗಳಲ್ಲಿ ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ. ಅದರಂತೆ ಪ್ರತಿಯೊಬ್ಬರು ಹೊಲೆಯ ಎಂದು ಬರೆಸಬೇಕು. ಈ ಜಾತಿ ಜನಗಣತಿ 3 ಹಂತಗಳಲ್ಲಿ ನಡೆಯಲ್ಲಿದ್ದು, ಮೊದಲನೇ ಹಂತವು ಮೇ 5ರಿಂದ ಮೇ 17 ರವರೆಗೆ ನಡೆಯುತ್ತದೆ. ಇದರಲ್ಲಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಾರೆ. ಎರಡನೇ ಹಂತವು ಮೇ 19 ರಿಂದ 21 ರವರೆಗೆ ನಡೆಯಲಿದೆ ಇದರಲ್ಲಿ ಪ್ರದೇಶವಾರು ಮತಗಟ್ಟೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ ಸಮೀಕ್ಷೆ ಮಾಡುತ್ತಾರೆ. ಹಾಗೇ ಮೂರನೇ ಹಂತವು ಮೇ 19 ರಿಂದ 23 ರವರೆಗೆ ಆನ್ ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ನಮ್ಮ ಸಮಿತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು ಗ್ರಾಮಗಳಲ್ಲಿಯೂ ಮನೆ ಮನೆಗೆ ಭೇಟಿ ನೀಡಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1001379161

ತಾಲೂಕು ಛಲವಾದಿ ಮಹಾಸಭಾದ ಉಪಾಧ್ಯಕ್ಷ ಕಿಟ್ಟದಕುಪ್ಪೆ ನಾಗರಾಜು ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಪದಾಧಿಕಾರಿಗಳು ಮಾಡಬೇಕಾಗಿದೆ ಎಂದರು.

ನಿಟ್ಟೂರು ಹೋಬಳಿ ಘಟಕದ ಅಧ್ಯಕ್ಷ ಗೋಪಾಲ್ ಮಾತನಾಡಿ, ಜಾತಿಗಣತಿ ಮಾಡುವ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ತಾವುಗಳು ಖುದ್ದಾಗಿ ಇದ್ದು ಪೆನ್ನಿನಲ್ಲಿ ಹೊಲೆಯ ಎಂದು ಬರೆಯುವುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

  ಸಭೆಯಲ್ಲಿ ತಾಲೂಕು ಉಪಾಧ್ಯಕ್ಷರು ಸಚಿನ್, ಇರಕಸಂದ್ರ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಮಧು, ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡರು ಕೃಷ್ಣಪ್ಪ, ಆನಂದ್, ಸೋಮಣ್ಣ, ರವೀಶ್, ಜಗದೀಶ್, ಹೋಬಳಿ ಘಟಕದ ಅಧ್ಯಕ್ಷರಾದ, ಮುನಿರಾಜು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...